IND vs ZIM Super 8: ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ, ಸಮಯ, ನೇರ ಪ್ರಸಾರದ ಮಾಹಿತಿ
ಚೆನ್ನೈ: ಟಿ20 ವಿಶ್ವಕಪ್ನ ಸೂಪರ್ 8 ಹಂತದ ಪಂದ್ಯದಲ್ಲಿ ಗುರುವಾರ ಭಾರತ ಹಾಗೂ ಜಿಂಬಾಬ್ವೆ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಹಂತದ ಪಂದ್ಯವನ್ನು ಸೋತಿದ್ದರಿಂದ, ಮುಂದಿನ ಎಲ್ಲ ಪಂದ್ಯಗಳು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ ಆಗಿರಲಿವೆ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಈ ಮೊದಲು ಉಭಯ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಆ ಪಂದ್ಯವನ್ನು ಭಾರತ ಗೆದ್ದಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ದೊಡ್ಡ ಅಂತರದ ಗೆಲುವಿನ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಅಂದಾಗ ರನ್ ರೇಟ್ ಸುಧಾರಿಸುತ್ತದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ದೊಡ್ಡ ಇನಿಂಗ್ಸ್ ಕಟ್ಟುವುದು ಅನಿವಾರ್ಯವಾಗಿದೆ. ಈ ಪಂದ್ಯದ ಸಂಪೂರ್ಣ ಮಾಹಿತಿಯ ಚಿತ್ರಣ ಇಲ್ಲಿದೆ.

ಪಿಚ್ ಯಾರಿಗೆ ಸಹಾಯಕ?
ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡುತ್ತದೆ ಎಂದು ಮೊದಲಿನಿಂದಲೂ ಹೆಸರುವಾಸಿ. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ಈ ಪಿಚ್ ವರ್ತನೆ ಕೊಂಚ ಭಿನ್ನವಾಗಿದೆ.ಈಗ ಈ ಪಿಚ್ ಬ್ಯಾಟರ್‌ಗಳಿಗೆ ಕೊಂಚ ಅನುಕೂಲಕಾರಿಯಾಗಿದೆ. ಅಲ್ಲದೆ ಈ ಪಿಚ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದಲ್ಲಿ ಸ್ಪಿನ್ ಬೌಲರ್‌ಗಳು ಸಹ ಮಿಂಚಿನ ಪ್ರದರ್ಶನ ನೀಡಬಲ್ಲರು. ಈ ಮೈದಾನದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸುತ್ತದೆ. ಈ ಪಿಚ್‌ನಲ್ಲಿ 60 ಕ್ಕೂ ಹೆಚ್ಚು ಪ್ರತಿಶತ ಪಂದ್ಯಗಳನ್ನು ಮೊದಲು ಬ್ಯಾಟ್ ಮಾಡಿದ ತಂಡವೇ ಗೆದ್ದಿದೆ.
ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳು ಎಷ್ಟು ಬಾರಿ ಮುಖಾಮುಖಿಯಾಗಿವೆ?
ಉಭಯ ತಂಡಗಳು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 13 ಬಾರಿ ಮುಖಾಮುಖಿಯಾಗಿದ್ದು, 10ರಲ್ಲಿ ಭಾರತ ಜಯ ಸಾಧಿಸಿದೆ.
ಭಾರತ ತಂಡದಲ್ಲಿ ಯಾರಿಗೆಲ್ಲಾ ಸಿಗುತ್ತೇ ಸ್ಥಾನ?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್/ತಿಲಕ್ ವರ್ಮಾ, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ.
ಜಿಂಬಾಬ್ವೆ ತಂಡದಲ್ಲಿ ಈ ಆಟಗಾರರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ
ತಡಿವಾನಾಶೆ ಮರುಮಣಿ, ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ರಿಯಾನ್ ಬರ್ಲ್, ಸಿಕಂದರ್ ರಾಜಾ, ಟೋನಿ ಮುನ್ಯೊಂಗಾ, ತಾಶಿಂಗ ಮುಸೆಕಿವಾ, ಬ್ರಾಡ್ ಈವೆನ್ಸ್, ಗ್ರೇಮ್ ಕ್ರೀಮರ್, ಬ್ಲೆಸ್ಸಿಂಗ್ ಮುಜರಬಾನಿ, ರಿಚರ್ಡ್ ನ್ಗರಾವಾ.
ಮಹತ್ವದ ಅಂಕಿ ಅಂಶ
ಈ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಜಾ 15 ರನ್ ಬಾರಿಸುವಲ್ಲಿ ಸಫಲರಾದರೆ, ಟಿ20 ಕ್ರಿಕೆಟ್‌ನಲ್ಲಿ ಜಿಂಬಾಬ್ವೆ ಪರ 3 ಸಾವಿರ ರನ್ ಸಾಧನೆ ಮಾಡಲಿದ್ದಾರೆ. ಇನ್ನು ರಯಾನ್ ಬರ್ಲ್ 57 ರನ್ ಬಾರಿಸಿದರೆ ಜಿಂಬಾಬ್ವೆ ಪರ 2 ಸಾವಿರ ರನ್ ಮುಟ್ಟಿದ ದಾಖಲೆ ಬರೆಯಲಿದ್ದಾರೆ.
ಸೂಪರ್ 8 ಹಂತದ ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ಭಾರತ ಹಾಗೂ ಜಿಂಬಾಬ್ವೆ ನಡುವಣ ಸೂಪರ್ 8 ಹಂತದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಭಾರತ, ಜಿಂಬಾಬ್ವೆ ನಡುವಣ ಪಂದ್ಯ ನಡೆಯುವುದು ಯಾವಾಗ?
ಭಾರತ, ಜಿಂಬಾಬ್ವೆ ನಡುವಣ ಟಿ20 ವಿಶ್ವಕಪ್ನ ಸೂಪರ್ 8 ಹಂತದ ಪಂದ್ಯ ಸಂಜೆ 7ಕ್ಕೆ ನಡೆಯಲಿದೆ. ಅಲ್ಲದೆ ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications