Ind vs WI 1st Test: ಸ್ನಿನ್ ದಾಳಿಗೆ ವಿಂಡೀಸ್ ತತ್ತರ: ಮೊದಲ ಎರಡು ಸೆಶನ್‌ನಲ್ಲಿ ಭಾರತಕ್ಕೆ ಮುನ್ನಡೆ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಬಿಕ ಮೇಲುಗೂ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲ ಎರಡು ಸೆಶನ್‌ನಲ್ಲಿಯೂ ಭಾರತ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದು ವೆಸ್ಟ್ ಇಂಡೀಸ್ ವಿರುದ್ಧ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಟೀಮ್ ಇಂಡಿಯಾದ ಸ್ಪಿನ್ನರ್‌ಗಳು ವಿಂಡೀಸ್ ಬ್ಯಾಟಿಂಗ್ ವಿಭಾಗಕ್ಕೆ ಸಾಕಷ್ಟು ಕಾಡಿದ್ದಾರೆ.
ಈ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಈ ಅದರ ಯಶಸ್ಸು ಪಡೆಯಲು ವೆಸ್ಟ್ ಇಂಡೀಸ್‌ಗೆ ಸಾಧ್ಯವಾಗಲಿಲ್ಲ. ಆರಂಭಿಕ ಸೆಶನ್‌ನಲ್ಲಿ ಭಾರತದ ಬೌಲಿಂಗ್ ವಿಭಾಗ ಅಮೋಘ ಪ್ರದರ್ಶನ ನೀಡಿದ ಕಾರಣ ವೆಸ್ಟ್ ಇಂಡೀಸ್ ತಂಡದ ನಾಲ್ವರು ದಾಂಡಿಗರು ವಿಕೆಟ್ ಕಳೆದುಕೊಂಡಿದ್ದರು. ಹೀಗಾಗಿ ಮೊದಲ ಸೆಶನ್‌ನಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಯಶಸ್ಸು ಸಾಧಿಸಿತು.

ಮೊದಲ ಸೆಶನ್‌ನಲ್ಲಿ ವೆಸ್ಟ್ ಇಂಡೀಸ್ 68 ರನ್‌ಗಳನ್ನು ಗಳಿಸಿ 4 ವಿಕೆಟ್ ಕಳೆದುಕೊಂಡಿತು. ಇನ್ನು ಎರಡನೇ ಸೆಶನ್‌ನಲ್ಲಿ ವೆಸ್ಟ್ ಇಂಡೀಸ್ ಪರವಾಗಿ ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಲಿಕ್ ಅತನಜೆ ಉತ್ತಮ ಹೋರಾಟ ಪ್ರದರ್ಶಿಸಿ ಗಮನಸೆಳೆದಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಅವಕಾಶವನ್ನು ಕೇವಲ ಮೂರು ರನ್‌ಗಳಿಂದ ವಂಚಿತವಾಗಿದ್ದಾರೆ. ಈ ಸೆಶನ್‌ನಲ್ಲಿಯೂ ವೆಸ್ಟ್ ಇಂಡೀಸ್ 4 ವಿಕೆಟ್ ಕಳೆದುಕೊಂಡಿದೆ.
ಇನ್ನು ಮೊದಲ ಎರಡು ಸೆಶನ್‌ನಲ್ಲಿ ಬೌಲಿಂಗ್‌ನಲ್ಲಿ ಮಿಂಚಿದ್ದು ಆರ್ ಅಶ್ವಿನ್. ಈ ಅವಧಿಯಲ್ಲಿ ಅಶ್ವಿನ್ ವೆಸ್ಟ್ ಇಂಡೀಸ್ ತಂಡದ ನಾಲ್ವರು ದಾಂಡಿಗರನ್ನು ಔಟ್ ಮಾಡಿದ್ದು ಪಂದ್ಯದ ಆರಂಭಲ್ಲೇ ಭಾರತ ತಂಡ ಹಿಡಿತ ಸಾಧಿಸಲು ಕಾರಣವಾದರು. ಇನ್ನು ರವೀಂದ್ರ ಜಡೇಜಾ ಎರಡು ವಿಕೆಟ್ ಕಬಳಿಸಿದ್ದು ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಇಬ್ಬರು ಸ್ಪಿನ್ನರ್‌ಗಳು ಹಾಗೂ ಮೂವರು ವೇಗಿಗಳೊಂದಿಗೆ ಬಾರತ ಕಣಕ್ಕಿಳಿದಿದೆ. ಶಾರ್ದೂಲ್ ಠಾಕೂರ್, ಜಯ್‌ದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್‌ನಲ್ಲಿ ಆಡಲಿದ್ದಾರೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications