For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಎರಡು ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾಗಿ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ದಿನಗಣನೆ ಆರಂಬವಾಗಿದ್ದು ಟೀಮ್ ಇಂಡಿಯಾದ ಟೆಸ್ಟ್ ಹಾಗೂ ಏಕದಿನ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಭಾರತದ ಮುಂದಿನ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಭಿಯಾನ ಆರಂಭವಾಗಲಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಂದರ್ಭದಲ್ಲಿ ಕಳೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದ ಬಳಿಕ ಮುಂದಿನ ಸರಣಿಗೆ ಭರ್ಜರಿಯಾಗಿ ಸಿದ್ಧತೆ ನಡೆಸಿಕೊಳ್ಳಲು ಬಿಸಿಸಿಐ ಯೋಜೆನ ರೂಪಿಸಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಜುಲೈ 12ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿದೆ. ಆದರೆ ಈ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಪಡೆ ಎರಡು ಅಭ್ಯಾಸ ಪಂದ್ಯದಲ್ಲಿ ಆಡುವ ಮೂಲಕ ವಿಂಡೀಸ್ ವಿರುದ್ಧದ ಸರಣಿಗೆ ಸಿದ್ಧತೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಟೀಮ್ ಇಂಡಿಯಾ ಜುಲೈ 2ಕ್ಕೂ ಮುನ್ನ ಕೆರಿಬಿಯನ್ ನಾಡಿಗೆ ಪ್ರಯಾಣಿಸಲಿದ್ದು ಈ ಅಭ್ಯಾಸ ಪಂದ್ಯವನ್ನಾಡುವ ಮೂಲಕ ಸರಣಿಗೆ ಪೂರ್ವಸಿದ್ಧತೆ ಮಾಡಿಕೊಳ್ಳಲಿದೆ.

Ind vs WI: Team India will play 2 practice matches in Barbados ahead of test series

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಮುಕ್ತಾಯದ ಬಳಿಕ ಟೀಮ್ ಇಂಡಿಯಾದ ಆಟಗಾರರು ರಜಾ ಸಮಯದಲ್ಲಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಇನ್ನು ಕೂಡ ಲಂಡನ್‌ನಲ್ಲಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಚ್‌ಗಳಾಗಿ ಕೆರಿಬಿಯನ್ ದ್ವೀಪಕ್ಕೆ ಪ್ರಯಾಣಿಸಲಿದ್ದಾರೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.

ಬಾರ್ಬಡೋಸ್‌ನಲ್ಲಿ ಮೊದಲ ಅಭ್ಯಾಸ ಪಂದ್ಯ ಆಯೋಜನೆಯಾಗಲಿದ್ದು ಕೆಲ ಆಟಗಾರರು ಜಾರ್ಜ್‌ಟೌಟ್‌ಗೆ ತೆರಳಲಿದ್ದು ಕೆಲವರು ಗಯಾನಾಗೆ ತೆರಳಿ ಅಲ್ಲಿಂದ ಬಾರ್ಬಡೋಸ್‌ಗೆ ಪ್ರಯಾಣಿಸಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡ ಆಂಟಿಗುವಾದಲ್ಲಿ ಶಿಬಿರದಲ್ಲಿ ಭಾಗಿಯಾಗಲಿದ್ದು ಅಲ್ಲಿಂದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಡೊಮಿನಿಕಾಗೆ ಪ್ರಯಾಣಿಸಲಿದ್ದಾರೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಮೊದಲಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಡೊಮಿನಿಕಾ ಹಾಗೂ ಟ್ರಿನಿಡಾಡ್‌ನಲ್ಲಿ ಈ ಎರಡು ಪಂದ್ಯಗಳು ನಡೆಯಲಿದೆ. ಅದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜನೆಯಾಗದರೆ ನಂತರ ಎರಡು ಪಂದ್ಯಗಳ ಟಿ20 ಸರಣಿ ಆಯೋಜನೆಯಾಗಲಿದೆ. ಟೆಸ್ಟ್ ಹಾಗೂ ಏಕದಿನ ತಂಡಕ್ಕೆ ಟೀಮ್ ಇಂಡಿಯಾದ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ ಐದು ಪಂದ್ಯಗಳ ಟಿ೨೦ ಸರಣಿಗೆ ಇನ್ನಷ್ಟೇ ತಂಡವನ್ನು ಘೋಷಿಸಬೇಕಾಗಿದೆ.

ಟೀಮ್ ಇಂಡಿಯಾ ಟೆಸ್ಟ್ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

Story first published: Saturday, June 24, 2023, 11:08 [IST]
Other articles published on Jun 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+