ಒಂದು ವಿಕೆಟ್ ಪಡೆಯುತ್ತಲೇ ದೀಪ್ತಿ ಶರ್ಮಾ ದಾಖಲೆ
ಭಾರತ ಮಹಿಳಾ ಏಕದಿನ ವಿಶ್ವಕಪ್ ಬಳಿಕ ಶ್ರೀಲಂಕಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಐದು ಟಿ20 ಪಂದ್ಯಗಳನ್ನು ಆಡುತ್ತಿವೆ. ಈ ವೇಳೆ ಮೂರು ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈಗ ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡುವ ಆಸೆಯನ್ನು ಹೊಂದಿದೆ. ಟೀಮ್ ಇಂಡಿಯಾ ಡಿಸೆಂಬರ್ 28 ರಂದು ತಿರುವನಂತಪುರದಲ್ಲಿ ನಾಲ್ಕನೇ ಟಿ20 ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ದೀಪ್ತಿ ಶರ್ಮಾ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಪಂದ್ಯದಲ್ಲಿ ದೀಪ್ತಿ ಶರ್ಮಾ ಒಂದು ವಿಕೆಟ್ ಪಡೆದಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.
ಏಕದಿನ ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ, ಟಿ20 ಸರಣಿಯಲ್ಲೂ ಇದೇ ಪ್ರದರ್ಶನ ಮುಂದುವರಿಸಿದ್ದಾರೆ. ಇವರು ಮೂರನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಪಡೆದು ಬೀಗಿದ್ದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದರು. ನಾಲ್ಕನೇ ಟಿ20 ಪಂದ್ಯದಲ್ಲಿ ಒಂದು ವಿಕೆಟ್ ಪಡೆದದ್ದೇ ಆದಲ್ಲಿ ದೀಪ್ತಿ ಮತ್ತೊಂದು ದಾಖಲೆ ಬರೆಯಲಿದ್ದಾರೆ.

ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಕೇವಲ ಇಬ್ಬರು ಆಟಗಾರ್ತಿಯರು ಮಾತ್ರ 150ಕ್ಕೂ ಹೆಚ್ಚು ವಿಕೆಟ್ ಪಡೆದ ಹಿರಿಮೆ ಹೊಂದಿದ್ದಾರೆ. ಈ ಸಾಲಿನಲ್ಲಿ ದೀಪ್ತಿ ಶರ್ಮಾ ಅವರಿಗೂ ಸ್ಥಾನ. ಇವರು ಆಡಿದ 123 ಟಿ20 ಪಂದ್ಯಗಳಲ್ಲಿ 151 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ದೀಪ್ತಿ ಇವರು ಆಸ್ಟ್ರೇಲಿಯಾ ಮಹಿಳಾ ತಂಡದ ಬೌಲರ್ ಮೇಗನ್ ಶುಟ್ ಈ ಸಾಧನೆಯ ಸಮಕ್ಕೆ ನಿಂತಿದ್ದರು. ಇವರು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಪಡೆದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಹೆಗ್ಗಳಿಕೆ ದೀಪ್ತಿ ಶರ್ಮಾ ಅವರದ್ದಾಗಲಿದೆ.
ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್
ಮೇಗನ್ ಶುಟ್, ಆಸ್ಟ್ರೇಲಿಯಾ, 151 ವಿಕೆಟ್‌ಗಳು
ದೀಪ್ತಿ ಶರ್ಮಾ, ಭಾರತ, 151 ವಿಕೆಟ್‌ಗಳು
ಹೆನ್ರಿಯೆಟ್ ಇಶಿಮ್ವೆ, ರುವಾಂಡಾ, 144 ವಿಕೆಟ್‌ಗಳು
ನಿದಾ ದಾರ್, ಪಾಕಿಸ್ತಾನ, 144 ವಿಕೆಟ್‌ಗಳು
ಸೋಫಿ ಎಕ್ಲೆಸ್ಟೋನ್, ಇಂಗ್ಲೆಂಡ್, 142 ವಿಕೆಟ್‌ಗಳು
ಮತ್ತೊಂದು ಗೆಲುವಿನ ಕನಸಿನಲ್ಲಿ ಭಾರತ
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸಮಯೋಚಿತ ಆಟವಾಡಿದ ಭಾರತ ಮೂರು ಪಂದ್ಯಗಳನ್ನು ಗೆದ್ದಿದೆ. ಟೀಮ್ ಇಂಡಿಯಾದ ಪರ ಶೆಫಾಲಿ ವರ್ಮಾ ಅಮೋಘ ಪ್ರದರ್ಶನ ನೀಡಿದ್ದು ಎಲ್ಲರ ಚಿತ್ತ ಕದ್ದಿದೆ. ಆರಂಭಿಕ ಸ್ಮೃತಿ ಮಂಧಾನ ಬಿಗ್ ಇನಿಂಗ್ಸ್ ಕಟ್ಟಬೇಕಿದೆ. ಹರ್ಮನ್ ಪ್ರೀತ್ ಕೌರ್, ಜೆಮಿಮಾ ರೋಡ್ರಿಗಸ್ ಸಹ ದೊಡ್ಡ ಇನಿಂಗ್ಸ್ ಕಟ್ಟುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆಯಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications