IND vs ZIM: ಎರಡನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಸದ್ಯ ಜಿಂಬಾಬ್ವೆ ಪ್ರವಾಸದಲ್ಲಿ ನಿರತವಾಗಿರುವ ಕೆಎಲ್ ರಾಹುಲ್ ನಾಯಕತ್ವದ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸುತ್ತಿದೆ. ಆಗಸ್ಟ್ 18ರ ಗುರುವಾರದಂದು ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭರ್ಜರಿ ಹತ್ತು ವಿಕೆಟ್‍ಗಳ ಗೆಲುವನ್ನು ಕಂಡಿದ್ದ ಭಾರತ ಇದೀಗ ಎರಡನೇ ಏಕದಿನ ಪಂದ್ಯವನ್ನೂ ಸಹ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ.
ಉಭಯ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದು ( ಆಗಸ್ಟ್ 20 ) ಜಿಂಬಾಬ್ವೆ ರಾಜಧಾನಿ ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಜಿಂಬಾಬ್ವೆ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಟಾಸ್ ನಂತರ ಮಾತನಾಡಿದ ಕೆಎಲ್ ರಾಹುಲ್ ತಂಡದ ಆಡುವ ಬಳಗದಲ್ಲಿ ಏಕೈಕ ಬದಲಾವಣೆ ಇದೆ ಎಂಬುದನ್ನು ತಿಳಿಸಿದ್ದಾರೆ. ದೀಪಕ್ ಚಹರ್ ಪಂದ್ಯಕ್ಕೆ ಅಲಭ್ಯರಾಗಿದ್ದು, ದೀಪಕ್ ಚಹರ್ ಬದಲಾಗಿ ಶಾರ್ದೂಲ್ ಠಾಕೂರ್ ತಂಡ ಸೇರಿದ್ದಾರೆ.
ಭಾರತ ಮತ್ತು ಜಿಂಬಾಬ್ವೆ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇಲ್ಲಿದೆ:
ಆಡುವ ಬಳಗಗಳು:
ಭಾರತ ಆಡುವ ಬಳಗ: ಶಿಖರ್ ಧವನ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಜಿಂಬಾಬ್ವೆ ಆಡುವ ಬಳಗ: ಇನ್ನೊಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications