ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ನೂತನ ಆರಂಭಿಕ ಜೋಡಿ!: ಶುಬ್ಮನ್‌ಗೆ ಇಲ್ಲ ಆರಂಭಿಕ ಜವಾಬ್ಧಾರಿ!?
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮುಂದಿನವಾರ ಈ ಎರಡು ತಂಡಗಳು ಪೈಪೋಟಿಗೆ ಇಳಿಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಎರಡು ದಿನಗಳ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಆರಂಭಿಕ ಜೋಡಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಸದ್ಯ ಟೀಮ್ ಇಂಡಿಯಾದ ಆರಂಬಿಕ ಜೋಡಿಯಾಗಿ ರೋಹಿತ್ ಶರ್ಮಾ ಜೊತೆಗೆ ಶುಬ್ಮನ್ ಗಿಲ್ ಕಣಕ್ಕಳಿಯುತ್ತಿದ್ದು ಖಾಯಂ ಆರಂಭಿಕರು ಎಂದು ಗುರುತಿಸಿಕೊಂಡಿದ್ದರು. ಬಾರ್ಡರ್ ಗವಾಸ್ಕರ್ ಟ್ರೋಫಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಂಥಾ ಮಹತ್ವದ ಪಂದ್ಯಗಳಲ್ಲಿಯೂ ಈ ಜೋಡಿ ಆರಂಬಿಕರಾಗಿ ಕಣಕ್ಕಿಳಿದಿತ್ತು. ಆದರೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಇದರಲ್ಲಿ ಬದಲಾವನೆಯಾಗುವ ಸಾಧ್ಯತೆಯಿದೆ. ನಾಯಕ ರೋಹಿತ್ ಶರ್ಮಾಗೆ ಶುಬ್ಮನ್ ಗಿಲ್ ಬದಲಾಗಿ ಮತ್ತೋರ್ವ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸಾಥ್ ನೀಡುವ ಸಾಧ್ಯತೆಯಿದೆ.

ಮೂರನೇ ಕ್ರಮಾಂಕದಲ್ಲಿ ಶುಬ್ಮನ್ ಗಿಲ್!
ರೋಹಿತ್ ಶರ್ಮಾ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಶುಬ್ಮನ್ ಗಿಲ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅನುಭವಿ ಚೇತೇಶ್ವರ್ ಪೂಜಾರ ಆಯ್ಕೆಯಾಗದಿರುವ ಕಾರಣದಿಂದಾಗಿ ಶುಬ್ಮನ್ ಗಿಲ್‌ಗೆ ಮೂರನೇ ಕ್ರಮಾಂಕದ ಜವಾಬ್ಧಾರಿ ನೀಡುವ ನಿರ್ಧಾರಕ್ಕೆ ಮ್ಯಾನೇಜ್‌ಮೆಂಟ್ ಬಂದಿದೆ ಎನ್ನಲಾಗಿದೆ. ಅದಕ್ಕೆ ಪೂರಕವಾಗಿ ಎರಡು ದಿನಗಳ ಅಭ್ಯಾಸ ಪಂದ್ಯದಲ್ಲಿ ಗಿಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು.
ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್-ಜೈಸ್ವಾಲ್
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಎರಡು ದಿನಗಳ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾಗೆ ಸಾಥ್ ನೀಡಿದ್ದು ಯಶಸ್ವಿ ಜೈಸ್ವಾಲ್. ಈ ಜೋಡಿ ಅಭ್ಯಾಸ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕ ಸಿಡಿಸಿದ್ದಾರೆ. ಈ ಜೋಡಿಯೇ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ದೇಶೀಯ ಕ್ರಿಕೆಟ್‌ನಲ್ಲಿಮಿಂಚಿದ್ದ ಜೈಸ್ವಾಲ್
ಯುವ ಆಟಗಾರ ಯಶಸ್ವಿ ಜೈಸ್ವಾಲ್ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಸತತವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ರಣಜಿ, ಇರಾನಿ ಟ್ರೋಫಿ ದುಲೀಪ್ ಟ್ರೋಫಿಯಲ್ಲಿ ಜೈಸ್ವಾಲ್ ನೀಡಿರುವ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಜೊತೆಗೆ ಐಪಿಎಲ್‌ನಲ್ಲಿಯೂ ಅಮೋಘ ಆಟವಾಡುವ ಮೂಲಕ ಎಲ್ಲಾ ಮಾದರಿಗೂ ಸೂಕ್ತವಾಗುವ ಆಟಗಾರ ಎಂಬುದನ್ನು ಸಾರಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದು ಆಡುವ ಬಳಗದಲ್ಲಿ ಅವಕಾಶ ಪಡೆಯಲು ಕಾತರರಾಗಿದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು ಮೊದಲ ಪಂದ್ಯ ಜುಲೈ 12ರಂದು ಡೊಮೆನಿಕಾದಲ್ಲಿ ಆಯೋಜನೆಯಾಗಲಿದೆ. ಎರಡನೇ ಪಂದ್ಯ ಜುಲೈ 20ರಿಂದ ಆರಂಭವಾಗಲಿದ್ದು ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications