For Quick Alerts
ALLOW NOTIFICATIONS  
For Daily Alerts
 

Virat Kohli: ಬ್ಯಾಟಿಂಗ್ ಮಾಡದಿದ್ದರೂ ನ್ಯೂಜಿಲೆಂಡ್ ಮಾಜಿ ದಿಗ್ಗಜನ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಗುರುವಾರ, ಜುಲೈ 27ರಂದು ಬಾರ್ಬಡೋಸ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್‌ಗಳ ಆರಾಮದಾಯಕ ಗೆಲುವು ಸಾಧಿಸಿತು.

ಆದರೆ, ಈ ಪಂದ್ಯದಲ್ಲಿ ಕಿರಿಯರಿಗೆ ಅವಕಾಶ ಮಾಡಿಕೊಡಲು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಆದರೆ, ಅವರ ಸುಪ್ರಸಿದ್ಧ ವೃತ್ತಿಜೀವನಕ್ಕೆ ಮತ್ತೊಂದು ಪ್ರಮುಖ ದಾಖಲೆಯ ಗರಿ ಸೇರಿಸಿಕೊಳ್ಳುವುದನ್ನು ತಡೆಯಲಾಗಲಿಲ್ಲ.

IND vs WI: Virat Kohli Equals Ross Taylors Record With 142nd Catch in ODI Cricket

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ಬೌಲಿಂಗ್ ಮಾಡುತ್ತಿದ್ದಾಗ ರವೀಂದ್ರ ಜಡೇಜಾ ಅವರ ಬೌಲಿಂಗ್‌ನಲ್ಲಿ ರೊಮಾರಿಯೊ ಶೆಫರ್ಡ್ ಅವರನ್ನು ಔಟ್ ಮಾಡಲು ವಿರಾಟ್ ಕೊಹ್ಲಿ ಎರಡನೇ ಸ್ಲಿಪ್‌ನಲ್ಲಿ ಅದ್ಭುತ ಡೈವ್ ಮೂಲಕ ಕ್ಯಾಚ್ ಪಡೆದರು.

ಇದು ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ 142ನೇ ಕ್ಯಾಚ್ ಆಗಿತ್ತು. ಅತಿ ಹೆಚ್ಚು ಏಕದಿನ ಕ್ಯಾಚ್‌ಗಳನ್ನು ಪಡೆದಿರುವ ಕ್ರಿಕೆಟಿಗರ ಪಟ್ಟಿಯಲ್ಲಿ ಪ್ರಸ್ತುತ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ರಾಸ್ ಟೇಲರ್ ಅವರೊಂದಿಗೆ ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕಾ ತಂಡದ ಮಾಜಿದಿಗ್ಗಜ ಮಹೇಲಾ ಜಯವರ್ಧನೆ ಅವರು 218 ಕ್ಯಾಚ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 160 ಕ್ಯಾಚ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

156 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಅಜರುದ್ದೀನ್ ಅವರನ್ನು ಹಿಂದಿಕ್ಕುವ ಮೂಲಕ ಪಟ್ಟಿಯಲ್ಲಿ, ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಕ್ರಿಕೆಟಿಗನಾಗಲು ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.

ಎಡಗೈ ಸ್ಪಿನ್ನರ್‌ಗಳಾದ ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಅವರು ಕೆನ್ಸಿಂಗ್ಟನ್ ಓವಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್ ಹಂಚಿಕೊಂಡರು ಮತ್ತು 23 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಗುವಂತೆ ಮಾಡಿದರು. ನಂತರ, ಭಾರತ ತಂಡ ಇನ್ನೂ 27 ಓವರ್‌ಗಳು ಉಳಿದಿರುವಂತೆಯೇ 5 ವಿಕೆಟ್‌ಗಳ ಜಯ ಸಾಧಿಸಿತು.

ಭಾರತದ ಪರ ಕುಲದೀಪ್ ಯಾದವ್ 6 ರನ್‌ಗೆ 4 ವಿಕೆಟ್ ಮತ್ತು ರವೀಂದ್ರ ಜಡೇಜಾ 37 ರನ್‌ಗೆ 3 ವಿಕೆಟ್ ಪಡೆದು ಮಿಂಚಿದರು. ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು ಭಾರತದ ಬೌಲರ್‌ಗಳು 114 ರನ್‌ಗಳಿಗೆ ನಿಯಂತ್ರಿಸಿದರು.

ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ 45 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ತಮ್ಮ ತಂಡದ ಪರ ಗರಿಷ್ಠ ಸ್ಕೋರ್ ಮಾಡಿದ ಬ್ಯಾಟರ್ ಎನಿಸಿದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಕ್ರಮಾಂಕದಲ್ಲಿ ಬದಲಾವಣೆಗಳೊಂದಿಗೆ ಮೈದಾನಕ್ಕಿಳಿಯಿತು. ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಇನ್ನಿಂಗ್ಸ್ ಪ್ರಾರಂಭಿಸಿದರು. ನಾಯಕ ರೋಹಿತ್ ಶರ್ಮಾ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಯುವ ಆಟಗಾರರಿಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲಿಲ್ಲ.

ಸುಲಭ ಗುರಿ ಬೆನ್ನಟ್ಟಿದ ಭಾರತದ ಪರ ಇಶಾನ್ ಕಿಶನ್ ಅರ್ಧಶತಕ ಬಾರಿಸಿದರು ಮತ್ತು ಭಾರತ ಐದು ವಿಕೆಟ್‌ಗಳಿಂದ ಗೆದ್ದು, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದರು.

ಶನಿವಾರ, ಜುಲೈ 29ರಂದು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯವೂ ಕೂಡ ಬಾರ್ಬಡೋಸ್‌ನಲ್ಲಿ ನಡೆಯಲಿದೆ.

Story first published: Friday, July 28, 2023, 18:30 [IST]
Other articles published on Jul 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+