For Quick Alerts
ALLOW NOTIFICATIONS  
For Daily Alerts
 

IND vs WI: ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯ ಶ್ರೇಷ್ಠನನ್ನು ಹಿಂದಿಕ್ಕಿ ಮತ್ತೊಂದು ಬೃಹತ್ ಸಾಧನೆಗೈದ ವಿರಾಟ್ ಕೊಹ್ಲಿ

21ನೇ ಶತಮಾನದ ಕ್ರಿಕೆಟ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳ ಸಾಲಿಗೆ ಸೇರುತ್ತಾರೆ. ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಡಿದರೆ ಸಾಕು ದಾಖಲೆಗಳು ಹಿಂದಿನ ದಾಖಲೆ ಅಳಿಸಿಹಾಕಿ, ಹೊಸ ದಾಖಲೆ ಬರೆಯುತ್ತಾರೆ.

ಇದೀಗ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ 2ನೇ ದಿನ ಅರ್ಧಶತಕ ಬಾರಿಸಿದರು. ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಅವರ ಶತಕಗಳು ಭಾರತ ತಂಡವನ್ನು ಗೆಲ್ಲಿಸಸುವಲ್ಲಿ ಮಹತ್ವದ ಪಾತ್ರ ವಹಿಸಿದವು.

IND vs WI: Virat Kohli Became 5th Highest Run Scorer For India In Test Cricket

ಆದರೆ, ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ದೊಡ್ಡ ಸಾಧನೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರಿಕೆಟ್‌ನ ಸ್ಫೋಟಕ ಆರಂಭಿಕರಲ್ಲಿ ಒಬ್ಬರಾದ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದ್ದಾರೆ.

ಗುರುವಾರದಂದು ವೆಸ್ಟ್ ಇಂಡೀಸ್ ವಿರುದ್ಧ ವಿರಾಟ್ ಕೊಹ್ಲಿ 36 ರನ್‌ ಗಳಿಸುತ್ತಿದ್ದಂತೆಯೇ ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ 5 ಬ್ಯಾಟರ್‌ಗಳ ಸಾಲಿಗೆ ಸೇರ್ಪಡೆಯಾದರು.

ಮೊದಲ ಟೆಸ್ಟ್ ಪಂದ್ಯದ 2ನೇ ದಿನದಂದು ಅಜೇಯರಾಗಿ ಉಳಿಯುವುದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 5ನೇ ಸ್ಥಾನಕ್ಕೇರಿದರು. ಈ ವೇಳೆ ಶ್ರೇಷ್ಠ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (8503) ಅವರನ್ನು ಹಿಂದಿಕ್ಕಿದರು.

ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (15,921 ರನ್), ರಾಹುಲ್ ದ್ರಾವಿಡ್ (13,265 ರನ್), ಸುನಿಲ್ ಗವಾಸ್ಕರ್ (10,122 ರನ್) ಮತ್ತು ವಿವಿಎಸ್ ಲಕ್ಷ್ಮಣ್ (8781 ರನ್) ನಂತರ ವಿರಾಟ್ ಕೊಹ್ಲಿ (8555) ಸ್ಥಾನ ಪಡೆದಿದ್ದಾರೆ.

ಇನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಇನ್ನಿಂಗ್ಸ್ ಹಾಗೂ 141 ರನ್‌ಗಳ ಅಮೋಘ ಗೆಲುವು ಸಾಧಿಸಿತು. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆಗಿದ್ದರೆ, ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಅವಳಿ ಶತಕದ ನೆರವಿನಿಂದ 421 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

ನಂತರ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡ 130 ರನ್‌ಗಳಿಗೆ ಸರ್ವಪತನ ಕಂಡಿತು. ವೆಸ್ಟ್ ಇಂಡೀಸ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್‌ನ ಎರಡನೇ ಇನ್ನಿಂಗ್ಸ್‌ನಲ್ಲಿಯೂ 7 ವಿಕೆಟ್ ಪಡೆದು ಮಿಂಚಿದರು.

ಇನ್ನು ಭಾರತ ತಂಡದ ಪರ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಪಂದ್ಯದಲ್ಲಿ 171 ರನ್ ಬಾರಿಸಿದ್ದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಚೊಚ್ಚಲ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್ ತವರಿನ ಹೊರಗೆ ಚೊಚ್ಚಲ ಪಂದ್ಯದಲ್ಲಿ ಅತ್ಯಧಿಕ ಮತ್ತು ಶಿಖರ್ ಧವನ್ (187) ಮತ್ತು ರೋಹಿತ್ ಶರ್ಮಾ (177) ನಂತರ ಮೂರನೇ ಗರಿಷ್ಠ ಸ್ಕೋರ್ ಆಗಿದೆ.

Story first published: Sunday, July 16, 2023, 10:18 [IST]
Other articles published on Jul 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+