Ind vs WI: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಶಿಖರ್ ಧವನ್ ನಾಯಕ

ಜುಲೈ ತಿಂಗಳಾಂತ್ಯದಲ್ಲಿ ನಡೆಯುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶಿಖರ್ ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಖಾಯಂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.
ಜುಲೈ 22ರಂದು ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 16 ಸದಸ್ಯರ ಯುವ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಧವಾರ ಪ್ರಕಟಿಸಿದೆ.
ರೋಹಿತ್ ಶರ್ಮಾ ಮತ್ತು ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ 50 ಓವರ್‌ಗಳ ಫಾರ್ಮ್ಯಾಟ್‌ಗೆ ವಿಶ್ರಾಂತಿ ನೀಡಲಾಗಿದೆ. ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
ಆಲ್‌ರೌಂಡರ್ ದೀಪಕ್ ಹೂಡಾ, ವೇಗಿ ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಹಲವಾರು ಯುವ ಮುಖಗಳು ತಂಡದ ಭಾಗವಾಗಿದ್ದಾರೆ.
ಈ ಸರಣಿಯಲ್ಲಿ ರಿಷಭ್ ಪಂತ್‌ಗೆ ವಿಶ್ರಾಂತಿ ನೀಡಲಾಗಿದ್ದು, ತಂಡದಲ್ಲಿ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ವಿಕೆಟ್ ಕೀಪರ್‌ಗಳಾಗಿ ಆಯ್ಕೆಯಾಗಿದ್ದಾರೆ. ಭಾರತ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದ್ದು, ನಂತರ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಎದುರಿಸಲಿದೆ.
ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ತಂಡವನ್ನು ಆಯ್ಕೆ ಮಾಡಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ.
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications