ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ಶ್ರೇಯಾಂಕಾ ಇನ್, ರಾಜೇಶ್ವರಿ ಔಟ್!
ಇತ್ತೀಚಿಗೆ ಮುಂಬೈನ ವಾಂಖೆಡೆಯಲ್ಲಿ ಮುಕ್ತಾಯಗೊಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ನಂತರ, ಇದೀಗ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡವು ತಮ್ಮ ವೈಟ್-ಬಾಲ್ ಸರಣಿಗಳತ್ತ ಗಮನ ಹರಿಸಲಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ನಂತರ, ಭಾರತ ವನಿತಾ ತಂಡವು ಮೂರು ಏಕದಿನ ಪಂದ್ಯಗಳಲ್ಲಿ ಪ್ರವಾಸಿ ತಂಡವನ್ನು ಎದುರಿಸಲಿದೆ. ಅದರ ನಂತರ, ಮೂರು ಟಿ20 ಪಂದ್ಯಗಳನ್ನು ಆಡಲಿದೆ.
ಮೊದಲ ಏಕದಿನ ಪಂದ್ಯವು ಗುರುವಾರ, ಡಿಸೆಂಬರ್ 28ರಂದು ನಡೆಯಲಿದ್ದರೆ, ಇನ್ನು ಮೊದಲ ಟಿ20 ಪಂದ್ಯವು ಶುಕ್ರವಾರ, ಜನವರಿ 5ರಂದು ನಿಗದಿಪಡಿಸಲಾಗಿದೆ.

ವೈಟ್ ಬಾಲ್ ಸರಣಿಗೆ ಮುಂಚಿತವಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಸ್ಟ್ರೇಲಿಯಾ ವಿರುದ್ಧದ ಎರಡೂ ಸರಣಿಗಳಿಗೆ ಸೋಮವಾರ, ಡಿಸೆಂಬರ್ 25ರಂದು ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ.
ಎರಡೂ ತಂಡಗಳನ್ನು ಅನುಭವಿ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಆರ್‌ಸಿಬಿ ಹಾಗೂ ಕರ್ನಾಟಕದ ಯುವ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಎರಡೂ ತಂಡಗಳಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೆ, ಮತ್ತೋರ್ವ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಎರಡೂ ತಂಡಗಳಲ್ಲಿ ಸ್ಥಾನ ಗಳಿಸಲು ವಿಫಲರಾಗಿದ್ದಾರೆ.
ಇದಲ್ಲದೆ, ಭಾರತ ಮಹಿಳಾ ತಂಡವು ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್ ಸೇರಿದಂತೆ ಇನ್ನೂ ಅನೇಕ ಸ್ಟಾರ್ ಆಟಗಾರ್ತಿಯರನ್ನು ಒಳಗೊಂಡಿದೆ.
ಟೆಸ್ಟ್ ಪಂದ್ಯದ ಯಶಸ್ಸನ್ನು ಪುನರಾವರ್ತಿಸಲು ಭಾರತ ಮಹಿಳಾ ತಂಡ ಎದುರು ನೋಡುತ್ತಿದೆ
ಏಕದಿನ ಮತ್ತು ಟಿ20 ಸರಣಿಗೆ ಮುಂಚಿತವಾಗಿ, ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಗೆಲುವಿನ ಹಿನ್ನಲೆಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಟೀಮ್ ಇಂಡಿಯಾ ಅತ್ಯಂತ ಆತ್ಮವಿಶ್ವಾಸದಿಂದ ತುಂಬಿದೆ.
ಆತಿಥೇಯ ಮಹಿಳಾ ತಂಡವು ಅಲಿಸ್ಸಾ ಹೀಲಿ ನಾಯಕತ್ವದ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಟೆಸ್ಟ್ ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದರು ಮತ್ತು ಪಂದ್ಯವನ್ನು ಎಂಟು ವಿಕೆಟ್‌ಗಳಿಂದ ಗೆಲ್ಲುವಲ್ಲಿ ಯಶಸ್ವಿಯಾದರು. ಇದೀಗ ಏಕದಿನ ಮತ್ತು ಟಿ20 ಸರಣಿಯಲ್ಲಿಯೂ ಇದೇ ರೀತಿಯ ಪ್ರದರ್ಶನಗಳನ್ನು ಮುಂದುವರೆಸಲು ಎದುರು ನೋಡುತ್ತಿದೆ.

ಮೂರು ಪಂದ್ಯಗಳ ಏಕದಿನ ಸರಣಿಯು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದ್ದರೆ, ಟಿ20 ಸರಣಿಯು ನವಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂಬುದು ಗಮನಿಸಬೇಕಾದ ಸಂಗತಿ.
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ಏಕದಿನ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್.
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ಏಕದಿನ ಟಿ20 ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟೈಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications