Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ZIM: ಭಾರತ vs ಜಿಂಬಾಬ್ವೆ ಟಿ20 ಸರಣಿಯ ಸಂಪೂರ್ಣ ವೇಳಾಪಟ್ಟಿ; ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಮುಗಿದ ಬಳಿಕ ಭಾರತ ಕ್ರಿಕೆಟ್ ತಂಡವು 5 ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಜುಲೈ 6ರಿಂದ ಜಿಂಬಾಬ್ವೆ ವಿರುದ್ಧ ಟಿ20 ಸರಣಿ ಆರಂಭಗೊಳ್ಳಲಿದೆ.

ಇದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಭ್ಮನ್ ಗಿಲ್ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಸೋಮವಾರ, ಜೂನ್ 24ರಂದು ಪ್ರಕಟಿಸಿದೆ.

ಸದ್ಯ ಟಿ20 ವಿಶ್ವಕಪ್ ಆಡುತ್ತಿರುವ ಅನುಭವಿಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

IND vs ZIM India vs Zimbabwe T20 Series Complete Schedule TV And Live Streaming Details

ನಿರೀಕ್ಷೆಯಂತೆ, ಯುವ ಆಟಗಾರ ಶುಭ್ಮನ್ ಗಿಲ್ ಅವರನ್ನು ಭಾರತ ತಂಡದ ನಾಯಕ ಎಂದು ಹೆಸರಿಸಲಾಗಿದೆ. ಅಲ್ಲದೆ, ನಾಲ್ವರು ಯುವ ತಾರೆಗಳು ಭಾರತ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಜುಲೈ 6ರಿಂದ ಜುಲೈ 14ರವರೆಗೆ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ರಾಜಧಾನಿ ಹರಾರೆಗೆ ಯುವ ಭಾರತೀಯ ತಂಡವು ಪ್ರಯಾಣಿಸಲಿದೆ.

ಭಾರತ ತಂಡ ಕೊನೆಯ ಬಾರಿಗೆ ಜಿಂಬಾಬ್ವೆ ವಿರುದ್ಧ 2022ರಲ್ಲಿ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಆಗ ಟೀಮ್ ಇಂಡಿಯಾ ಸಂಪೂರ್ಣ ಮೂರು ಪಂದ್ಯಗಳ ಗೆಲುವುಗಳೊಂದಿಗೆ ಸರಣಿ ವಶಪಡಿಸಿಕೊಂಡಿತ್ತು. ಇದೇ ವೇಳೆ ಶುಭ್ಮನ್ ಗಿಲ್ ಅವರನ್ನು ಸರಣಿಶ್ರೇಷ್ಠ ಆಟಗಾರ ಎಂದು ಗುರುತಿಸಲಾಗಿತ್ತು.

ಗಮನಾರ್ಹವಾಗಿ, 2016ರಲ್ಲಿ ಜಿಂಬಾಬ್ವೆಯಲ್ಲಿ ಉಭಯ ತಂಡಗಳು ದ್ವಿಪಕ್ಷೀಯ ಟಿ20 ಸರಣಿಯನ್ನು ಆಡಿದ್ದಾಗ, ಭಾರತ ತಂಡ 2-1 ಅಂತರದಲ್ಲಿ ಜಯಭೇರಿ ಬಾರಿಸಿತ್ತು.

ಭಾರತ vs ಜಿಂಬಾಬ್ವೆ ಟಿ20 ಸರಣಿ ವೇಳಾಪಟ್ಟಿ

  • 1ನೇ ಟಿ20 ಪಂದ್ಯ - ಜುಲೈ 6 - ಹರಾರೆ ಸ್ಪೋರ್ಟ್ಸ್ ಕ್ಲಬ್, ಭಾರತೀಯ ಕಾಲಮಾನ ಸಂಜೆ 4:30
  • 2ನೇ ಟಿ20 ಪಂದ್ಯ - ಜುಲೈ 7 - ಹರಾರೆ ಸ್ಪೋರ್ಟ್ಸ್ ಕ್ಲಬ್, ಭಾರತೀಯ ಕಾಲಮಾನ ಸಂಜೆ 4:30
  • 3ನೇ ಟಿ20 ಪಂದ್ಯ - ಜುಲೈ 10 - ಹರಾರೆ ಸ್ಪೋರ್ಟ್ಸ್ ಕ್ಲಬ್, ಭಾರತೀಯ ಕಾಲಮಾನ ಸಂಜೆ 4:30
  • 4ನೇ ಟಿ20 ಪಂದ್ಯ - ಜುಲೈ 13 - ಹರಾರೆ ಸ್ಪೋರ್ಟ್ಸ್ ಕ್ಲಬ್, ಭಾರತೀಯ ಕಾಲಮಾನ ಸಂಜೆ 4:30
  • 5ನೇ ಟಿ20 ಪಂದ್ಯ - ಜುಲೈ 14 - ಹರಾರೆ ಸ್ಪೋರ್ಟ್ಸ್ ಕ್ಲಬ್, ಭಾರತೀಯ ಕಾಲಮಾನ ಸಂಜೆ 4:30
IND vs ZIM India vs Zimbabwe T20 Series Complete Schedule TV And Live Streaming Details

ಭಾರತ vs ಜಿಂಬಾಬ್ವೆ ಟಿ20 ಸರಣಿಯ ಟಿವಿ ನೇರಪ್ರಸಾರ

ಮುಂಬರುವ ಭಾರತ ತಂಡದ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಟಿವಿ ಮತ್ತು ಡಿಜಿಟಲ್ ಪ್ರಸಾರದ ಹಕ್ಕುಗಳನ್ನು ಪಡೆದುಕೊಂಡಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಇಂಗ್ಲಿಷ್, ಹಿಂದಿ, ತಮಿಳು ಮತ್ತು ತೆಲುಗು ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಟಿ20 ಸರಣಿಯನ್ನು ನೇರಪ್ರಸಾರ ಮಾಡಲಿದೆ.

ಐದು ಪಂದ್ಯಗಳ ಟಿ20 ಸರಣಿಯನ್ನು ಸೋನಿ ಸ್ಪೋರ್ಟ್ಸ್ ಟೆನ್ 3 (ಹಿಂದಿ) SD & HD, ಸೋನಿ ಸ್ಪೋರ್ಟ್ಸ್ ಟೆನ್ 4 (ತಮಿಳು/ತೆಲುಗು) ಮತ್ತು ಸೋನಿ ಸ್ಪೋರ್ಟ್ಸ್ ಟೆನ್ 5 SD & HD ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಭಾರತ vs ಜಿಂಬಾಬ್ವೆ ಟಿ20 ಸರಣಿಯ ಲೈವ್ ಸ್ಟ್ರೀಮಿಂಗ್

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ. ಮುಂಬರುವ ಸರಣಿಯ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲು ಪಾವತಿಸಿದ ಚಂದಾದಾರಿಕೆಯ ಅಗತ್ಯವಿದೆ.

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

Story first published: Monday, June 24, 2024, 20:36 [IST]
Other articles published on Jun 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+