ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಪಡೆದುಕೊಂಡಿರುವ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅದ್ಭುತ ಆರಂಭವನ್ನು ಪಡೆದುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅರ್ಧ ಶತಕ ಸಿಡಿಸಿದ್ದಾರೆ. ಒಂದು ಅದ್ಭುತ ಪುಲ್‌ಶಟ್ ಬಾರಿಸುವ ಮೂಲಕ ಈ ಮೈಲಿಗಲ್ಲು ತಲುಪಿದ್ದಾರೆ ಭಾರತದ ಯುವ ಆಟಗಾರ.
ಮೊದಲ ದಿನಾಟದ ಅಂತ್ಯದಲ್ಲಿ ಯಶಸ್ವಿ ಜೈಸ್ವಾಲ್ 40 ರನ್‌ಗಳನ್ನು ಗಳಿಸಿ ನಾಯಕ ರೋಹಿತ್ ಶರ್ಮಾ ಜೊತೆಗೆ ಎರಡನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದರು. ಎರಡನೇ ದಿನ ನಾಯಕನ ಜೊತೆಗೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸುತ್ತಾ ಸಾಗಿದ ಜೈಸ್ವಾಲ್ ಈ ಸಾಧನ ಎಮಾಡುವಲ್ಲಿ ಯಶಸ್ವುಯಾದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೂ ಗಮನಾರ್ಹ ಮೈಲಿಗಲ್ಲಿನೊಂದಿಗೆ ಆರಂಭ ಮಾಡಿದ್ದಾರೆ.

ಯಶಸ್ವಿ ಜೈಸ್ವಾಲ್ ಜೊಚ್ಚಲ ಪಂದ್ಯದಲ್ಲಿಯೇ ಈ ಸಾಧನೆ ಮಾಡುವ ಗಮನಸೆಳೆದಿದ್ದಾರೆ. ಜಸ್ವಾಲ್ ಅರ್ಧ ಶತಕದ ಮೈಲಿಗಲ್ಲು ತಲುಪುತ್ತಿದ್ದಂತೆಯೇ ಟೀಮ್ ಇಂಡಿಯಾದ ಡ್ರೆಸ್ಸಿಂಗ್‌ರೂಮ್‌ನಲ್ಲಿದ್ದ ಹಿರಿಯ ಆಟಗಾರರು ಹಾಗೂ ಕೋಚ್ ರಾಹುಲ್ ದ್ರಾವಿಡ್ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸಿದ್ದಾರೆ.
ಯಶಸ್ವಿ ಜೈಸ್ವಾಲ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಅವಿಭಾಜ್ಯ ಅಂಗವಾಗು ಗುರುತಿಸಿಕೊಂಡಿದ್ದಾರೆ. ಮುಂಬೈ ಪರ 15 ಪಂದ್ಯಗಳನ್ನು ಆಡಿರುವ ಅವರು 1845 ರನ್ ಗಳಿಸಿದ್ದಾರೆ ಮಿಂಚಿದ್ದಾರೆ. ಇದರಲ್ಲಿ ಒಂಬತ್ತು ಶತಕಗಳು ಸೇರಿವೆ. ರೆಡ್‌ಬಾಲ್ ಕ್ರಿಕೆಟ್‌ನಲ್ಲಿ ಮುಂಬೈ ಪರವಾಗಿ ಮಾತ್ರವಲ್ಲದೆ ದಕ್ಷಿಣ ವಲಯದ ಪರವಾಗಿಯೂ ಆಡಿರುವ ಜೈಸ್ವಾಲ್ ದುಲೀಪ್ ಟ್ರೋಫಿ ಮತ್ತು ಇರಾನಿ ಟ್ರೋಫಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪರವಾಗಿ ಆಡಿದ್ದು ಅಲ್ಲಿಯೂ ಅದ್ಭುತ ದಾಖಲೆ ಹೊಂದಿದ್ದಾರೆ.
ಕಳೆದ ವರ್ಷ ಭಾರತ 'ಎ' ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಂಡಾಗ ತಂಡದ ಭಾಗವಾಗಿದ್ದ ಜೈಸ್ವಾಲ್ ಇದೀಗ ಭಾರತದ ಹಿರಿಯರ ತಂಡದಲ್ಲೂ ತಮ್ಮ ಅವಕಾಶ ಪಡೆದುಕೊಂಡಿದ್ದಾರೆ. ಇದೀಗ ಭಾರತ ತಂಡದ ಪರವಾಗಿಯೂ ಅದ್ಭುತ ಆರಂಭವನ್ನು ಪಡೆದುಕೊಂಡಿರುವ ಯಶಸ್ವಿ ಜೈಸ್ವಾಲ್ ಗಮನಸೆಳೆಯುವ ಪ್ರದರ್ಶನ ನೀಡಿದ್ದಾರೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್