ಟೀಮ್ ಇಂಡಿಯಾದ ಭವಿಷ್ಯದ ತಾರೆ ಎಂದೇ ಗುರುತಿಸಿಕೊಂಡಿರುವ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಸತತ ಎರಡನೇ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಜೈಸ್ವಾಲ್ ಟೀಮ್ ಇಂಡಿಯಾದಲ್ಲಿ ಆಡುವ ಮೂಲಕ ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆಯಲ್ಲಿ ಆಡುವ ಅವಕಾಶ ದೊರೆತಿರುವುದಕ್ಕೆ ತಮ್ಮ ಕೃತಜ್ಞತೆ ಹಾಗೂ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ಈ ಅವಕಾಶ ದೊರೆತಿರುವುದು ತನ್ನ ಅದೃಷ್ಟ ಎಂದಿದ್ದಾರೆ ಜೈಸ್ವಾಲ್.
ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಬಳಿಕ ಜೈಸ್ವಾಲ್ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮಾತನಾಡುತ್ತಾ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕೊಹ್ಲಿ ಓರ್ವ ಲೆಜೆಂಡ್ ಅವರೊಂದಿಗೆ ಮೈದಾನದಲ್ಲಿ ಆಡುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ ಎಂದಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಮಾರ್ಗದರ್ಶಕನಾಗಿ ಕೊಹ್ಲಿ ತನಗೆ ಮೈದಾನದ ಒಳಗೆ ಹಾಗೂ ಹೊರಗೆ ಅತ್ಯುತ್ತಮ ಸಲಹೆಗಳನ್ನು ನೀಡುತ್ತಿದ್ದಾರೆ ಎಂದಿರುವ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾದ ಮಾಜಿ ನಾಯಕನಿಂದ ಸಾಕಷ್ಟು ಮೌಲ್ಯಯುತ ಪಾಠಗಳನ್ನು ಕಲಿಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
"ಅವರು ಬ್ಯಾಟಿಂಗ್ ಮಾಡುವುದನ್ನು ನೀಡುವುದೇ ಅದ್ಭುತ. ಅದರ ಬಗ್ಗೆ ನಾನು ಏನು ಹೇಳಲಿ? ಆತನೋರ್ವ ದಿಗ್ಗಜ. ಅವರೊಂದಿಗೆ ಆಡುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ. ಕ್ರಿಎಕಟ್ ಆಗಿರಲಿ ಅಥವಾ ಕ್ರಿಕೆಟ್‌ನ ಹೊರತಾಗಿರಲಿ ಅವರಿಂದ ಕಲಿಯುವುದು ಸಾಕಷ್ಟಿದೆ. ಅವರಿಂದ ಸಾಧ್ಯವಾದಷ್ಟನ್ನು ಕಲಿಯುವ ಪ್ರಯತ್ನದಲ್ಲಿದ್ದೇನೆ" ಎಂದು ಯಶಸ್ವಿ ಜೈಸ್ವಾಲ್ ಮೊದಲ ದಿನದಾಟದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.
ಇನ್ನು ಈ ಪಂದ್ಯದಲ್ಲಿ ವರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಬಾರಿಸುವ ಸನಿಹದಲ್ಲಿದ್ದಾರೆ. ಮೊದಲ ದಿನದಾಟದಲ್ಇ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಭಾರತ ದಿನದಾಟದ ಅಂತ್ಯದಲ್ಲಿ 288/4 ರನ್‌ಗಳನ್ನು ಗಳಿಸಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್, ಶಾನನ್ ಗೇಬ್ರಿಯಲ್
ಬೆಂಚ್: ಕೆವಿನ್ ಸಿಂಕ್ಲೇರ್, ರಹಕೀಮ್ ಕಾರ್ನ್ವಾಲ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಸರ್ ಪಟೇಲ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್