ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ, ವೈಭವ್‌ಗೆ ಚಾನ್ಸ್, ಸಂಜು ಔಟ್.. ಇಲ್ಲಿದೆ ಪಟ್ಟಿ
IND vs ZIM T20: ಇದೀಗ ಸದ್ಯ ಇಂಗ್ಲೆಡ್-ಭಾರತದ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ನಡುವೆಯೇ ಬಿಸಿಸಿಐ ಇಂದು (ಜುಲೈ 06) ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ 15 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಇದರಲ್ಲೂ 15 ವರ್ಷದ ವೈಭವ್ ಸೂರ್ಯವಂಶಿ ಅವರು ಸ್ಥಾನ ಪಡೆದಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ. ಹಾಗಾದ್ರೆ ಯಾರೆಲ್ಲಾ ಇದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಮುಂಬರು ಜುಲೈ 23ರಿಂದ ಆರಂಭ ಆಗಲಿರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸೋಮವಾರ ಈ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಹಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಸಂಜು ಸ್ಯಾಮ್ಸನ್‌ಗೆ ಶಾಕ್ ನೀಡಿದ ಆಯ್ಕೆ ಸಮಿತಿ
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಇತಿಹಾಸ ಸೃಷ್ಟಿಸಿದ್ದ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಆಯ್ಕೆ ಸಮಿತಿ ಶಾಕ್ ನೀಡಿದೆ.
ಜಿಂಬಾಬ್ವೆ ಪ್ರವಾಸಕ್ಕೆ ವೈಭವ್ ಆಯ್ಕೆ
ಬಿಹಾರ ಮೂಲದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಲು ವೈಭವ್ ವಿಫಲರಾಗಿದ್ದು, ಆದರೂ ಕೇವಲ 15ನೇ ವಯಸ್ಸಿಗೆ ಭಾರತ ತಂಡವನ್ನು ಪ್ರತಿನಿಧಿಸಿ ಅತಿ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇವರ ಈ ಅಸಾಧಾರಣ ಸಾಧನೆ ಇಡೀ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದೆ. ಈ ಬಾಲಕನಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಿಸಿಸಿಐ ಇವರನ್ನು ಜಿಂಬಾಬ್ವೆ ಪ್ರವಾಸಕ್ಕೂ ಆಯ್ಕೆ ಮಾಡಿದೆ ಎನ್ನಲಾಗಿದೆ.
ಸಂಜು ಸ್ಯಾಮ್ಸನ್‌ಗೆ ಒಲಿಯದ ಅದೃಷ್ಟ
ಸಂಜು ಸ್ಯಾಮ್ಸನ್ ಅವರನ್ನು ಜಿಂಬಾಬ್ವೆ ಸರಣಿಯಿಂದ ಸಂಪೂರ್ಣವಾಗಿ ಹೊರಗಿಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಟಿ20 ಸರಣಿಯಲ್ಲೂ ಯುವ ಆಟಗಾರ ವೈಭವ್‌ಗೆ ಅವಕಾಶ ನೀಡುವ ಸಲುವಾಗಿ ಸಂಜು ಅವರನ್ನು ಪ್ಲೇಯಿಂಗ್ 11ನಿಂದ ಕೈಬಿಡಲಾಗಿತ್ತು. ಈಗ ಜಿಂಬಾಬ್ವೆ ಪ್ರವಾಸದ 15ರ ಬಳಗದಲ್ಲೂ ಅವರ ಹೆಸರಿಲ್ಲದಿರುವುದು ಅಭಿಮಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿದೆ.
ಟಿ20 ವಿಶ್ವಕಪ್ ಹೀರೋಗೆ ಹಿನ್ನಡೆ
ವಿಪರ್ಯಾಸ ಅಂದ್ರೆ ಇದೇ ವರ್ಷದ ಆರಂಭದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಾಗ ಅದ್ಭುತ ಪ್ರದರ್ಶನ ನೀಡಿ ಟೂರ್ನಮೆಂಟ್‌ನ ಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದಿದ್ದ ಸಂಜು ಸ್ಯಾಮ್ಸನ್, ಬಳಿಕ ಇಂಗ್ಲೆಂಡ್ ಪ್ರವಾಸದಲ್ಲಿ ತೀವ್ರ ಕಳಪೆ ಫಾರ್ಮ್ ಸಮಸ್ಯೆ ಎದುರಿಸಿದ್ದಾರೆ. ಈ ಸತತ ಬ್ಯಾಟಿಂಗ್ ವೈಫಲ್ಯವೇ ಅವರನ್ನು ಕೈಬಿಡಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆ
ವಿಶ್ವಕಪ್‌ನಂತಹ ದೊಡ್ಡ ವೇದಿಕೆಯಲ್ಲಿ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದ ಸಂಜು ಸ್ಯಾಮ್ಸನ್ ಅವರನ್ನು ಕೇವಲ ಮೂರು ಪಂದ್ಯಗಳ ಕಳಪೆ ಪ್ರದರ್ಶನದ ಆಧಾರದ ಮೇಲೆ ಜಿಂಬಾಬ್ವೆ ಪ್ರವಾಸದಿಂದ ಕೈಬಿಟ್ಟಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಸಿಸಿಐನ ಈ ಅಚ್ಚರಿಯ ನಿರ್ಧಾರದ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸುತ್ತಲಿದ್ದಾರೆ.
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್). ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವ್ರತಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಂಕ್ ಯಾದವ್, ಪ್ರಭ್‌ಸಿಮ್ರನ್ ಸಿಂಗ್.
ಭಾರತ vs ಜಿಂಬಾಬ್ವೆ ಟಿ20 ಸರಣಿಯ ವೇಳಾಪಟ್ಟಿ
* 23 ಜುಲೈ 2026: ಒಂದನೇ ಟಿ20 ಪಂದ್ಯ
* 25 ಜುಲೈ 2026: ಎರಡನೇ ಟಿ20 ಪಂದ್ಯ
* 26 ಜುಲೈ 2026: ಮೂರನೇ ಟಿ20 ಪಂದ್ಯ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications