Rohit Sharma: ರಜೆಯ ಮಜಾದಲ್ಲಿರುವ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಲಭ್ಯ?; ಬಿಸಿಸಿಐ ಹೇಳಿದ್ದೇನು?
ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಬಹು ಮಾದರಿಯ ಸರಣಿಗೆ ಭಾರತ ತಂಡ ಸಿದ್ಧತೆ ನಡೆಸುತ್ತಿದ್ದು, ಇದೀಗ ಎಲ್ಲರ ಕಣ್ಣು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಮೇಲೆ ನೆಟ್ಟಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯದ ಸೋಲಿನ ನಂತರ, ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಆದರೆ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಆ ಎಲ್ಲ ಅನುಮಾನಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ವಿಶ್ರಾಂತಿ ಕೇಳಿರಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಭಾರತ ತಂಡದ ನಾಯಕ ಆಯ್ಕೆಗೆ ಲಭ್ಯರಾಗುತ್ತಾರೆ ಎಂಬುದು ದೃಢಪಟ್ಟಿದೆ.
"ರೋಹಿತ್ ಶರ್ಮಾ ಫಿಟ್ ಆಗಿದ್ದು, ಆಯ್ಕೆಗೆ ಲಭ್ಯವಿದ್ದಾರೆ. ಸದ್ಯ ಅವರಿಗೆ ಉತ್ತಮ ವಿಶ್ರಾಂತಿ ಸಿಗಲಿದೆ. ಹಾಗಾಗಿ, ಕೆಲಸದ ಹೊರೆ ನಿರ್ವಹಣೆಯ ಕಾಳಜಿಯೂ ಇಲ್ಲ. ಅವರು ವೆಸ್ಟ್ ಇಂಡೀಸ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ," ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ಅವರು ತಮ್ಮ ಗಾಯಗಳಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣದಿಂದ ವೆಸ್ಟ್ ಇಂಡೀಸ್ ಸರಣಿಗೆ ಲಭ್ಯವಿರುವುದಿಲ್ಲ. ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ್ ಪೂಜಾರ ಮತ್ತೊಂದು ಅವಕಾಶವನ್ನು ಪಡೆಯಬಹುದು. ಆದರೆ ಆಯ್ಕೆಗಾರರು ಕೆಲವು ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.
ಮುಂಬೈನ ಸರ್ಫರಾಜ್ ಖಾನ್ ಕಳೆದ ರಣಜಿ ಟ್ರೋಫಿಯಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಸತತವಾಗಿ ರನ್ ಗಳಿಸುತ್ತಿದ್ದಾರೆ. ಆದರೆ, ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವುದು ಅವರಿಗೆ ದೊಡ್ಡ ಸವಾಲಾಗಿದೆ.
ಸರ್ಫರಾಜ್ ಖಾನ್ ಹೊರತುಪಡಿಸಿ, ಮುಖೇಶ್ ಕುಮಾರ್ ಟೆಸ್ಟ್ ಪಂದ್ಯಗಳಿಗೆ ರಾಷ್ಟ್ರೀಯ ತಂಡದಿಂದ ಕರೆ ಸ್ವೀಕರಿಸುವ ಸಾಧ್ಯತೆಯಿದೆ. ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರು ಆಯ್ಕೆಯಾಗುವ ನಿರೀಕ್ಷೆ ಇದೆ. ಉಮೇಶ್ ಯಾದವ್ ಲಭ್ಯತೆ ಅನಿಶ್ಚಿತವಾಗಿದ್ದು, ಜಯದೇವ್ ಉನದ್ಕತ್ ಅವರಿಗೆ ಆಡಲು ಅವಕಾಶ ನೀಡಲಾಗುವುದು.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಜುಲೈ ಮೊದಲ ವಾರದಲ್ಲಿ ಕೆರಿಬಿಯನ್ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಮತ್ತು ಸ್ಪರ್ಧಾತ್ಮಕ ಸರಣಿಯನ್ನು ನಿರೀಕ್ಷಿಸುತ್ತಿದೆ. ಆಟಗಾರರು ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಮತ್ತು ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಜ್ಜಾಗಬೇಕಿದೆ.
ಆತಂಕಕ್ಕೆ ಕಾರಣವಾದ ರೋಹಿತ್ ಶರ್ಮಾ ಫಾರ್ಮ್
2023ರ ಐಪಿಎಲ್‌ನಲ್ಲಿ ನೀರಸ ಪ್ರದರ್ಶನದ ಹೊರತಾಗಿಯೂ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಉತ್ತಮವಾಗಿ ಆಡುತ್ತಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಅಂಕಿಅಂಶಗಳು ಉತ್ತಮವಾಗಿವೆ. ಆದರೆ, ಅವರ ಇತ್ತೀಚೆಗಿನ ರನ್ ಗಳಿಕೆ ಆತಂಕಕ್ಕೆ ಕಾರಣವಾಗಿದೆ. ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಳೆದ 12 ತಿಂಗಳುಗಳಲ್ಲಿ 49.27ರ ಉತ್ತಮ ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.
13 ಇನ್ನಿಂಗ್ಸ್‌ಗಳಲ್ಲಿ 111.52 ಸ್ಟ್ರೈಕ್ ರೇಟ್‌ನೊಂದಿಗೆ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕ ಬಾರಿಸಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರು ಆಡಿರುವ ಕಳೆದ ಐದು ಪಂದ್ಯಗಳಲ್ಲಿ 37.5ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಹೊಂದಿದ್ದಾರೆ.
"ಭಾರತ ತಂಡದ ನಾಯಕ ರೋಹಿತ್ ಶರ್ಮಾ ಐಪಿಎಲ್ ಮತ್ತು ಡಬ್ಲ್ಯುಟಿಸಿ ಫೈನಲ್‌ನಲ್ಲಿ ಹೆಚ್ಚು ರನ್ ಗಳಿಸಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಲ್ಲಿ ಉತ್ತಮವಾಗಿ ಆಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಾಗ್ಪುರ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದರು. ಅವರು ತಮ್ಮ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಫಾರ್ಮ್‌ನ ಆಧಾರದ ಮೇಲೆ ರೋಹಿತ್‌ರನ್ನು ಟೀಕಿಸುವುದು ಕಠಿಣವಾಗಿದೆ," ಎಂದು ಬಿಸಿಸಿಐ ಅಧಕಾರಿಯೊಬ್ಬುರ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications