IND vs WI 4ನೇ ಟಿ20: ಫ್ಲೋರಿಡಾದಲ್ಲೂ ಮಿಂಚಿದ ಭಾರತ; ವಿಂಡೀಸ್‌ಗೆ 192 ರನ್ ಗುರಿ

ಸದ್ಯ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ನಿರತವಾಗಿದ್ದು, ಏಕದಿನ ಸರಣಿಯಲ್ಲಿ ವೈಟ್ ವಾಶ್ ಸಾಧನೆ ಮಾಡಿದ ನಂತರ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ಈ ಟಿ ಟ್ವೆಂಟಿ ಸರಣಿಯ ಮೊದಲ 3 ಪಂದ್ಯಗಳು ವೆಸ್ಟ್ ಇಂಡೀಸ್ ನೆಲದಲ್ಲಿ ನಡೆದರೆ, ಕೊನೆಯ ಎರಡು ಪಂದ್ಯಗಳು ಯುಎಸ್‌ನ ಫ್ರೋರಿಡಾದಲ್ಲಿ ನಡೆಯುತ್ತಿವೆ. ಇನ್ನು ಟೀಮ್ ಇಂಡಿಯಾ ಸರಣಿಯಲ್ಲಿ ಈಗಾಗಲೇ 2-1 ಅಂತರದ ಮುನ್ನಡೆಯನ್ನು ಸಾಧಿಸಿದ್ದು, ಇಂದು ನಡೆಯುತ್ತಿರುವ ನಾಲ್ಕನೇ ಟಿ ಟ್ವೆಂಟಿ ಪಂದ್ಯದಲ್ಲಿ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ.
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಫೀಲ್ಡಿಂಗ್ ಆರಿಸಿಕೊಂಡು ಎದುರಾಳಿ ಟೀಮ್ ಇಂಡಿಯಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿ ವೆಸ್ಟ್ ಇಂಡೀಸ್ ತಂಡಕ್ಕೆ 192 ರನ್‌ಗಳ ಗುರಿಯನ್ನು ನೀಡಿದೆ.

ಭಾರತದ ಇನ್ನಿಂಗ್ಸ್
ಭಾರತ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ 53 ರನ್‌ಗಳ ಜತೆಯಾಟವಾಡಿ ತಂಡಕ್ಕೆ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ರೋಹಿತ್ ಶರ್ಮಾ 16 ಎಸೆತಗಳಲ್ಲಿ 33 ರನ್ ಕಲೆಹಾಕಿದರೆ, ಸೂರ್ಯಕುಮಾರ್ ಯಾದವ್ 24 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪಕ್ ಹೂಡಾ 21 ರನ್, ರಿಷಭ್ ಪಂತ್ 44 ರನ್ ಮತ್ತು ದಿನೇಶ್ ಕಾರ್ತಿಕ್ 6 ರನ್ ಕಲೆ ಹಾಕಿದರು. ಅಂತಿಮವಾಗಿ ಸಂಜು ಸ್ಯಾಮ್ಸನ್ ಅಜೇಯ 30 ರನ್ ಬಾರಿಸಿದರೆ ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಚಚ್ಚಿದರು.
ವೆಸ್ಟ್ ಇಂಡೀಸ್ ತಂಡದ ಪರ ಒಬೆದ್ ಮೆಕಾಯ್ 2 ವಿಕೆಟ್, ಅಲ್ಜಾರಿ ಜೋಸೆಫ್ 2 ವಿಕೆಟ್ ಹಾಗೂ ಅಖೆಲ್ ಹುಸೈನ್ 1 ವಿಕೆಟ್ ಪಡೆದರು.

ನಂಬರ್ 1 ಆಗುವ ಅವಕಾಶ ತಪ್ಪಿಸಿಕೊಂಡ ಸೂರ್ಯಕುಮಾರ್ ಯಾದವ್
ಸದ್ಯ ಟಿ ಟ್ವೆಂಟಿ ಬ್ಯಾಟ್ಸ್ ಮನ್ ಶ್ರೇಯಾಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರೆ ಅಗ್ರ ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿ ನಂಬರ್ 1 ಪಟ್ಟಕ್ಕೆ ಏರುತ್ತಿದ್ದರು. ಆದರೆ ಪಂದ್ಯದಲ್ಲಿ 24 ರನ್‌ಗಳನ್ನು ಮಾತ್ರ ಕಲೆ ಹಾಕಿದ ಸೂರ್ಯಕುಮಾರ್ ಯಾದವ್ ಈ ಅವಕಾಶವನ್ನು ಕೈ ತಪ್ಪಿಸಿಕೊಂಡಿದ್ದಾರೆ. ಆದರೆ ಸೂರ್ಯ ಕುಮಾರ್ ಯಾದವ್ ಅವರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿಯೂ ಸಹ ಈ ಸಾಧನೆ ಮಾಡುವ ಅವಕಾಶವಿದೆ.

ಆಡುವ ಬಳಗಗಳು
ಭಾರತ ಆಡುವ ಬಳಗ
ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್
ವೆಸ್ಟ್ ಇಂಡೀಸ್ ಆಡುವ ಬಳಗ
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಡೆವೊನ್ ಥಾಮಸ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಡೊಮಿನಿಕ್ ಡ್ರೇಕ್ಸ್, ಅಕೆಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications