IND W vs PAK W: ಸ್ಮೃತಿ ಮಂಧಾನ ಅರ್ಧಶತಕದ ಸೊಬಗು
ಬರ್ಮಿಂಗ್‌ಹ್ಯಾಮ್: ಭರವಸೆಯ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಬಾರಿಸಿದ ಭರ್ಜರಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ಮಹಿಳಾ ಟಿ20 ವಿಶ್ವಕಪ್‌ನ ಲೀಗ್ ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ 171 ರನ್‌ಗಳ ಗುರಿಯನ್ನು ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡೀಯಾದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ಮಿಂಚಿದರು. ಆದರೆ ಇವರು ಮೊದಲ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಶಫಾಲಿ ಅವರಿಗೆ ಪಾಕ್ ಬೌಲರ್ ಸಾದಿಯಾ ಇಕ್ಬಾಲ್ ಪೆವೆಲಿಯನ್ ಹಾದಿ ತೋರಿಸಿದರು. ಭರವಸೆಯ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಅವರು ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಇವರು ತಸ್ಮಿಯಾ ರುಬಾಬ್ ಅವರ ಎಸೆತವನ್ನು ತಪಾಗಿ ಗುರುತಿಸಿ ಔಟ್ ಆದರು.

ಭಾರತ ತಂಡ 18 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡಕ್ಕೆ ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ಉಪನಾಯಕಿ ಸ್ಮೃತಿ ಮಂಧಾನ ಆಧಾರವಾದರು. ಈ ಜೋಡಿ ಪವರ್ ಪ್ಲೇನಲ್ಲಿ ಮತ್ತೆ ವಿಕೆಟ್ ಬೀಳದಂತೆ ಕಾಯ್ದುಕೊಂಡಿತು. ಪರಿಣಾಮ ಭಾರತ ಮೊದಲ 6 ಓವರ್‌ಗಳಲ್ಲಿ 2 ವಿಕೆಟ್‌ಗೆ 38 ರನ್ ಸೇರಿಸಿತು.
ಸ್ಮೃತಿ ಅರ್ಧಶತಕ
3ನೇ ವಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ಹಾಗೂ ಭರವಸೆಯ ಆರಂಭಿಕ ಆಟಗಾರ್ತಿ ಸ್ಮೃತಿ ಜೋಡಿ 64 ಎಸೆತಗಳಲ್ಲಿ 91 ರನ್ ಸೇರಿಸಿತು. ಈ ವೇಳೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಸ್ಮೃತಿ ಮಂಧಾನ ತಾಳ್ಮೆ ಕಳೆದುಕೊಂಡು ದೊಡ್ಡ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಇವರು 44 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು.
ಭಾರ್ತಿ ಫುಲ್ಮಾಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡುತ್ತಿದ್ದ ನಾಯಕಿ ಹರ್ಮನ್ ಪ್ರೀತ್ ಕೌರ್ 35 ಎಸೆತಗಳಲ್ಲಿ 36 ರನ್ ಬಾರಿಸಿ ಔಟ್ ಆದರು. ಇವರ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 4 ಬೌಂಡರಿ ಸೇರಿವೆ.
ರಿಚಾ ಘೋಷ್ ಅಬ್ಬರ
ಒಂದು ಹಂತದಲ್ಲಿ 16.2 ಓವರ್‌ಗಳಲ್ಲಿ 123 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಟೀಮ್ ಇಂಡಿಯಾ 150 ರನ್‌ಗಳನ್ನು ಸೇರಿಸುತ್ತಾ ಎಂಬ ಪ್ರಶ್ನೆಗಳು ಮೂಡಿದ್ದವು. ಆದರೆ ಡೆತ್ ಓವರ್‌ಗಳಲ್ಲಿ ಆಡುವ ಕಲೆಯನ್ನು ಕರಗತ ಮಾಡಿಕೊಂಡಿರು ರಿಚಾ ಘೋಷ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ದೊಡ್ಡ ಹೊಡೆತಗಳ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಇವರು ಹಾಗೂ ದೀಪ್ತಿ ಶರ್ಮಾ (ಅಜೇಯ 12 ರನ್) 6ನೇ ವಿಕೆಟ್‌ಗೆ 21 ಎಸೆತಗಳಲ್ಲಿ 45 ರನ್ ಸೇರಿಸಿತು. ರಿಚಾ ಘೋಷ್ 200ರ ಸ್ಟ್ರೈಕ್ ರೇಟ್‌ನಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 34 ರನ್ ಬಾರಿಸಿದರು.
ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications