IND vs ZIM: ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡಕ್ಕೆ ಲಕ್ಷ್ಮಣ್ ಕೋಚ್!; ಗಂಭೀರ್ ಕಾರ್ಯ ಯಾವಾಗ ಆರಂಭ?
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಮುಗಿಯುತ್ತಿದ್ದಂತೆ, ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅವಧಿಯ ಮುಕ್ತಾಯದ ಬಳಿಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧಿಕಾರಿಗಳು ಭಾರತ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಘೋಷಿಸಲು ಸಜ್ಜಾಗಿದ್ದಾರೆ.
ದೆಹಲಿ ಮೂಲದ ಕ್ರಿಕೆಟಿಗ ಗೌತಮ್ ಗಂಭೀರ್ ಇತ್ತೀಚೆಗೆ ವರ್ಚುವಲ್ ಕರೆ ಮೂಲಕ ಸಿಎಸಿ (ಕ್ರಿಕೆಟ್ ಸಲಹಾ ಸಮಿತಿ)ಯ ಸಂದರ್ಶನಕ್ಕೆ ಹಾಜರಾಗಿದ್ದರು. ಹೆಸರು ಪ್ರಕಟಿಸುವ ಮೊದಲು ಬಿಸಿಸಿಐ ಎಲ್ಲಾ ದಾಖಲೆಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಲಿದೆ.

ಜುಲೈ 6ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಜಿಂಬಾಬ್ವೆಗೆ ಪ್ರಯಾಣ ಬೆಳೆಸಲಿದೆ. ಇತ್ತೀಚಿನ ವರದಿಗಳ ಪ್ರಕಾರ, ಸಂಭಾವ್ಯ ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತ ತಂಡವನ್ನು ಸೇರಿಕೊಳ್ಳುವುದಿಲ್ಲ.
ಬದಲಾಗಿ, ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಯುವ ತಂಡದೊಂದಿಗೆ ಜಿಂಬಾಬ್ವೆಗೆ ಪ್ರಯಾಣಿಸಲಿದ್ದಾರೆ. ಟಿ20 ವಿಶ್ವಕಪ್ ತಂಡದ ಭಾಗವಾಗಿರದ ಕ್ರಿಕೆಟಿಗರನ್ನು ಭಾರತ ಒಳಗೊಂಡಿರುತ್ತದೆ.
ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ವಿವಿಎಸ್ ಲಕ್ಷ್ಮಣ್ ಅನೇಕ ಬಾರಿ ಈ ಜವಾಬ್ದಾರಿ ನಿಭಾಯಿಸಿದ್ದಾರೆ ಮತ್ತು ಅದೇ ಮಾದರಿಯು ಮುಂದುವರಿಯುವ ಸಾಧ್ಯತೆಯಿದೆ. ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶನದಲ್ಲಿ, ಭಾರತ ತಂಡವು ಅಕ್ಟೋಬರ್ 2023ರ ಏಷ್ಯನ್ ಗೇಮ್ಸ್ ಮತ್ತು ಇತರ ಅನೇಕ ದ್ವಿಪಕ್ಷೀಯ ಸರಣಿಗಳನ್ನು ಗೆದ್ದುಕೊಂಡಿದೆ.

ಜುಲೈ 27ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಗೌತಮ್ ಗಂಭೀರ್ ಭಾರತ ಹಿರಿಯರ ಕ್ರಿಕೆಟ್ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ. ಆಗ ಹಲವು ಹಿರಿಯ ಕ್ರಿಕೆಟಿಗರು ತಂಡಕ್ಕೆ ಮರಳುವ ಸಾಧ್ಯತೆಯಿದೆ. ಆದರೆ ಇನ್ನೂ ಯಾವುದನ್ನು ಅಧಿಕೃತಗೊಳಿಸಲಾಗಿಲ್ಲ.
"ವಿವಿಎಸ್ ಲಕ್ಷ್ಮಣ್ ಮತ್ತು ಕೆಲವು ಎನ್‌ಸಿಎ ಕೋಚ್‌ಗಳು ಹೊಸ ಹಾಗೂ ಯುವ ತಂಡದೊಂದಿಗೆ ಜಿಂಬಾಬ್ವೆಗೆ ಪ್ರಯಾಣಿಸುವ ಸಾಧ್ಯತೆಯಿದೆ. ಲಕ್ಷ್ಮಣ್ ಮತ್ತು ಎನ್‌ಸಿಎ ಕೋಚಿಂಗ್ ಸಿಬ್ಬಂದಿಯು ರಾಹುಲ್ ದ್ರಾವಿಡ್ ನೇತೃತ್ವದ ಕೋಚ್‌ಗಳು ತಮ್ಮ ಅವಧಿಯಲ್ಲಿ ನಿಯಮಿತವಾಗಿ ವಿಶ್ರಾಂತಿ ತೆಗೆದುಕೊಂಡಾಗಲೆಲ್ಲಾ ಆ ಸ್ಥಾನ ತುಂಬಿದ್ದಾರೆ," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಗೌತಮ್ ಗಂಭೀರ್ ಜೊತೆಗೆ ಭಾರತ ಮಹಿಳಾ ತಂಡದ ಮಾಜಿ ಮುಖ್ಯ ಕೋಚ್ ಡಬ್ಲ್ಯುವಿ ರಾಮನ್ ಅವರು ರೋಹಿತ್ ಶರ್ಮಾ ನಾಯಕತ್ವದ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ರಾಮನ್ ಅವರು ಬ್ಯಾಟಿಂಗ್ ಕೋಚ್ ಆಗುವ ಸಾಧ್ಯತೆಯಿದೆ, ಆದರೆ ಈ ಬೆಳವಣಿಗೆಯನ್ನು ಬಿಸಿಸಿಐ ಇನ್ನೂ ಖಚಿತಪಡಿಸಿಲ್ಲ. ಭಾರತ ತಂಡದ ಮುಖ್ಯ ಕೋಚ್ ಪಾತ್ರಕ್ಕಾಗಿ ಸಂದರ್ಶನವನ್ನು ನೀಡಿದ್ದಾರೆ ಎಂದು ವರದಿಯಾಗಿದೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ವಿಷಯಗಳು ಹೊರ ಬರುತ್ತವೆ. ಇದೇ ವೇಳೇ, ಜಾಂಟಿ ರೋಡ್ಸ್ ಫೀಲ್ಡಿಂಗ್ ಕೋಚ್ ಆಗಬಹುದಾದ ನೆಚ್ಚಿನವರಲ್ಲಿ ಒಬ್ಬರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications