Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ZIM: ಏಕದಿನ ಸರಣಿಗಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ; ವಿವಿಎಸ್ ಲಕ್ಷ್ಮಣ್ ಕೋಚ್?

IND vs ZIM: Team India Tour Zimbabwe For ODI Series; VVS Laxman Will Be Coach

ಜುಲೈ ತಿಂಗಳ ಅಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ಮುಕ್ತಾಯದ ನಂತರ, ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ವೇಳೆ ತಂಡದ ಆಯ್ಕೆ ಮಾಡಲಾಗುತ್ತದೆ.

ಏಷ್ಯಾಕಪ್‌ಗೂ ಮುನ್ನ ಭಾರತ ತಂಡವು ಸೀಮಿತ ಓವರ್‌ಗಳ ಸರಣಿಗಾಗಿ ಜಿಂಬಾಬ್ವೆಗೆ ತೆರಳಬೇಕಿದೆ. ಜಿಂಬಾಬ್ವೆ ಕ್ರಿಕೆಟ್ ಮಂಡಳಿಯ ಮೂಲವೊಂದು ಎಎನ್‌ಐಗೆ ತಿಳಿಸಿದೆ. "ಹೌದು, ಟೀಂ ಇಂಡಿಯಾ ಕಡಿಮೆ ಅವಧಿಯ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ. ಮೊದಲ ಪಂದ್ಯ ಆಗಸ್ಟ್ 18 ರಂದು, ಎರಡನೇ ಪಂದ್ಯ ಆಗಸ್ಟ್ 20ರಂದು ಮತ್ತು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ".

ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಈ ವರ್ಷವೂ ಮುಂದುವರೆದಿದೆ, ಏಕೆಂದರೆ ಭಾರತದ ಎರಡು ತಂಡಗಳು ಒಂದೇ ಸಮಯದಲ್ಲಿ ಪ್ರಯಾಣಿಸಲಿವೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ತಿಳಿಸಿವೆ.

ಜುಲೈ 22ರಿಂದ ವೆಸ್ಟ್ ಇಂಡೀಸ್ ಪ್ರವಾಸ

ಜುಲೈ 22ರಿಂದ ವೆಸ್ಟ್ ಇಂಡೀಸ್ ಪ್ರವಾಸ

"ಭಾರತ 'ಬಿ' ತಂಡವು ಜಿಂಬಾಬ್ವೆಗೆ ಸರಣಿಗಾಗಿ ಪ್ರಯಾಣಿಸಲಿದೆ ಮತ್ತು ವಿವಿಎಸ್ ಲಕ್ಷ್ಮಣ್ ಅವರು ತಂಡದ ಕೋಚ್ ಆಗಿರುತ್ತಾರೆ,'' ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪ್ರಸ್ತುತ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಯನ್ನು ಆಡುತ್ತಿದೆ ಮತ್ತು ಇದರ ನಂತರ, ಶಿಖರ್ ಧವನ್ ನಾಯಕತ್ವದ ಭಾರತ ತಂಡ ಜುಲೈ 22ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಂದ್ಯಗಳ ಟಿ20 ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.

ವಿರಾಟ್ ಕೊಹ್ಲಿ ಫಾರ್ಮ್ ಮರಳಿ ಪಡೆಯುವಲ್ಲಿ ವಿಫಲ

ವಿರಾಟ್ ಕೊಹ್ಲಿ ಫಾರ್ಮ್ ಮರಳಿ ಪಡೆಯುವಲ್ಲಿ ವಿಫಲ

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಬ್ಯಾಟರ್ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವೇಗಿ ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್ ಮತ್ತು ಭುವನೇಶ್ವರ್ ಕುಮಾರ್ ಅವರು ಏಕದಿನದಿಂದ ವಿಶ್ರಾಂತಿ ಪಡೆದ ಹಿರಿಯ ಆಟಗಾರರಲ್ಲಿ ಸೇರಿದ್ದಾರೆ. ಇದೇ ವೇಳೆ ಏಕದಿನದ ಜೊತೆಗೆ ಟಿ20 ಸರಣಿಗೂ ತಮ್ಮನ್ನು ಪರಿಗಣಿಸದಂತೆ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಬಿರುಸಿನ ಬ್ಯಾಟಿಂಗ್ ಪ್ರದರ್ಶನಕ್ಕೆ ಹೆಸರಾಗಿದ್ದ ವಿರಾಟ್ ಕೊಹ್ಲಿ ಫಾರ್ಮ್ ಮರಳಿ ಪಡೆಯುವಲ್ಲಿ ವಿಫಲರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಿಂದ ಹೊರಗುಳಿದ ನಂತರ, ಮಾಜಿ ನಾಯಕ ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಐದನೇ ಟೆಸ್ಟ್‌ನಲ್ಲಿ ಕೇವಲ 31 ರನ್ ಗಳಿಸಲು ಸಾಧ್ಯವಾಯಿತು.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್

Story first published: Saturday, July 9, 2022, 16:15 [IST]
Other articles published on Jul 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+