IND W vs BAN W: ಗೆಲುವಿನ ಒತ್ತಡದಲ್ಲಿ ಟೀಮ್ ಇಂಡಿಯಾ
ಮಹಿಳಾ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುತ್ತಿದೆ. ಗುರುವಾರ ಹರ್ಮನ್‌ಪ್ರೀತ್ ಕೌರ್ ಪಡೆ ಬಾಂಗ್ಲಾದೇಶ ವಿರುದ್ಧ ಕಾದಾಟವನ್ನು ನಡೆಸಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ ಮಹಿಳಾ ತಂಡವು ಮೂರು ಪಂದ್ಯಗಳನ್ನು ಆಡಿದ ನಂತರ 4 ಅಂಕಗಳೊಂದಿಗೆ ಗುಂಪು ಎ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅಲ್ಲದೆ ಸೆಮಿಫೈನಲ್ ಹಂತದ ಕನಸು ಕಾಣುತ್ತಿದೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನ ಸೆಮಿಫೈನಲ್‌ಗೆ ಸುಲಭವಾಗಿ ಪ್ರವೇಶ ಪಡೆಯಬೇಕಾದಲ್ಲಿ, ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಭಾರತ ಮಹಿಳಾ ತಂಡ ಬಾಂಗ್ಲಾದೇಶ ವಿರುದ್ಧ ಹಾಗೂ ಆಸ್ಟ್ರೇಲಿಯಾ ವಿರುದ್ಧ ಲೀಗ್ ಹಂತದಲ್ಲಿ ಕಾದಾಟ ನಡೆಸಲಿದೆ. ಜೂನ್ 25 ರಂದು, ಭಾರತೀಯ ಮಹಿಳಾ ತಂಡವು ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ ಮೈದಾನಕ್ಕಿಳಿಯಲಿದೆ. ಹೆಡ್ ಟು ಹೆಡ್ ದಾಖಲೆಯಲ್ಲಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ.

23 ಬಾರಿ ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಿವೆ. ಈ ವೇಳೆ ಟೀಮ್ ಇಂಡಿಯಾ 20 ಪಂದ್ಯಗಳನ್ನು ಗೆದ್ದು ಕೇವಲ ಮೂರರಲ್ಲಿ ಮಾತ್ರ ಸೋತಿದೆ. ಇನ್ನು ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪ್ರಾಬಲ್ಯ ಮೆರೆದಿದೆ. ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಅಬ್ಬರಿಸಿದೆ.
ಚಿಂತೆ ಹೆಚ್ಚಿಸಿದೆ ಜೆಮಿಮಾ ಫಾರ್ಮ್
ಭಾರತ ತಂಡದಲ್ಲಿ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಬ್ಯಾಟಿಂಗ್‌ನಲ್ಲಿ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಆಧಾರವಾಗಬೇಕಿದೆ. ಪವರ್ ಪ್ಲೇನ ಲಾಭ ಪಡೆದು ಈ ಜೋಡಿ ರನ್ ವೇಗಕ್ಕೆ ಚುರುಕು ಮುಟ್ಟಿಸಬೇಕಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಯಾಸ್ತಿಕಾ ಭಾಟಿಯಾ ಹಾಗೂ ಹರ್ಮನ್ ಪ್ರೀತ್ ಕೌರ್ ಸಮಯಕ್ಕೆ ತಕ್ಕಂತೆ ಬ್ಯಾಟ್ ಮಾಡಬೇಕಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಡೆತ್ ಓವರ್‌ಗಳಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಹಿಂದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ಸೋಲಿಗೆ ಬೌಲರ್‌ಗಳ ನೀರಸ ಪ್ರದರ್ಶನವೇ ಪ್ರಮುಖ ಕಾರಣ. ಪಾಕಿಸ್ತಾನ ವಿರುದ್ಧ ಐದು ವಿಕೆಟ್ ಪಡೆದ ದೀಪ್ತಿ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ವಿಕೆಟ್ ಪಡೆಯಲು ವಿಫಲರಾದರು. ಆದ್ದರಿಂದ, ಬಾಂಗ್ಲಾದೇಶದ ವಿರುದ್ಧ ಭಾರತೀಯ ಮಹಿಳಾ ತಂಡದ ಬೌಲರ್‌ಗಳು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಗೆಲುವಿನ ಕನಸಿನಲ್ಲಿ ಬಾಂಗ್ಲಾ
ಬಾಂಗ್ಲಾದೇಶ ಸೆಮಿಫೈನಲ್ ಪ್ರವೇಶಿಸಲು ತನ್ನ ಮುಂದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ದೊಡ್ಡ ಅಂತರದಿಂದ ಗೆಲ್ಲಬೇಕು. ಹಾಗೇ ಲೀಗ್ ಹಂತದ ಕೊನೆಯ ಪಂದ್ಯದಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧವೂ ಗೆಲ್ಲಬೇಕು. ಜೊತೆಗೆ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲಬೇಕಾಗುತ್ತದೆ. ಆಗ ರನ್ ರೇಟ್ ಆಧಾರದಲ್ಲಿ ಬಾಂಗ್ಲಾ ಮುನ್ನಡೆಯಬಹುದು. ಬಾಂಗ್ಲಾದೇಶಕ್ಕೆ ನಾಯಕಿ ನಿಗಾರ್ ಸುಲ್ತಾನಾ ಜೋತಿ ಮತ್ತು ದಿಲಾರಾ ಅಖ್ತರ್ ಪ್ರಮುಖ ಆಧಾರಸ್ತಂಭ. ಉಪನಾಯಕಿ ನಹಿದಾ ಅಖ್ತರ್, ಮತ್ತು ಮಾರ್ಫಾ ಅಖ್ತರ್ ತಂಡದ ಪ್ರಮುಖ ವಿಕೆಟ್ ಟೇಕರ್ಸ್ ಆಗಿದ್ದಾರೆ. ಬಾಂಗ್ಲಾದೇಶ ತಂಡ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲಿನೊಂದಿಗೆ 4 ಅಂಕ ಗಳಿಸಿ 4ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications