ಮಿಂಚಿದ ಶಾ, ಸ್ಯಾಮ್ಸನ್; ಕೀವಿಸ್ 'ಎ'ತಂಡದ ವಿರುದ್ಧ ಭಾರತ ಎ ತಂಡಕ್ಕೆ ಭರ್ಜರಿ ಜಯ!

ನ್ಯೂಜಿಲ್ಯಾಂಡ್ ಎ ತಂಡದ ವಿರುದ್ಧ ಭಾರತ ಎ ತಂಡ ಸುಲಭ ಗೆಲುವನ್ನು ಸಾಧಿಸಿದೆ. ಇಂದು ಲಿಂಕೋನ್‌ನಲ್ಲಿ ನಡೆದ ಮೊದಲ ಅನಧಿಕೃತ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಎ ತಂಡ ಅನಧಿಕೃತ ಸರಣಿಯಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ.
ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಗಾಯಗೊಂಡಿರುವ ಶಿಖರ್ ಧವನ್ ಸ್ಥಾನಕ್ಕೆ ನಿನ್ನೆಯಷ್ಟೇ ಆಯ್ಕೆಯಾಗಿರುವ ಪೃಥ್ವಿ ಶಾ ಮತ್ತು ಸಂಜು ಸ್ಯಾಮ್ಸನ್ ಇಬ್ಬರೂ ಈ ಪಂದ್ಯದಲ್ಲಿ ಮಿಂಚಿದ್ದು ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
20 ವರ್ಷದ ಪೃಥ್ವಿ ಶಾ ಈ ಪಂದ್ಯದಲ್ಲಿ 35 ಎಸೆತಗಳಿಂದ 48 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾದ ರನ್ ಚೇಸ್‌ಗೆ ಉತ್ತಮ ಅಡಿಪಾಯವನ್ನು ಹಾಕಿದರು. ಟಿ20 ಸರಣಿಗೆ ಆಯ್ಕೆಯಾಗಿರುವ ಸಂಜು ಸ್ಯಾಮ್ಸನ್ 21 ರನ್ 39 ರನ್ ಗಳಿಸಿ ಮಿಂಚಿದರು. ಸೂರ್ಯಕುಮಾರ್ ಯಾದವ್ 19 ಎಸೆತಗಳಿಂದ 35 ರನ್‌ಗಳಿಸಿದ್ದಾರೆ.
ಬೌಲಿಂಗ್ ವಿಬಾಗದಲ್ಲಿ ಮೊಹಮ್ಮದ್ ಸಿರಾಜ್ ಅದ್ಭುತ ದಾಳಿ ಸಂಘಟಿಸಿದರು. 6.3ಓವರ್‌ಗಳಲ್ಲಿ 33 ರನ್‌ಗಳಿಗೆ ಮೂರು ವಿಕೆಟ್ ವಿಂಚಿದರು. ಖಲೀಲ್ ಅಹ್ಮದ್ ಮತ್ತು ಅಕ್ಷರ್ ಪಟೇಲ್ ಕೂಡ ತಲಾ ಎರಡು ವಿಕೆಟ್ ಪಡೆದರು. ಈ ಮೂಲಕ ಭಾರತ ಎ ತಂಡ ನ್ಯೂಜಿಲ್ಯಾಂಡ್ ಎ ತಂಡವನ್ನು 230ರನ್‌ಗಳ ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಪೃಥ್ವಿ ಶಾ ಅಭ್ಯಾಸ ಪಂದ್ಯದಲ್ಲಿ 100 ಎಸೆತಗಳಲ್ಲಿ 150ರನ್ ಗಳಸಿ ಮಿಂಚಿದ್ದರು. ನ್ಯೂಜಿಲ್ಯಾಂಡ್ ಎ ವಿರುದ್ಧದ ಎರಡನೇ ಅನಧಿಕೃತ ಪಂದ್ಯ 24ನೇ ತಾರೀಕಿನಂದು ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications