IND vs ZIM: 3ನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಇಂದು (ಸೋಮವಾರ) ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಕಣಕ್ಕಿಳಿಯಲಿದ್ದು, ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ.
ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ಎದುರಾಳಿ ಜಿಂಬಾಬ್ವೆ ತಂಡವನ್ನು ಮೊದಲು ಬೌಲಿಂಗ್‌ಗೆ ಆಹ್ವಾನಿಸಿದ್ದಾರೆ.
ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿ ಆತಿಥೇಯರನ್ನು ಕ್ರಮವಾಗಿ 189 ಮತ್ತು 161ಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಿತು.
ಆಗಸ್ಟ್ 18ರ ಗುರುವಾರದಂದು ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭರ್ಜರಿ ಹತ್ತು ವಿಕೆಟ್‌ಗಳ ಗೆಲುವನ್ನು ಕಂಡಿದ್ದ ಭಾರತ, ಎರಡನೇ ಪಂದ್ಯದಲ್ಲಿ ಐದು ವಿಕೆಟ್‌ಗಳ ಅಂತರದಲ್ಲಿ ಆತಿಥೇಯ ತಂಡವನ್ನು ಮಣಿಸಿತು.
ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ಕೆಎಲ್ ರಾಹುಲ್ ಅವರು ಕೇವಲ ಒಂದು ರನ್ ಗಳಿಸಿ ನಿರ್ಗಮಿಸಿದ ಕಾರಣ ನಿರಾಶೆಗೊಳಿಸಿದರು ಮತ್ತು ಇಂದು ಅವರು ದೊಡ್ಡ ಮೊತ್ತವನ್ನು ದಾಖಲಿಸುವ ಭರವಸೆಯಲ್ಲಿದ್ದಾರೆ. ಬರುವ ಭಾನುವಾರದಂದು (ಆಗಸ್ಟ್ 28) ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಪಂದ್ಯದ ಮೊದಲು ರನ್ ಗಳಿಸಬೇಕಾಗಿದೆ.
ವೇಗಿ ದೀಪಕ್ ಚಹಾರ್ ಅಂತಿಮ ಪಂದ್ಯಕ್ಕೆ ಮರಳಿದ್ದರೆ, ಅವೇಶ್ ಖಾನ್ ಕೂಡ ಆಡುವ ಆಡುವ 11ರ ಬಳಗಕ್ಕೆ ಸೇರ್ಪಡೆಗೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಜೋಡಿ ವಿಶ್ರಾಂತಿ ನೀಡಲಾಗಿದೆ.
ಜಿಂಬಾಬ್ವೆ ಮತ್ತು ಭಾರತ ತಂಡದ ಆಡುವ 11ರ ಬಳಗ
ಭಾರತ: ಶಿಖರ್ ಧವನ್, ಶುಬ್‌ಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ದೀಪಕ್ ಚಹಾರ್, ಅವೇಶ್ ಖಾನ್
ಜಿಂಬಾಬ್ವೆ: ತಕುದ್ಜ್ವಾನಾಶೆ ಕೈಟಾನೊ, ಇನೊಸೆಂಟ್ ಕೈಯಾ, ಟೋನಿ ಮುನ್ಯೊಂಗಾ, ರೆಗಿಸ್ ಚಕಬ್ವಾ (ನಾಯಕ/ ವಿಕೆಟ್ ಕೀಪರ್), ಸಿಕಂದರ್ ರಜಾ, ಸೀನ್ ವಿಲಿಯಮ್ಸ್, ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ರಿಚರ್ಡ್ ನ್ಗರವ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications