For Quick Alerts
ALLOW NOTIFICATIONS  
For Daily Alerts
 

ಭಾರತ vs ವೆಸ್ಟ್ ಇಂಡೀಸ್: ಇಂದು ನಡೆಯಲಿದೆ ನಾಲ್ಕನೇ ಪಂದ್ಯ: ಭಾರತಕ್ಕೆ ನಿರ್ಣಾಯಕ

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಇಂದು ನಾಳ್ಕನೇ ಬಾರಿಗೆ ಮುಖಾಮುಖಿಯಾಗುತ್ತಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ ಬಳಿಕ ಮೂರನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಿರುವ ಭಾರತ ತಂಡ ಅದ್ಭುತ ಗೆಲುವು ಸಾಧಿಸಿತ್ತು. ಆ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿರುವ ಟೀಮ್ಇಂಡಿಯಾ 4ನೇ ಪಂದ್ಯಕ್ಕೆ ಸಿದ್ಧವಾಗಿದೆ.

ಈ ಸರಣಿಯ ಕೊನೆಯ ಎರಡು ಪಂದ್ಯಗಳು ಅಮೆರಿಕಾದ ಫ್ಲೋರಿಡಾದ ಮಿಯಾಮಿ ನಗರದಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ ಪಡೆ ಸರಣಿಯ ಹಿನ್ನಡೆಯಿಂದ ಹೇಗೆ ಕಮ್‌ಬ್ಯಾಕ್ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದ್ದು ಸಂಘಟಿತ ಪ್ರದರ್ಶನವನ್ನು ಟೀಮ್ ಇಂಡಿಯಾ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

Ind vs WI: Team India eye on level the series: countdown begins for 4th t20i

ಈ ಸರಣಿಯ ನಾಲ್ಕನೇ ಪಂದ್ಯ ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು 7:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸುವ ಅವಕಾಶವಿದೆ. ಅಲ್ಲದೆ ಫ್ಯಾನ್ ಕೋಡ್ ಹಾಗೂ ಜಿಯೋ ಜಿನಿಮಾದಲ್ಲಿಯೂ ಈ ಪಂದ್ಯದ ಲೈವ್‌ಸ್ಟ್ರೀಮಿಂಗ್ ವೀಕ್ಷಿಸಬಹುದು.
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂ ಆರಂಭದಲ್ಲಿ ಬ್ಯಾಟರ್‌ಗಳಿಗೆ ಅದ್ಭುತವಾಗಿ ನೆರವು ನೋಡುವ ಗುಣವನ್ನು ಹೊಂದಿದ್ದು ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆಯಿದೆ. ಮೊದಲು ಬ್ಯಾಟಿಂಗ್‌ಗೆ ಉತ್ತಮವಾಗಿ ನೆರವು ನೀಡಿದ ಬಳಿಕ ಬೌಲರ್‌ಗಳು ಇಲ್ಲಿ ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 200 ರನ್‌ಗಳನ್ನು ಗಳಿಸುವ ಸಾಧ್ಯತೆಯೂ ಹೆಚ್ಚಾಗಿದೆ. ಹಾಗಾಗಿ ಟಾಸ್ ಇಲ್ಲಿ ಮಹತ್ವ ಪಡೆಯಲಿದೆ

ವೆಸ್ಟ್ ಇಂಡೀಸ್ ತಂಡ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೆಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಓಶೇನ್ ಥಾಮಸ್, ಓಡಿಯನ್ ಸ್ಮಿತ್, ಶಾಯ್ ಹೋಪ್, ಜೇಸನ್ ಹೋಲ್ಡರ್

ಭಾರತ ತಂಡ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಇಶಾನ್ ಕಿಶನ್ , ಅವೇಶ್ ಖಾನ್

Story first published: Saturday, August 12, 2023, 8:49 [IST]
Other articles published on Aug 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+