
ಭಾರತ ಹಾಗೂ ವೆಸ್ಟ್ ಇಂಡಿಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಏಕದಿನ ಸರಣಿ ಭಾರತದ ವಶವಾಗಿದೆ. ಮೊದಲ ಪಂದ್ಯದಲ್ಲಿ ಸುಲಭವಾಗಿ ಗೆಲವು ಸಾಧಿಸಿದ್ದ ಭಾರತ ಎರಡನೇ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ 44 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಏಕದಿನ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದ್ದು ಫೆಬ್ರವರಿ 11 ರಂದು ಈ ಪಂದ್ಯ ನಡೆಯಲಿದೆ.
ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತದ ಪರವಾಗಿ ಆರಂಭಿಕನಾಗಿ ರೋಹಿತ್ ಶರ್ಮಾಗೆ ರಿಷಭ್ ಪಂತ್ ಕಣಕ್ಕಿಳಿಯುವ ಮೂಲಕ ಅಚ್ಚರಿ ಮೂಡಿಸಿದ್ದರು. ಭಾರತ ತಮಡದ ಇ ಪ್ರಯೋಗ ಹೆಚ್ಚಿನ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿತ್ತು. ಆದರೆ ಈ ಆರಂಬಿಕ ಜೋಡಿಯಿಂದ ಹೆಚ್ಚಿನ ಪ್ರಯೋಜನವಾಗಲಿಲ್ಲ. ಮೊದಲ ವಿಕೆಟ್‌ಗೆ ಆರಂಭಿಕ ಜೋಡಿ ಕೇವಲ 18 ಎಸೆತಗಳನ್ನು ಮಾತ್ರವೇ ಎದುರಿಸಿದ್ದರು. 6 ರನ್‌ಗಳಿಸದ್ದಾಗ ಸ್ವತಃ ನಾಯಕ ರೋಹಿತ್ ಶರ್ಮಾ ಅವರೇ ವಿಕೆಟ್ ಕಳೆದುಕೊಂಡು ಫೆವಿಲಿಯನ್ ಸೇರಿಕೊಂಡಿದ್ದರು, ನಂತರ ರಿಷಭ್ ಪಂತ್ ಕೂಡ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. 34 ಎಸೆತಗಳನ್ನು ಎದುರಿಸಿದ ಪಂತ್ 18 ಮಾತ್ರವೇ ಗಳಿಸಲು ಶಕ್ತವಾಗಿದ್ದರು. ಪವರ್‌ಪ್ಲೇನಲ್ಲಿ ಪಂತ್ ಸಾಕಷ್ಟು ಎಸೆತಗಳನ್ನು ವ್ಯರ್ಥಗೊಳಿಸಿದ್ದರು.
ಆರಂಗಿಕನಾಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸುವ ನಿರ್ಧಾರದ ಬಗ್ಗೆ ಸ್ವತಃ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕೇವಲ ಒಂದು ಬಾರಿಯ ಪ್ರಯೋಗ ಎಂಬ ಮಾತನ್ನು ನಾಯಕ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಸರಣಿಯ ಅಂತಿಮ ಪಂದ್ಯದಲ್ಲಿ ಆರಂಭಿಕನಾಗಿ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ ಎಂಬ ಸಂಗತಿಯನ್ನು ಕೂಡ ಬಹಿರಂಗಪಡಿಸಿದರು.
"ವಿಭಿನ್ನ ಪ್ರಯೋಗಗಳನ್ನು ಮಾಡಲು ನನ್ನಲ್ಲಿ ಕೇಳಲಾಗಿತ್ತು, ಆದ ಕಾರಣ ಈ ಭಿನ್ನವಾದ ಪ್ರಯೋಗ ಮಾಡಲಾಯಿತು. ನಾವು ಇದನ್ನು ಕೇವಲ ಒಮದು ಪಂದ್ಯದಲ್ಲಿ ಪ್ರಯೋಗಿಸಲು ಮಾತ್ರವೇ ಮುಂದಾಗಿದ್ದೇವೆ. ಇದು ಖಾಯಂ ಪ್ರಯೋಗವಲ್ಲ. ಮುಂದಿನ ಪಂದ್ಯದಲ್ಲಿ ಶಿಖರ್ ಧವನ್ ಖಂಡಿತವಾಗಿಯೂ ಮರಳಲಿದ್ದಾರೆ" ಎಂದು ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ರೋಹಿತ್ ಶರ್ಮಾ 2023ರ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಸಮರ್ಥ ಸಂಯೋಜನೆಯನ್ನು ಕಂಡುಕೊಳ್ಳುವ ದೃಷ್ಟಿಯಿಂದ ಈ ರೀತಿಯ ಪ್ರಯೋಗಗಳು ಮುಂದುವರಿಯಲಿದ್ದು ಕೆಲ ಪಂದ್ಯಗಳನ್ನು ಕಳೆದುಕೊಳ್ಳಲೂ ಬಹುದು ಎಂದಿದ್ದಾರೆ ರೋಹಿತ್ ಶರ್ಮಾ. "ಹೊಸ ಸಂಗತಿಗಳನ್ನು ಕಂಡುಕೊಳ್ಳಲು ಈ ರೀತಿಯ ಪ್ರಯೋಗಳನ್ನು ನಡೆಸುವುದರಿಂದಾಗಿ ಕೆಲ ಪಂದ್ಯಗಳನ್ನು ನಾವು ಕಳೆದುಕೊಂಡರು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾಕೆಂದರೆ ದೀರ್ಘಕಾಲದ ದೃಷ್ಟಿಯಿಂದ ಈ ಪ್ರಯೋಗಗಳು ತಂಡಕ್ಕೆ ಅಗತ್ಯವಾಗಿದೆ" ಎಂದಿದ್ದಾರೆ ರೋಹಿತ್ ಶರ್ಮಾ.
ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್
ವೆಸ್ಟ್ ಇಂಡಿಸ್ ಸ್ಕ್ವಾಡ್: ಕೀರಾನ್ ಪೊಲಾರ್ಡ್ (ನಾಯಕ), ಫ್ಯಾಬಿಯನ್ ಅಲೆನ್, ಎನ್ಕ್ರುಮಾ ಬೊನ್ನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್, ಕೆಮರ್ ರೋಚ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಶ್