ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ

IND-W vs SA-W T20 Tri-series Final: South Africa Womens Beat India Womens By 5 Wickets

ಈಸ್ಟ್ ಲಂಡನ್‌ನ ಬಫಲೋ ಪಾರ್ಕ್‌ನಲ್ಲಿ ನಡೆದ ಮಹಿಳಾ ಟಿ20 ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ ಕ್ಲೋಯ್ ಟ್ರಯಾನ್ ಭರ್ಜರಿ ಅರ್ಧಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಮಹಿಳಾ ತಂಡವು ಭಾರತ ವನಿತೆಯರ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ, ಆರಂಭಿಕ ಮೂರು ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಹರ್ಲೀನ್ ಡಿಯೋಲ್ 56 ಎಸೆತಗಳಲ್ಲಿ 46 ರನ್ ಗಳಿಸಿದ ಸಹಾಯದಿಂದ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 109 ರನ್‌ಗಳ ಸಾಧಾರಣ ಮೊತ್ತ ಪೇರಿಸಿದರು.

Ranji Trophy 2023: ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ ಗೆಲುವಿನತ್ತ ದಾಪುಗಾಲಿಟ್ಟ ಕರ್ನಾಟಕRanji Trophy 2023: ಕ್ವಾರ್ಟರ್ ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ ಗೆಲುವಿನತ್ತ ದಾಪುಗಾಲಿಟ್ಟ ಕರ್ನಾಟಕ

ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಸೊನ್ನೆಗೆ ಔಟಾದರೆ, ಜೆಮಿಮಾ ರೋಡ್ರಿಗಸ್ 11 ರನ್ ಗಳಿಸಿ ಔಟಾದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 21 ರನ್ ಬಾರಿಸಿದರು. ದೀಪ್ತಿ ಶರ್ಮಾ 16 ರನ್ ಗಳಿಸುವ ಮೂಲಕ ಭಾರತ ಮೊತ್ತ 100ರ ಗಡಿ ದಾಟುವಂತೆ ನೆರವಾದರು.

IND-W vs SA-W T20 Tri-series Final: South Africa Womens Beat India Womens By 5 Wickets

110 ರನ್‌ಗಳ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಪರ ಕ್ಲೋಯ್ ಟ್ರಯಾನ್ 32 ಎಸೆತಗಳಲ್ಲಿ ಅಜೇಯ 57 ರನ್‌ಗಳನ್ನು ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 110 ರನ್ ಗುರಿಯನ್ನು ಬೆನ್ನಟ್ಟಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಸ್ನೇಹ್ ರಾಣಾ ಎರಡು ವಿಕೆಟ್ ಪಡೆದರೆ, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್ ಮತ್ತು ರೇಣುಕಾ ಠಾಕೂರ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಟಿ20 ತ್ರಿಕೋನ ಸರಣಿಯನ್ನು ಗೆದ್ದುಕೊಂಡಿದೆ.

"ವಿಶ್ರಾಂತಿಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗುತ್ತೇವೆ. ಇನ್ನು ನಾವು ಈ ಸರಣಿಯಲ್ಲಿ ಕೆಲವು ಉತ್ತಮ ಪ್ರದರ್ಶನಗಳನ್ನು ಪಡೆದಿದ್ದೇವೆ. ದುರದೃಷ್ಟವಶಾತ್ ಇಂದು ನಾವು ಬಯಸಿದ ರೀತಿಯಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ ಮತ್ತು ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು," ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಂದ್ಯದ ನಂತರ ಹೇಳಿದರು.

ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್‌ಪ್ರೀತ್ ಕೌರ್ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್‌ಪ್ರೀತ್ ಕೌರ್

ಫೆಬ್ರವರಿ 10ರಿಂದ ದಕ್ಷಿಣ ಆಫ್ರಿಕಾದಲ್ಲೇ ನಡೆಯುವ 2023ರ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗೂ ಮುನ್ನ ನಡೆದ ಈ ಸರಣಿಯಲ್ಲಿ ಭಾರತಕ್ಕೆ ಒಂದು ದೊಡ್ಡ ಅನುಭವ ಪಡೆದಂತಾಗಿದೆ. ಅಂಡರ್-19 ಮಹಿಳಾ ಟಿ20 ವಿಶ್ವಕಪ್ ವಿಜೇತ ತಂಡದಲ್ಲಿದ್ದ ಶಫಾಲಿ ವರ್ಮಾ, ಶ್ವೇತಾ ಸೆಹ್ರಾವತ್ ಮತ್ತು ರಿಚಾ ಘೋಷ್ ಭಾರತ ಹಿರಿಯರ ತಂಡಕ್ಕೆ ಮರಳಿದರೆ ಬಲಿಷ್ಠವಾಗಲಿದೆ.

Story first published: Thursday, February 2, 2023, 23:11 [IST]
Other articles published on Feb 2, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X