IND vs ZIM 1st ODI: 9ನೇ ವಿಕೆಟ್‌ಗೆ 70 ರನ್ ಜತೆಯಾಟ; ಭಾರತಕ್ಕೆ ಸಾಮಾನ್ಯ ಗುರಿ ನೀಡಿದ ಜಿಂಬಾಬ್ವೆ

ಜಿಂಬಾಬ್ವೆ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ಉಭಯ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯ ಇಂದು ( ಆಗಸ್ಟ್ 18 ) ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಇನ್ನು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾದ ನಂತರ ನಡೆದ ಯಾವುದೇ ಪಂದ್ಯದಲ್ಲಿಯೂ ಕಣಕ್ಕಿಳಿಯದ ಕೆಎಲ್ ರಾಹುಲ್ ಇದೀಗ ತಂಡಕ್ಕೆ ಮರಳಿದ್ದು ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಜಿಂಬಾಬ್ವೆ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 40.3 ಓವರ್‌ಗಳಲ್ಲಿ 189 ರನ್ ಕಲೆಹಾಕಿ ಆಲ್‌ಔಟ್ ಆಗಿ ಪ್ರವಾಸಿ ಟೀಮ್ ಇಂಡಿಯಾಗೆ 190 ರನ್‌ಗಳ ಗುರಿಯನ್ನು ನೀಡಿದೆ.

ಜಿಂಬಾಬ್ವೆ ಇನ್ನಿಂಗ್ಸ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಪರ ಆರಂಭಿಕರಾಗಿ ಕಣಕ್ಕಿಳಿದ ಇನ್ನೋಸೆಂಟ್ ಕೈಯಾ 4 ರನ್ ಕಲೆ ಹಾಕಿದರೆ, ತಡಿವಾನಿಶೆ ಮರುಮನಿ 8 ರನ್ ಕಲೆಹಾಕಿದರು. ಇನ್ನುಳಿದಂತೆ ವೆಸ್ಲಿ ಮಧೆವೆರೆ 5 ರನ್, ಸೀನ್ ವಿಲಿಯಮ್ಸ್ ಕೇವಲ 1 ರನ್, ಸಿಕಂದರ್ ರಾಜಾ 12 ರನ್ , ನಾಯಕ ರೆಗಿಸ್ ಚಕಬ್ವ 35 ರನ್, ರಾನ್ ಬರ್ಲ್ 11 ರನ್, ಲೂಕ್ ಜೋಂಗ್ವೆ 13 ರನ್, ವಿಕ್ಟರ್ ನ್ಯುಚಿ 8 ರನ್, ರಿಚರ್ಡ್ ನ್ಗರವ 34 ರನ್ ಮತ್ತು ಬ್ರಾಡ್ ಇವಾನ್ಸ್ ಅಜೇಯ 33 ಕಲೆಹಾಕಿದರು.
ಇನ್ನು 28.3 ಓವರ್‌ಗಳಲ್ಲಿ 110 ರನ್ ಕಲೆ ಹಾಕಿ 8 ವಿಕೆಟ್ ಕಳೆದುಕೊಂಡಿದ್ದ ಜಿಂಬಾಬ್ವೆಗೆ ಒಂಬತ್ತನೇ ವಿಕೆಟ್‌ಗೆ ಜತೆಯಾದ ರಿಚರ್ಡ್ ನ್ಗರವ ಮತ್ತು ಬ್ರಾಡ್ ಇವಾನ್ಸ್ 70 ರನ್‌ಗಳ ಜತೆಯಾಟವಾಡುವುದರ ಮೂಲಕ ತಂಡದ ಮೊತ್ತ ಹೆಚ್ಚಾಗುವಂತೆ ಮಾಡಿದರು.

ಟೀಮ್ ಇಂಡಿಯಾ ಉತ್ತಮ ಬೌಲಿಂಗ್
ಇತ್ತ ಟೀಮ್ ಇಂಡಿಯಾ ಪರ ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ ಹಾಗೂ ಅಕ್ಷರ್ ಪಟೇಲ್ ತಲಾ 3 ವಿಕೆಟ್‌ಗಳನ್ನು ಪಡೆದರು ಹಾಗೂ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದರು. ಇನ್ನು ತನ್ನ ಪಾಲಿನ ಎಲ್ಲಾ 10 ಓವರ್ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 1 ಮೇಡನ್ ಓವರ್ ಮಾಡಿ ಯಾವುದೇ ವಿಕೆಟ್ ಪಡೆಯದೇ 36 ರನ್ ನೀಡಿದರು. 8 ಓವರ್ ಬೌಲಿಂಗ್ ಮಾಡಿ 3 ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ 50 ರನ್ ನೀಡಿ ಪಂದ್ಯದಲ್ಲಿ ಅತಿಹೆಚ್ಚು ರನ್ ನೀಡಿದ ಬೌಲರ್ ಎನಿಸಿಕೊಂಡರು.

ಆಡುವ ಬಳಗ
ಭಾರತ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಬೆಂಚ್: ರಾಹುಲ್ ತ್ರಿಪಾಠಿ, ಶಾರ್ದೂಲ್ ಠಾಕೂರ್, ಅವೇಶ್ ಖಾನ್, ಶಬಾಜ್ ನದೀಮ್, ರುತುರಾಜ್ ಗಾಯಕ್ವಾಡ್
ಜಿಂಬಾಬ್ವೆ: ತಡಿವಾನಾಶೆ ಮರುಮನಿ, ಇನೋಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯುಚಿ, ರಿಚರ್ಡ್ ನ್ಗರವ
ಬೆಂಚ್ : ತಕುಡ್ಜ್ವಾನಾಶೆ ಕೈಟಾನೊ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ, ಕ್ಲೈವ್ ಮದಂಡೆ, ಜಾನ್ ಮಸಾರಾ, ಟೋನಿ ಮುನ್ಯೊಂಗಾ, ತನಕಾ ಚಿವಂಗಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications