Ind W vs Ban W: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬೇಡದ ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್
ಭಾರತ ಹಾಗೂ ಬಾಂಗ್ಲಾದೇಶ ವನಿತಾ ತಂಡಗಳು ಟಿ20 ಸರಣಿಯಲ್ಲಿ ಕಾದಾಟ ನಡೆಸುತ್ತಿದ್ದು ಎರಡನೇ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರಿತ್ ಕೌರ್ ಬೇಡದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡು ಮುಜುಗರಕ್ಕೆ ಒಳಗಾಗಿದ್ದಾರೆ. ಸದ್ಯ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಭಾರತ ವನಿತಾ ತಂಡ 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಸಿದ್ಧತೆಯ ಭಾಗವಾಗಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿದೆ.
ಮೊದಲ ಪಂದ್ಯದಲ್ಲಿ ಭರ್ಜರೊಯಾಗಿ ಗೆಲುವು ಸಾಧಿಸಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ ಇಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 98 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು. ಭಾರತದ ಪರವಾಗಿ ಯಾವೊಬ್ಬ ಆಟಗಾರ್ತಿ ಕೂಡ 20 ರನ್‌ಗಳನ್ನು ಕೂಡ ಗಳಿಸಲು ವಿಫಲವಾಗಿದ್ದು ತಂಡ ಬ್ಯಾಟಿಂಗ್‌ನಲ್ಲಿ ಈ ಹಿನ್ನಡೆಗೆ ಕಾರಣವಾಯಿತು. ಶಫಾಲಿ ವರ್ಮಾ ಗಳಿಸಿದ 19 ರನ್ ಭಾರತದ ಪರವಾಗಿ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಆಗಿದೆ.

ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಶೂನ್ಯಕ್ಕೆ ಔಟಾಗಿದ್ದು ಈ ಮೂಲಕ ಕಳಪೆ ದಾಖಲೆಯೊಂದನ್ನು ಬರೆದಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಮಹಿಳಾ ಕ್ರಿಕೆಟ್‌ನ ಟಿ20 ಮಾದರಿಯಲ್ಲಿ ಭಾರತದ ಪರವಾಗಿ ಅತ್ಯಂತ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ಈ ಬೇಡದ ದಾಖಲೆಯನ್ನು ತಮ್ಮ ಬರೆದಿದ್ದಾರೆ ಹರ್ಮನ್‌ಪ್ರೀತ್ ಕೌರ್.
ಈ ಪಂದ್ಯದಲ್ಲಿ ಬಾಂಗ್ಲಾದೇಶದ ಬೌಲರ್ ಸುಲ್ತಾನಾ ಖತುನ್‌ಗೆ ಅವರಿಗೆ ಗೋಲ್ಡನ್ ಡಕ್ ಆಗುವ ಮೂಲಕ ಬಲಿಯಾಗಿರುವ ಹರ್ಮನ್‌ಪ್ರೀತ್ ಕೌರ್ ಚುಟುಕು ಮಾದರಿಯಲ್ಲಿ 6ನೇ ಬಾರಿ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಂತಾಗಿದೆ. ಈ ಮೂಲಕ ಸ್ಮೃತಿ ಮಂಧಾನ ಅವರ 5 ಶೂನ್ಯ ಸಂಪಾದನೆಯ ದಾಖಲೆ ಮುರಿದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಅತ್ಯಂತ ಕನಿಷ್ಠ ಮೊತ್ತ ದಾಖಲಿಸಿದ ಭಾರತ
ಇನ್ನು ಈ ಪಂದ್ಯದಲ್ಲಿ ಭಾರತದ ಮಹಿಳಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿ 95/8 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸುವ ಮೂಲಕ ಟಿ20 ಮಾದರಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಅತ್ಯಂತ ಕನಿಷ್ಠ ರನ್ ದಾಖಲಿಸಿದಂತಾಗಿದೆ. ಇದಕ್ಕೂ ಮುನ್ನ 2014ರಲ್ಲಿ 101/1 ರನ್‌ಗಳಿಸಿದ್ದು ಭಾರತದ ಮಹಿಳಾ ತಂಡ ಬಾಂಗ್ಲಾದೇಶದ ವಿರುದ್ಧ ದಾಖಲಿಸಿದ ಕನಿಷ್ಠ ಮೊತ್ತ ಎನಿಸಿಕೊಂಡಿತ್ತು. ನಾಯಕಿ ಮಿಥಾಲಿ ರಾಜ್ ಮತ್ತು ಪುನಮ್ ರಾವುತ್ ಕ್ರಮವಾಗಿ 64 ಎಸೆತಗಳಲ್ಲಿ 55 ಮತ್ತು 46 ಎಸೆತಗಳಲ್ಲಿ 42 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಆ ಪಂದ್ಯದಲ್ಲಿ ಮಿಥಾಲಿ ಪಡೆ 16 ರನ್‌ಗಳಿಂದ ಗೆಲುವು ಸಾಧಿಸಿತು.
ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ಆಡುವ 11ರ ಬಳಗ
ಬಾಂಗ್ಲಾದೇಶ: ಶತಿ ರಾಣಿ, ಶಮೀಮಾ ಸುಲ್ತಾನಾ, ಸೋಭಾನಾ ಮೊಸ್ತರಿ, ನಿಗರ್ ಸುಲ್ತಾನಾ(ನಾಯಕಿ/ ವಿಕೆಟ್ ಕೀಪರ್), ಶೋರ್ನಾ ಅಕ್ಟರ್, ರಿತು ಮೋನಿ, ನಹಿದಾ ಅಕ್ಟರ್, ಫಾಹಿಮಾ ಖಾತುನ್, ಮಾರುಫಾ ಅಕ್ಟರ್, ಸುಲ್ತಾನಾ ಖಾತುನ್, ರಬೇಯಾ ಖಾನ್.
ಭಾರತ ಮಹಿಳಾ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ಪೂಜಾ ವಸ್ತ್ರಾಕರ್, ದೀಪ್ತಿ ಶರ್ಮಾ, ಅಮನ್ಜೋತ್ ಕೌರ್, ಬಾರೆಡ್ಡಿ ಅನುಷಾ, ಮಿನ್ನು ಮಣಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications