'ಸೂರ್ಯ' ಆರ್ಭಟಕ್ಕೆ ಬೆದರಿದ ವಿಂಡೀಸ್: ಭಾರತಕ್ಕೆ ಗೆಲುವಿನ 'ತಿಲಕ'
ಸೂರ್ಯಕುಮಾರ್ ಯಾದವ್ ಅಬ್ಬರ ಹಾಗೂ ತಿಲಕ್ ವರ್ಮಾ ಅವರ ಸಮಯೋಚಿತ ಬ್ಯಾಟಿಂಗ್ ಮತ್ತು ಕುಲ್‌ದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ದಾಳಿಯಿಂದಾಗಿ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಭಾರತ ಮೂರನೇ ಪಂದ್ಯದಲ್ಲಿ ಅಮೋಘ ಪ್ರದರ್ಶನ ನಿಡಿದ್ದು ಅದ್ಭುತ ಗೆಲುವು ಸಾಧಿಸಿದೆ. ಮಹತ್ವದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಅಂತರದ ಮಹತ್ವದ ಗೆಲುವು ತನ್ನದಾಗಿಸಿಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ 160 ರನ್‌ಗಳ ಸವಾಲಿನ ಗುರಿಯನ್ನು ಪಡೆದುಕೊಂಡಿತ್ತು. ಸ್ಪಿನ್ ಬೌಲಿಂಗ್‌ಗೆ ನೆರವು ನೀಡುವ ಪಿಚ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದ ಭಾರತ ಈ ಪಂದ್ಯದಲ್ಲಿ ಭರ್ಜರಿ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ. ಆರಂಭಿಕ ವೈಫಲ್ಯದ ಹೊರತಾಗಿಯೂ ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಅವರ ಅದ್ಭುತ ಜೊತೆಯಾಟದ ಕಾರಣದಿಂದಾಗಿ ಸುಲಭ ಗೆಲುವು ಸಾಧಿಸಿದೆ.

ಚೊಚ್ಚಲ ಪಂದ್ಯವನ್ನಾಡಿದ ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ ಕೇವಲ 1 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದರು. ಮತ್ತೊಂದೆಡೆ ಶುಬ್ಮನ್ ಗಿಲ್ ಅವರ ನೀರಸ ಬ್ಯಾಟಿಂಗ್ ಈ ಪಂದ್ಯದಲ್ಲಿಯೂ ಮುಂದುವರಿದಿದ್ದು ಕೇವಲ 6 ರನ್‌ಗಳಿಸಿ ಔಟಾದರು. ಹೀಗಾಗಿ ಟೀಮ್ ಇಂಡಿಯಾ 34 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ಆದರೆ ನಂತರ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಅಮೋಘ ಜೊತೆಯಾಟವನ್ನು ನೀಡಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು.
ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಕೇವಲ 44 ಎಸೆತಗಳಲ್ಲಿ 83 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಕೂಡ ಒಳಗೊಂಡಿತ್ತು. ಇನ್ನು ತಿಲಕ್ ವರ್ಮಾ ಕೊನೆಯವರೆಗೂ ಔಟಾಗದೆ ಉಳಿದಿದ್ದು 37 ಎಸೆತಗಳಲ್ಲಿ 49 ರನ್‌ಗಳನ್ನು ಬಾರಿಸಿ ಅಜೇಯವಾಗುಳಿದರು. ಹಾರ್ದಿಕ್ ಪಾಂಡ್ಯ 20 ರನ್‌ಗಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿಂಡೀಸ್ ನೀಡಿದ್ದ 160 ರನ್‌ಗಳನ ಗುರಿಯನ್ನು ಮೀರಿ ನಿಂತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿತು. ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 7.4 ಓವರ್‌ಗಳಲ್ಲಿ 55 ರನ್‌ಗಳನ್ನು ಕಲೆ ಹಾಕಿ ಬೇರ್ಪಟ್ಟಿತು. ಬ್ರೆಂಡನ್ ಕಿಂಗ್ ಹಾಗೂ ಕೇಲ್ ಮೇಯರ್ಸ್ ಆರಂಭದಲ್ಲಿ ವೇಗವಾಗಿ ರನ್‌ಗಳಿಸುವ ಸೂಚನೆ ನೀಡಿದರಾದರೂ ಅವರ ವೇಗಕ್ಕೆ ತಡೆ ಹಾಕುವಲ್ಲಿ ಭಾರತೀಯ ಸ್ಪಿನ್ನರ್‌ಗಳು ಯಶಸ್ವಿಯಾಗಿದ್ದು ಇಲ್ಲಿ ಗಮನಾರ್ಹ ಅಂಶ. ಕೇಲ್ ಮೇಯರ್ಸ್ 25 ರನ್‌ಗಳಿಸಿದರೆ ಬ್ರೆಂಡನ್ ಕಿಂಗ್ 42 ರನ್‌ಗಳನ್ನು ಗಳಿಸಿದರು.
ಇನ್ನು ಜಾನ್ಸನ್ ಜಾರ್ಲ್ಸ್ 12 ರನ್‌ಗಳಿಸಿ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸುವ ಮೂಲಕ ತನ್ನ ಆಟವನ್ನು ಮುಗಿಸಿದರು. ಇನ್ನು ಪ್ರಚಂಡ ಫಾರ್ಮ್‌ನಲ್ಲಿರುವ ನಿಕೋಲಸ್ ಪೂರನ್ 12 ಎಸೆತಗಳಲ್ಲಿ 20 ರನ್‌ಗಳಸಿದ್ದಾಗ ಕುಲ್‌ದೀಪ್ ಸ್ಪಿನ್ ಮೋಡಿಗೆ ಸ್ಟಂಪ್ ಔಟ್ ಅಗಿ ಫೆವಿಲಿಯನ್‌ಗೆ ಸೇರಿದರು. ಶಿಮ್ರಾನ್ ಹೆಟ್ಮೇಯರ್ ಅವರನ್ನು ಕೂಡ ಒಂದಂಕಿಗೆ ಔಟ್ ಮಾಡುವಲ್ಲಿ ಭಾರತ ಯಶಸ್ವಿಯಾದರು ಕೂಡ ಕೊನೆಯ ಹಂತದಲ್ಲಿ ನಾಯಕ ರೋವ್ಮನ್ ಪೋವೆಲ್ ಅಬ್ಬರಿಸಿದರು. ಪೋವೆಲ್ ಕೇವಲ 19 ಎಸೆತಗಳಲ್ಲಿ 40 ರನ್‌ಗಳಿಸಿದರು. ಹೀಗಾಗಿ ವೆಸ್ಟ್ ಇಂಡೀಸ್ ತಂಡ 159 ರನ್‌ಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾಯಿತು.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದು ಕುಲ್‌ದೀಪ್ ಯಾದವ್. ನಾಲ್ಕು ಓವರ್‌ಗಳ ಬೌಲಿಂಗ್ ದಾಳಿಯಲ್ಲಿ ಕುಲ್‌ದೀಪ್ ಯಾದವ್ ಕೇವಲ 28 ರನ್‌ಗಳನ್ನು ನೀಡಿ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಒಂದು ವಿಕೆಟ್ ಅಕ್ಷರ್ ಪಟೇಲ್ ಹಾಗೂ ಮತ್ತೊಂದು ವಿಕೆಟ್ ಮುಕೇಶ್ ಕುಮಾರ್ ಪಾಲಾಗಿದೆ
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ಒಶಾನೆ ಥಾಮಸ್,ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications