IND vs WI T20 World Cup: ನೇರಪ್ರಸಾರ, ಸಮಯ, ಹವಾಮಾನ, ಪ್ಲೇಯಿಂಗ್ ಇಲೆವೆನ್ ಮಾಹಿತಿ
ಕೋಲ್ಕತ್ತಾ: ಈ ಬಾರಿಯ ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ನಡೆಯುತ್ತಿದ್ದರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಹಣಾಹಣಿ ಇರುವುದಿಲ್ಲ. ಆದರೆ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಈಡನ್ ಗಾರ್ಡನ್ ಅಂಗಳದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಕ್ವಾರ್ಟರ್ ಫೈನಲ್ ರೀತಿ ಕಾಣಿಸಿಕೊಳ್ಳುತ್ತಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಸುಲಭವಾಗಿ ಸೆಮಿಫೈನಲ್ ಪ್ರವೇಶ ಪಡೆಯಲಿದೆ.
ಟೀಮ್ ಇಂಡಿಯಾ ಸೂಪರ್ 8 ಹಂತದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭರ್ಜರಿ ಜಯ ದಾಖಲಿಸಿ ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ. ಇನ್ನು ವಿಂಡೀಸ್ ಸಹ ಅಬ್ಬರದ ಬ್ಯಾಟಿಂಗ್ ನಡೆಸುವ ಇರಾದೆಯನ್ನು ಹೊಂದಿದ್ದಾರೆ. ಎರಡೂ ತಂಡಗಳಲ್ಲಿ ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್‌ಗಳು ಇದ್ದಾರೆ. ಹೀಗಾಗಿ ಈ ಪಂದ್ಯ ರೋಚಕತೆ ಹೆಚ್ಚಿಸಿದೆ. ಈ ಪಂದ್ಯವನ್ನು ನೋಡುವುದು ಎಲ್ಲಿ? ಪಿಚ್ ವರದಿ? ಹವಾಮಾನ ವರದಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಿಚ್ ಯಾರಿಗೆ ಸಹಕಾರಿ?
ಈ ಪಿಚ್‌ನಲ್ಲಿ ಬ್ಯಾಟ್‌ಗೆ ಬೌಲ್ ಚೆನ್ನಾಗಿ ಬರುವುದರಿಂದ ಬ್ಯಾಟರ್‌ಗಳು ಆರ್ಭಟ ನೋಡಬಹುದಾಗಿದೆ. ಮಧ್ಯದ ಓವರ್‌ಗಳಲ್ಲಿ ಸ್ಪಿನ್ ಸಹ ಕಾಣುತ್ತದೆ. ಈ ಮೈದಾನದಲ್ಲಿ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಮಾಡುವ ಇಬ್ಬನಿ ಬೀಳುವ ಸಾಧ್ಯತೆ ಇದ್ದು, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಮುಂದಾಗುತ್ತದೆ.
ಸೂಪರ್ 8 ಹಂತದಲ್ಲಿ ಭಾರತ, ವಿಂಡೀಸ್ ತಂಡಗಳು ಪ್ರದರ್ಶನ ಹೇಗಿದೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಜಿಂಬಾಬ್ವೆ ವಿರುದ್ಧ ಜಯ ಸಾಧಿಸಿವೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿವೆ.
ಭಾರತ, ವೆಸ್ಟ್ ಇಂಡೀಸ್ ನಡುವಣ ಪಂದ್ಯಕ್ಕೆ ಮಳೆ ಕಾಟ ಇದೆಯಾ?
ಭಾನುವಾರ ನಡೆಯಲಿರುವ ಸೂಪರ್ 8 ಹಂತದ ಪಂದ್ಯದಲ್ಲಿ ಭಾರತ, ವಿಂಡೀಸ್ ತಂಡಗಳು ಕಾದಾಟ ನಡೆಸಲಿದ್ದು, ಈ ಪಂದ್ಯಕ್ಕೆ ಮಳೆ ಕಾಟ ನೀಡುವ ಸಂಭವವಿಲ್ಲ ಎಂದು ತಿಳಿದು ಬಂದಿದೆ.
ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಯಾವೆಲ್ಲಾ ಆಟಗಾರರಿಗೆ ವಿಂಡೀಸ್ ಮಣೆ ಹಾಕುತ್ತದೆ?
ಬ್ರ್ಯಾಂಡನ್ ಕಿಂಗ್, ಶಾಯ್ ಹೋಪ್, ಶಿಮ್ರೋನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ರೋಸ್ಟನ್ ಚೇಸ್, ಶೆರ್ಫೇನ್ ರುದರ್‌ಫೋರ್ಡ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ಗುಡಕೇಶ್ ಮೋಟಿ, ಶಮರ್ ಜೋಸೆಫ್.
ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳ ಮುಖಾಮುಖಿಯಾದಾಗ ಸಾಧನೆ ಹೇಗಿದೆ?
ಭಾರತ, ವಿಂಡೀಸ್ ತಂಡಗಳು ಈಗಾಗಲೇ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 19, ವಿಂಡೀಸ್ 10 ರಲ್ಲಿ ಜಯ ಸಾಧಿಸಿದೆ. ಇನ್ನು ಎರಡೂ ತಂಡಗಳು ಟಿ20 ವಿಶ್ವಕಪ್‌ನಲ್ಲಿ 4 ಬಾರಿ ಮುಖಾಮುಖಿಯಾಗಿದ್ದು, ಭಾರತ 1, ವಿಂಡೀಸ್ ತಂಡ 3 ಗೆಲುವು ದಾಖಲಿಸಿದೆ.
ಕೋಲ್ಕತ್ತಾದಲ್ಲಿ ಟೀಮ್ ಇಂಡಿಯಾ ಸಾಧನೆ ಹೇಗಿದೆ?
ಈಡನ್ ಗಾರ್ಡನ್ ಮೈದಾನದಲ್ಲಿ ಒಟ್ಟು 9 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 7 ಜಯ ದಾಖಲಿಸಿದೆ. 2011ರಲ್ಲಿ ಭಾರತ 1 ಸೋಲು ಕಂಡಿದೆ. ಇನ್ನು ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.
ಭಾರತ, ವೆಸ್ಟ್ ಇಂಡೀಸ್ ನಡುವಣ ಪಂದ್ಯವನ್ನು ನೋಡುವುದು ಎಲ್ಲಿ?
ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಭಾರತ, ವಿಂಡೀಸ್ ತಂಡಗಳು ಕಾದಾಟ ನಡೆಸಲಿದ್ದು, ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದಾಗಿದೆ. ಇನ್ನು ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ, ವೆಸ್ಟ್ ಇಂಡೀಸ್ ನಡುವಣ ಪಂದ್ಯ ನಡೆಯುವ ಸಮಯ ಯಾವಾಗ?
ಭಾರತ, ವಿಂಡೀಸ್ ನಡುವಣ ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದ್ದು, ಟಾಸ್ ಪಂದ್ಯಕ್ಕೂ ಅರ್ಧಗಂಟೆ ಮುನ್ನ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications