ಭಾರತ vs ಜಿಂಬಾಬ್ವೆ ಸರಣಿಯ ನೇರ ಪ್ರಸಾರ ಯಾವ ಚಾನೆಲ್‌ನಲ್ಲಿ ಲಭ್ಯ? ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಇಂದಿನಿಂದ ( ಆಗಸ್ಟ್ 18 ) ಭಾರತ ಮತ್ತು ಜಿಂಬಾಬ್ವೆ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳುತ್ತಿದೆ. ನಾಯಕ ಕೆಎಲ್ ರಾಹುಲ್ ಸೇರಿದಂತೆ ಕೆಲ ಆಟಗಾರರು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಹಲವು ಆಟಗಾರರನ್ನು ಸೇರಿಕೊಂಡಿದ್ದು, 4 ದಿನಗಳ ಹಿಂದೆಯೇ ಜಿಂಬಾಬ್ವೆಯ ರಾಜಧಾನಿ ಹರಾರೆಗೆ ತಲುಪಿ ಸರಣಿಗಾಗಿ ತಾಲೀಮು ಆರಂಭಿಸಿದ್ದರು.
ಇನ್ನು ಇದಕ್ಕೂ ಮುನ್ನ ಬಾಂಗ್ಲಾದೇಶದ ವಿರುದ್ಧ 2-1 ಅಂತರದಲ್ಲಿ ಸರಣಿಯನ್ನು ಗೆದ್ದು ಬೀಗಿರುವ ಜಿಂಬಾಬ್ವೆ ಈ ಸರಣಿಯಲ್ಲಿಯೂ ಸಹ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದರೆ, ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡು ಸಾಲುಸಾಲು ಪಂದ್ಯಗಳಲ್ಲಿ ಗೆದ್ದು ಗೆಲುವಿನ ನಾಗಾಲೋಟದಲ್ಲಿರುವ ಟೀಮ್ ಇಂಡಿಯಾ ಈ ಸರಣಿ ಗೆಲ್ಲುವ ಫೇವರಿಟ್ ತಂಡ ಎನಿಸಿಕೊಂಡಿದೆ.
ಇನ್ನು ಇದೇ ತಿಂಗಳ ಅಂತಿಮ ವಾರದಲ್ಲಿ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಆರಂಭವಾಗುವ ಹಿನ್ನೆಲೆಯಲ್ಲಿ ಈ ಟೂರ್ನಿಯಲ್ಲಿ ಭಾಗವಹಿಸುವ ಹಲವು ಪ್ರಮುಖ ಆಟಗಾರರು ಈ ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದು ಟೂರ್ನಿಗಾಗಿ ಸಿದ್ಧತೆ ನಡೆಸಿಕೊಳ್ಳುತ್ತಿರುವ ಕಾರಣ ಉಳಿದ ಆಟಗಾರರನ್ನೊಳಗೊಂಡ ಟೀಮ್ ಇಂಡಿಯಾ ಈ ಸರಣಿಯಲ್ಲಿ ಭಾಗವಹಿಸಲಿದೆ ಹಾಗೂ ಏಷ್ಯಾಕಪ್ ಟೂರ್ನಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಕೆಲ ಆಟಗಾರರು ಸಹ ಈ ತಂಡದಲ್ಲಿದ್ದಾರೆ. ಅತ್ತ ಬಾಂಗ್ಲಾದೇಶದ ವಿರುದ್ಧ ಆಯೋಜನೆಯಾಗಿದ್ದ ಕಳೆದೆರಡೂ ಸರಣಿಗಳಲ್ಲಿಯೂ ಗೆದ್ದಿರುವ ಜಿಂಬಾಬ್ವೆ ತಂಡದ ಕೆಲ ಆಟಗಾರರು ಟೀಮ್ ಇಂಡಿಯಾವನ್ನು ಮಣಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಭಯ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯ ಇಂದು ( ಆಗಸ್ಟ್ 18 ) ಮಧ್ಯಾಹ್ನ 12.45ಕ್ಕೆ ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತದಲ್ಲಿ ಯಾವ ಚಾನೆಲ್ ಮೂಲಕ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು ಹಾಗೂ ಮೊಬೈಲ್ ಮೂಲಕ ಆನ್‌ಲೈನ್ ನೇರಪ್ರಸಾರವನ್ನು ವೀಕ್ಷಿಸುವ ಮಾರ್ಗವೇನು ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ನೇರಪ್ರಸಾರ
ಭಾರತ ಮತ್ತು ಜಿಂಬಾಬ್ವೆ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಭಾರತದಲ್ಲಿ ಸೋನಿ ಸ್ಪೋರ್ಟ್ ನೆಟ್‌ವರ್ಕ್ ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿವೆ. ಈ ಪಂದ್ಯಗಳನ್ನು ಮೊಬೈಲ್ ಅಪ್ಲಿಕೇಶನ್ ಆದ ಸೋನಿ ಲಿವ್ ಮುಖಾಂತರ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳ ನಡುವಿನ ಏಕದಿನ ಮುಖಾಮುಖಿ
ಭಾರತ ಮತ್ತು ಜಿಂಬಾಬ್ವೆ ತಂಡಗಳು ಇಲ್ಲಿಯವರೆಗೂ ಒಟ್ಟು 63 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಈ ಪೈಕಿ ಭಾರತ 51 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಜಿಂಬಾಬ್ವೆ ಕೇವಲ 10 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಈ ಮೂಲಕ ಉಭಯ ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ಭಾರತ ತಂಡ ಸ್ಪಷ್ಟ ಮೇಲುಗೈ ಸಾಧಿಸಿ ಹಿಡಿತವನ್ನು ಹೊಂದಿದೆ.

ಪ್ರಥಮ ಏಕದಿನ ಪಂದ್ಯದ ಸಂಭಾವ್ಯ ಆಡುವ ಬಳಗ
ಇಂದು ( ಆಗಸ್ಟ್ 18 ) ನಡೆಯಲಿರುವ ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ.
ಭಾರತ: ಶಿಖರ್ ಧವನ್, ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಜಿಂಬಾಬ್ವೆ: ತಡಿವಾನಾಶೆ ಮರುಮಾನಿ, ತಕುದ್ಜ್ವಾನಾಶೆ ಕೈಟಾನೊ, ಇನ್ನೊಸೆಂಟ್ ಕೈಯಾ, ವೆಸ್ಲಿ ಮಾಧೆವೆರೆ, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ) (ವಿಕೆಟ್ ಕೀಪರ್), ಟೋನಿ ಮುನ್ಯೊಂಗಾ, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications