IND vs ENG 3rd ODI: ಯಾರಾಗ್ತಾರೆ ಅಹಮದಾಬಾದ್‌ನ ಬಾದ್‌ಷಾ? ಕ್ಲೀನ್ ಸ್ವೀಪ್ ಕನಸಿನಲ್ಲಿ ಟೀಮ್ ಇಂಡಿಯಾ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗಾಗಲೇ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಸರಣಿಯನ್ನು ವಶಕ್ಕೆ ಪಡೆದಿದೆ. ಇನ್ನು ಮೂರನೇ ಏಕದಿನ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸುವ ಕನಸಿನಲ್ಲಿ ಟೀಮ್ ಇಂಡಿಯಾ ಇದೆ. ಇಂಗ್ಲೆಂಡ್ ಸಹ ಈ ಪಂದ್ಯಕ್ಕೆ ಭರ್ಜರಿಯಾಗಿ ತಯಾರಿ ನಡೆಸಿದೆ.
ಅಹಮದಾಬಾದ್ ಪಿಚ್ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ಸಹಾಯ ಮಾಡುತ್ತದೆ. ಟೀಮ್ ಇಂಡಿಯಾ ಈ ಮೈದಾನದಲ್ಲಿ 2023ರ ನವೆಂಬರ್‌ನಲ್ಲಿ ಕೊನೆಯ ಪಂದ್ಯವನ್ನು ಆಡಿತ್ತು. ಆಗ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ಸೋಲು ಕಂಡಿತ್ತು. ಈಗ ಮತ್ತೆ ರೋಹಿತ್ ಪಡೆ ಈ ಅಂಗಳ ಪ್ರವೇಶಿಸಲಿದೆ. ಎಂದಿನಂತೆ ಟಾಸ್ ಬಹಳ ಮುಖ್ಯ ಪಾತ್ರವನ್ನು ವಹಿಸಲಿದೆ.

ವಿರಾಟ್ ಫಾರ್ಮ್ ಚಿಂತೆ
ಟೀಮ್ ಇಂಡಿಯಾ ಪರ ರನ್ ಬರವನ್ನು ಅನುಭವಿಸುತ್ತಿದ್ದ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ಕಟಕ್‌ನಲ್ಲಿ ಶತಕ ಬಾರಿಸುವ ಮೂಲಕ ಲಯಕ್ಕೆ ಮರಳಿದ್ದಾರೆ. ಇನ್ನು ಉಪನಾಯಕ ಶುಭಮನ್ ಗಿಲ್ ಆಡಿದ ಎರಡೂ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇವರಿಬ್ಬರ ಮೇಲೆ ದೊಡ್ಡ ಜವಾಬ್ದಾರಿಯಿದೆ. ಇನ್ನು ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿ, ರನ್ ಬರ ಅನುಭವಿಸುತ್ತಿರುವುದು ತಂಡದ ಚಿಂತೆಯನ್ನು ದ್ವಿಗುಣ ಗೊಳಿಸಿದೆ. ಈ ಪಂದ್ಯದಲ್ಲಿ ವಿರಾಟ್ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಚಾಂಪಿಯನ್ಸ್ ಟ್ರೋಫಿಗೆ ಆತ್ಮ ವಿಶ್ವಾಸದಿಂದ ಮೈದಾನ ಪ್ರವೇಶಿಸಬಹುದು.
ಶ್ರೇಯಸ್ ಅಯ್ಯರ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಈ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಅಕ್ಷರ್ ಪಟೇಲ್ ಸಹ ಐದನೇ ಕ್ರಮಾಂಕಕ್ಕೆ ನ್ಯಾಯ ಒದಗಿಸಿದ್ದಾರೆ. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಬ್ಯಾಟ್ ಮಾಡುವ ಕೆಎಲ್ ರಾಹುಲ್ ಕೆಳ ಕ್ರಮಾಂಕದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ದ್ವಿಗುಣ ಗೊಳಿಸಿದೆ.

ಅರ್ಷದೀಪ್‌ಗೆ ಸಿಗುತ್ತಾ ಅವಕಾಶ
ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿರುವ ಅರ್ಷದೀಪ್ ಸಿಂಗ್, ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅಂಗಳ ಪ್ರವೇಶಿಸುವ ಕನಸು ಕಾಣುತ್ತಿದ್ದಾರೆ. ಇವರು ಮೂರನೇ ಏಕದಿನ ಪಂದ್ಯದಲ್ಲಿ ಆಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಇನ್ನು ಹರ್ಷಿತ್ ರಾಣಾ ಲಯದಲ್ಲಿದ್ದು, ಇವರಿಗೆ ವಿಶ್ರಾಂತಿ ನೀಡಿದರೆ ಬೆಸ್ಟ್. ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿರುವ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ತಮ್ಮ ಕ್ಷಮತೆಗೆ ತಕ್ಕ ಪ್ರದರ್ಶನ ನೀಡಬೇಕಿದೆ. ಕಳೆದ ಪಂದ್ಯದಲ್ಲಿ ಆಡುವ 11 ಬಳಗದಲ್ಲಿ ಸ್ಥಾನ ಪಡೆದಿದ್ದ ವರುಣ್ ಚಕ್ರವರ್ತಿ ಅವರ ಬದಲಿಗೆ ಕುಲ್‌ದೀಪ್ ಯಾದವ್ ಆಡುವುದು ಸೂಕ್ತ.
ಗೆಲುವಿನ ಕನಸು
ಭಾರತ ಪ್ರವಾಸದಲ್ಲಿ ಈ ವರೆಗೆ ಇಂಗ್ಲೆಂಡ್ ಟಿ20 ಹಾಗೂ ಏಕದಿನ ಪಂದ್ಯಗಳನ್ನು ಸೇರಿ ಒಟ್ಟು 7 ಪಂದ್ಯಗಳನ್ನು ಆಡಿದ್ದು, ಕೇವಲ ಒಂದೇ ಪಂದ್ಯವನ್ನು ಗೆದ್ದಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಆತ್ಮ ವಿಶ್ವಾಸವನ್ನು ದ್ವಿಗುಣ ಮಾಡಿಕೊಳ್ಳುವ ಬಯಕೆ ಇಂಗ್ಲೆಂಡ್ ತಂಡದ್ದಾಗಿದೆ. ಟಾಪ್ ಆರ್ಡರ್ ಆಟಗಾರರು ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಆಟಗಾರರು ರನ್ ಬರ ಎದುರಿಸುತ್ತಿದ್ದಾರೆ. ಸ್ಟಾರ್ ವೇಗದ ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications