ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ZIM: ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ಶಿಖರ್ ಧವನ್‌ಗೆ ಮತ್ತೆ ನಾಯಕತ್ವ

IND vs ZIM: India Squad Announced For ODI Series Against Zimbabwe: Shikhar Dhawan Again Captain

ಆಗಸ್ಟ್ 18ರಿಂದ ಹರಾರೆಯಲ್ಲಿ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. 15 ಮಂದಿಯ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

WI vs IND: ಈ ಇಬ್ಬರಿಂದ ಭಾರತ ತಂಡಕ್ಕೆ ಸಮತೋಲನ; ಮಾಜಿ ಕೋಚ್ ಭವಿಷ್ಯWI vs IND: ಈ ಇಬ್ಬರಿಂದ ಭಾರತ ತಂಡಕ್ಕೆ ಸಮತೋಲನ; ಮಾಜಿ ಕೋಚ್ ಭವಿಷ್ಯ

ಅನುಭವಿ ಶಿಖರ್ ಧವನ್ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತವನ್ನು 3-0 ಗೆಲುವಿಗೆ ಕಾರಣರಾದರು. ಜಿಂಬಾಬ್ವೆ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ರಿಷಭ್ ಪಂತ್, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಲವಾರು ಹಿರಿಯರಿಗೆ ವಿಶ್ರಾಂತಿ ನೀಡಲಾಗಿದೆ. ಆಯ್ಕೆದಾರರು ಇಲ್ಲೂ ವೆಸ್ಟ್ ಇಂಡೀಸ್ ಸರಣಿಯ ಮಾದರಿಯನ್ನು ಮುಂದುವರೆಸಿದ್ದಾರೆ.

ವಿರಾಟ್ ಕೊಹ್ಲಿಗೆ ಜಿಂಬಾಬ್ವೆ ವಿರುದ್ಧದ ಸರಣಿಯಿಂದಲೂ ವಿಶ್ರಾಂತಿ

ವಿರಾಟ್ ಕೊಹ್ಲಿಗೆ ಜಿಂಬಾಬ್ವೆ ವಿರುದ್ಧದ ಸರಣಿಯಿಂದಲೂ ವಿಶ್ರಾಂತಿ

ಯುವ ಬ್ಯಾಟ್ಸ್‌ಮನ್ ರಾಹುಲ್ ತ್ರಿಪಾಠಿ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಆಡುವ 11ರ ಬಳಗದಲ್ಲಿ ಅವಕಾಶ ಸಿಕ್ಕರೆ ಅವರು ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಜಿಂಬಾಬ್ವೆ ವಿರುದ್ಧದ ಸರಣಿಯಿಂದಲೂ ವಿಶ್ರಾಂತಿ ನೀಡಲಾಗಿದ್ದು, ನೇರವಾಗಿ ಏಷ್ಯಾಕಪ್‌ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಗಾಯದಿಂದ ಚೇತರಿಸಿಕೊಂಡಿರುವ ದೀಪಕ್ ಚಹಾರ್ ಪೂರ್ಣ ಫಿಟ್ನೆಸ್‌ಗೆ ಮರಳಿದ್ದಾರೆ ಮತ್ತು ವೇಗದ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ಗೂ ಶಕ್ತಿ ನೀಡಲಿದ್ದಾರೆ. ದೀಪಕ್ ಚಹಾರ್ ಅವರ ಫಿಟ್ನೆಸ್ ಸಾಬೀತುಪಡಿಸಲು ಜಿಂಬಾಬ್ವೆ ವಿರುದ್ಧದ ಸರಣಿ ನಿರ್ಣಾಯಕವಾಗಲಿದೆ. ಅವರು ಟಿ20 ಪಂದ್ಯಗಳನ್ನು ಸಹ ಆಡಲು ಆಶಿಸುತ್ತಿದ್ದಾರೆ, ಇದರಿಂದಾಗಿ ಅವರು ಟಿ20 ವಿಶ್ವಕಪ್‌ಗಾಗಿ ತಂಡದಲ್ಲಿ ಸ್ಥಾನಕ್ಕಾಗಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬಹುದು.

ಐಪಿಎಲ್‌ನಿಂದ ಹೊರಗುಳಿದಿದ್ದ ದೀಪಕ್ ಚಹಾರ್

ಐಪಿಎಲ್‌ನಿಂದ ಹೊರಗುಳಿದಿದ್ದ ದೀಪಕ್ ಚಹಾರ್

ಗಾಯದ ಸಮಸ್ಯೆಯಿಂದಾಗಿ ದೀಪಕ್ ಚಹಾರ್ ಐಪಿಎಲ್‌ನಿಂದ ಹೊರಗುಳಿದಿದ್ದರು. ಕೆಳ ಕ್ರಮಾಂಕದಲ್ಲಿ ಅವರ ಬ್ಯಾಟಿಂಗ್ ಸಾಮರ್ಥ್ಯವು ಅವರನ್ನು ವೈಟ್ ಬಾಲ್ ಕ್ರಿಕೆಟ್‌ನಲ್ಲಿ ತಂಡದ ಉತ್ತಮ ಆಸ್ತಿಯನ್ನಾಗಿ ಮಾಡುತ್ತದೆ.

ಇನ್ನು ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಕೂಡ ತಂಡಲ್ಲಿದ್ದಾರೆ ಮತ್ತು ಭಾರತ ತಂಡದೊಂದಿಗೆ ಸ್ವಲ್ಪ ಸಮಯವನ್ನು ಹೊಂದಲು ಇದು ಅವರಿಗೆ ಪ್ರಮುಖ ಅವಕಾಶವಾಗಿದೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್ ಅವರ ಜೊತೆಯಲ್ಲಿ ಮೊಹಮ್ಮದ್ ಸಿರಾಜ್ ವೇಗದ ಪಡೆಯನ್ನು ಮುನ್ನಡೆಸಲಿದ್ದಾರೆ.

ಜಿಂಬಾಬ್ವೆ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ

ಜಿಂಬಾಬ್ವೆ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

Story first published: Saturday, July 30, 2022, 21:28 [IST]
Other articles published on Jul 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X