ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs WI: ಸರಣಿ ಗೆದ್ದ ಬಳಿಕ ಪಾರ್ಟಿ ಮೂಡ್‌ನಲ್ಲಿ ಟೀಮ್ ಇಂಡಿಯಾ; ಚಿತ್ರ ಹಂಚಿಕೊಂಡ ಸೂರ್ಯಕುಮಾರ್ ಪತ್ನಿ

IND vs WI: Team India players and their wives party at pigeon point beach after series win

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಕೆರಿಬಿಯನ್ನರ ವಿರುದ್ಧ ಮೊದಲಿಗೆ ಆಯೋಜನೆಗೊಂಡಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಜುಲೈ 24ರ ಭಾನುವಾರದಂದು ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯವನ್ನು ಗೆದ್ದ ಟೀಮ್ ಇಂಡಿಯಾ ಜುಲೈ 27ರ ಬುಧವಾರದಂದು ನಡೆಯಲಿರುವ ತೃತೀಯ ಏಕದಿನ ಪಂದ್ಯದಲ್ಲಿ ಕೂಡಾ ಗೆದ್ದು ವೈಟ್ ವಾಷ್ ಸಾಧನೆ ಮಾಡುವತ್ತ ಕಣ್ಣಿಟ್ಟಿದೆ.

ಭಾರತ ಮತ್ತು ವಿಂಡೀಸ್ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?ಭಾರತ ಮತ್ತು ವಿಂಡೀಸ್ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಟೊಬ್ಯಾಗೊದ ಪಿಜನ್ ಪಾಯಿಂಟ್ ಬೀಚ್‌ನಲ್ಲಿ ಭೋಜನ ಸವಿದು ಕಾಲ ಕಳೆದಿದ್ದಾರೆ. ಟೀಮ್ ಇಂಡಿಯಾ ನಾಯಕ ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ಯುಜುವೇಂದ್ರ ಚಾಹಲ್, ಇಶಾನ್ ಕಿಶನ್, ಶುಬ್ ಮನ್ ಗಿಲ್, ಅವೇಶ್ ಖಾನ್, ಋತುರಾಜ್ ಗಾಯಕ್ವಾಡ್ ಹಾಗೂ ಅರ್ಶದೀಪ್ ಸಿಂಗ್ ಈ ಬೀಚ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಸತತವಾಗಿ 23 ಮತ್ತು 22 ಏಕದಿನ ಪಂದ್ಯ ಸೋತ ಕಳಪೆ ತಂಡವಿದು; ಅಪಾಯದಲ್ಲಿ ವಿಂಡೀಸ್!ಸತತವಾಗಿ 23 ಮತ್ತು 22 ಏಕದಿನ ಪಂದ್ಯ ಸೋತ ಕಳಪೆ ತಂಡವಿದು; ಅಪಾಯದಲ್ಲಿ ವಿಂಡೀಸ್!

ಇನ್ನು ಈ ಬೀಚ್ ಔತಣಕೂಟದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಪತ್ನಿ ಚಾರುಲತಾ ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಕೂಡ ಪಾಲ್ಗೊಂಡಿದ್ದು, ದೇವಿಶಾ ಶೆಟ್ಟಿ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ಪಾರ್ಟಿಯ ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಸತತ 12ನೇ ಸರಣಿ ಗೆದ್ದು ದಾಖಲೆ ಬರೆದ ಟೀಮ್ ಇಂಡಿಯಾ

ಸತತ 12ನೇ ಸರಣಿ ಗೆದ್ದು ದಾಖಲೆ ಬರೆದ ಟೀಮ್ ಇಂಡಿಯಾ

ಎರಡನೇ ಏಕದಿನ ಪಂದ್ಯದ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ವಶಪಡಿಸಿಕೊಳ್ಳುವುದರ ಮೂಲಕ ವಿಂಡೀಸ್ ವಿರುದ್ಧ ಸತತ 12ನೇ ಏಕದಿನ ಸರಣಿ ಗೆದ್ದು ತಂಡವೊಂದರ ವಿರುದ್ಧ ಸತತವಾಗಿ ಅತಿ ಹೆಚ್ಚು ಏಕದಿನ ಸರಣಿ ಗೆದ್ದ ದಾಖಲೆಯನ್ನು ಭಾರತ ಬರೆದಿದೆ. ಈ ಹಿಂದೆ ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧ ಸತತ 11 ಏಕದಿನ ಸರಣಿಗಳನ್ನು ಗೆದ್ದು ದಾಖಲೆಯನ್ನು ನಿರ್ಮಿಸಿತ್ತು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ ತಂಡದ ಈ ದಾಖಲೆಯನ್ನು ಸರಿಗಟ್ಟಿದೆ.

ವೈಟ್ ವಾಶ್ ಬಳಿಯುವತ್ತ ಟೀಂ ಇಂಡಿಯಾ

ವೈಟ್ ವಾಶ್ ಬಳಿಯುವತ್ತ ಟೀಂ ಇಂಡಿಯಾ

ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಜುಲೈ 27ರ ಬುಧವಾರದಂದು ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿಯೂ ಗೆದ್ದು ವೈಟ್ ವಾಷ್ ಸಾಧನೆ ಮಾಡುವತ್ತ ಚಿತ್ತ ನೆಟ್ಟಿದೆ. ಪ್ರಥಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವನ್ನು ಗುರಿಮುಟ್ಟದಂತೆ ಕಟ್ಟಿಹಾಕಿದ್ದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಚೇಸ್ ಮಾಡಿ ಗೆದ್ದಿದೆ. ಹೀಗೆ ಪ್ರಥಮ ಬ್ಯಾಟಿಂಗ್ ಹಾಗೂ ದ್ವಿತೀಯ ಬ್ಯಾಟಿಂಗ್ ಎರಡನ್ನೂ ಮಾಡಿ ಜಯ ಸಾಧಿಸಿರುವ ಟೀಮ್ ಇಂಡಿಯಾ ತೃತೀಯ ಏಕದಿನ ಪಂದ್ಯವನ್ನು ಸಹ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ತೆರಳಿರುವ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ತೆರಳಿರುವ ಭಾರತ ತಂಡ

ಟೀಮ್ ಇಂಡಿಯಾ ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶಿಖರ್ ಧವನ್ ನಾಯಕನಾಗಿ ಮುನ್ನಡೆಸುತ್ತಿದ್ದು, ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಹೀಗಿದೆ:

ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ರುತುರಾಜ್ ಗಾಯಕ್ವಾಡ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಇಶಾನ್ ಕಿಶನ್ ( ವಿಕೆಟ್ ಕೀಪರ್ )

Story first published: Tuesday, July 26, 2022, 15:20 [IST]
Other articles published on Jul 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X