Ind vs WI: 4ನೇ ಪಂದ್ಯಕ್ಕಾಗಿ ಅಮೆರಿಕಾದ ಮಿಯಾಮಿ ನಗರಕ್ಕೆ ಬಂದಿಳಿದ ಭಾರತ ತಂಡ
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳು ಮುಕ್ತಾಯವಾಗಿದೆ. ಈ ಮೂರು ಪಂದ್ಯಗಳು ಕೆರಿಬಿಯನ್ ನಾಡಿನಲ್ಲಿ ನಡೆದಿದ್ದರೆ ಸರಣಿಯ ಅಂತಿಮ ಎರಡು ಪಂದ್ಯಗಳು ಅಮೆರಿಕಾದ ಫ್ಲೋರಿಡಾ ರಾಜ್ಯದ ಮಿಯಾಮಿ ನಗರದಲ್ಲಿ ಆಯೋಜನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಆಟಗಾರರ ಬಳಗ ಈಗ ಮಿಯಾಮಿಗೆ ತಲುಪಿದೆ.
ಸರಣಿಯ ಅಂತಿಮ ಈ ಎರಡು ಪಂದ್ಯಗಳು ಕೂಡ ಫ್ಲೋರಿಡಾದಲ್ಲಿ ಆಯೋನೆಯಾಗಲಿದೆ. ಶನಿವಾರ ಹಾಗೂ ಭಾನುವಾರದಂದು ಈ ಪಂದ್ಯಗಳು ನಡೆಯಲಿದ್ದು ಭಾರತಕ್ಕೆ ಈ ಪಂದ್ಯಗಳು ಅತ್ಯಂತ ಮಹತ್ವದ್ದಾಗಿದೆ. ಇನ್ನು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ಜೊತೆಗೆ ಅಮೆರಿಕಾ ಕೂಡ ಸಹ ಆತಿಥ್ಯವನ್ನು ವಹಿಸಿಕೊಳ್ಳುತ್ತಿದ್ದು ಅಲ್ಲಿನ ವಾತಾವರಣವನ್ನು ಅರ್ಥ ಮಾಡಿಕೊಳ್ಳಲು ಈ ಎರಡು ಪಂದ್ಯಗಳು ಮಹತ್ವ ಪಡೆಯಲಿದೆ.

ಇನ್ನು ಯುಎಸ್‌ಎಯ ಲೀಗ್ ಕ್ರಿಕೆಟ್ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿ(ಎಂಎಲ್‌ಸಿ) ಇದೇ ಫ್ಲೋರಿಡಾದ ಕ್ರೀಡಾಂಗಣದಲ್ಲಿ ಆಯೋಜನೆಯಾದಾಗ ಅಲ್ಲಿನ ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯಕ್ಕೂ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಅದರಲ್ಲೂ ಭಾರತೀಯ ಅಭಿಮಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಬಳಿಕ ಮೂರನೇ ಪಂದ್ಯದಲ್ಲಿ ಭರ್ಜರಿಯಾಗಿ ತಿರುಗುಬಿದ್ದಿತ್ತು. ಬೌಲಿಂಗ್‌ನಲ್ಲಿ ಕುಲ್‌ದೀಪ್ ಯಾದವ್ ವಿಂಡೀಸ್ ದಾಂಡಿಗರ ಲೆಕ್ಕಾಚಾರ ಬುಡಮೇಲುಗೊಳಿಸಿದರೆ ಬ್ಯಾಟಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರಿಸಿದರು. ಇನ್ನು ಯುವ ಆಟಗಾರ ತಿಲಕ್ ವರ್ಮಾ ಕುಡ ಅದ್ಭುತ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಹೀಗಾಗಿ ಸರಣಿಯಲ್ಲಿನ ಹಿನ್ನಡೆಯನ್ನು ಭಾರತ 1-2ಕ್ಕೆ ತಗ್ಗಿಸಿಕೊಂಡಿದೆ.
ಸತತ ಎರಡು ವೈಫಲ್ಯಗಳ ನಂತರ ಭಾರತ ತಂಡದ ಹಿರಿಯ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯುಜುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಮೂರನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತ ಗೆಲುವಿನ ಗೆರೆ ದಾಟಲು ನೆರವಾದರು. ಸೂರ್ಯ ಅವರ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು ಸ್ಪಿನ್ ಸ್ನೇಹಿ ಗಯಾನಾ ಪಿಚ್‌ನಲ್ಲಿ ಚಹಾಲ್ ಮತ್ತು ಕುಲ್ದೀಪ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿ ಗಮನಸೆಳೆದಿದ್ದಾರೆ.
ಟೀಮ್ ಇಂಡಿಯಾ ಸ್ಕ್ವಾಡ್: ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಇಶಾನ್ ಕಿಶನ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್
ವೆಸ್ಟ್ ಇಂಡೀಸ್ ಸ್ಕ್ವಾಡ್: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಶಾಯ್ ಹೋಪ್, ಓಶೇನ್ ಥಾಮಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications