IND W vs AUS W: ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ ಪ್ರವೇಶ ಸುಲಭ; ಪಿಚ್ ವರದಿ, ನೇರಪ್ರಸಾರದ ಮಾಹಿತಿ
ಲಾರ್ಡ್ಸ್: ಮಹಿಳಾ ಟಿ20 ವಿಶ್ವಕಪ್ ರೋಚಕ ಘಟ್ಟದತ್ತ ಮುಖ ಮಾಡಿದೆ. ಭಾರತ ಮಹಿಳಾ ತಂಡ ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಭಾನುವಾರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಕಾದಾಟ ನಡೆಸಲಿದೆ. ಎರಡೂ ತಂಡಗಳು ಸೆಮಿಫೈನಲ್ ಸ್ಥಾನದ ಮೇಲೆ ಕಣ್ಣು ನೆಟ್ಟಿವೆ.
ಟೀಮ್ ಇಂಡಿಯಾಗೆ ಈ ಪಂದ್ಯ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಕಾಣುತ್ತಿದೆ. ಟೀಮ್ ಇಂಡಿಯಾ ಆಡಿದ 4 ಪಂದ್ಯಗಳಲ್ಲಿ 3 ಜಯ, 1 ಸೋಲು ಕಂಡಿದ್ದು, 6 ಅಂಕಗಳನ್ನು ಕಲೆ ಹಾಕಿದ್ದು 'ಎ' ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಆಸ್ಟ್ರೇಲಿಯಾ ಆಡಿರುವ 4 ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಮಹಿಳಾ ತಂಡವು 4 ಪಂದ್ಯಗಳಿಂದ 6 ಅಂಕಗಳನ್ನು ಹೊಂದಿದೆ, ಆದರೆ ಉತ್ತಮ ನಿವ್ವಳ ರನ್ ದರದಿಂದಾಗಿ ಭಾರತ ಪ್ರಸ್ತುತ ಮುನ್ನಡೆಯಲ್ಲಿದೆ.

ಲಾರ್ಡ್ಸ್ ಮೈದಾನ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇನ್ನು ಈ ಪಿಚ್ ಬ್ಯಾಟರ್‌ಗಳಿಗೆ ಅನುಕೂಲವಾಗಿರಲಿದೆ. ಹೀಗಾಗಿ ಸ್ಟಾರ್ ಬ್ಯಾಟರ್‌ಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಪಿಚ್ ನೆರವು ನೀಡುವ ಸಾಧ್ಯತೆಯಿದೆ. ಪಂದ್ಯ ಮುಂದುವರಿದಂತೆ ಪಿಚ್ ನಿಧಾನವಾಗುವ ನಿರೀಕ್ಷೆಯಿದ್ದು, ಇದರ ಲಾಭವನ್ನು ಸ್ಪಿನ್ ಬೌಲರ್‌ಗಳು ಪಡೆಯುವ ಸಾಧ್ಯತೆ ಇದೆ. ಈ ಕ್ರೀಡಾಂಗಣದಲ್ಲಿ ಇದು ಮೊದಲ ಟಿ 20 ಪಂದ್ಯವಾಗಿರುತ್ತದೆ.
ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್, ದೀಪ್ತಿ ಶರ್ಮಾ, ರಾಧಾ ಯಾದವ್, ಅರುಂಧತಿ ರೆಡ್ಡಿ/ನಂದಿನಿ ಶರ್ಮಾ, ರೇಣುಕಾ ಸಿಂಗ್, ಎನ್ ಶ್ರೀ ಚರಣಿ.
ಆಸ್ಟ್ರೇಲಿಯಾ, ಭಾರತದ ವಿರುದ್ಧದ ಪಂದ್ಯಕ್ಕೆ ಯಾವೆಲ್ಲ ಆಟಗಾರರಿಗೆ ಅವಕಾಶ ನೀಡಬಹುದು?
ಬೆತ್ ಮೂನಿ, ಜಾರ್ಜಿಯಾ ವೋಲ್, ಫೀಬೆ ಲಿಚ್‌ಫೀಲ್ಡ್, ಎಲಿಸ್ ಪೆರ್ರಿ, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್, ಅನ್ನಾಬೆಲ್ ಸುದರ್ಲ್ಯಾಂಡ್, ನಿಕೋಲಾ ಕ್ಯಾರಿ, ಸೋಫಿ ಮೋಲಿನಕ್ಸ್, ಅಲಾನಾ ಕಿಂಗ್, ಕಿಮ್ ಗಾರ್ತ್.

ಪಂದ್ಯ ಆರಂಭವಾಗುವುದು ಎಷ್ಟು ಗಂಟೆಗೆ?
ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮಹಿಳಾ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಅಲ್ಲದೆ ಪಂದ್ಯದ ಆರಂಭಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಮಹಿಳಾ ಟಿ20 ವಿಶ್ವಕಪ್‌ನ ಎ ಗುಂಪಿನ ಲೀಗ್ ಹಂತದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಈ ಪಂದ್ಯವನ್ನು ಜಿಯೋ ಹಾಟ್ ಸ್ಟಾರ್‌ನಲ್ಲಿ ನೋಡಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications