ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟಿ20 ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ವಶಕ್ಕೆ ಪಡೆದಿರುವ ಭಾರತ, ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಇಂಗ್ಲೆಂಡ್ ಈ ಪಂದ್ಯವನ್ನು ಗೆದ್ದು ಮಾನ ಉಳಿಸಿಕೊಳ್ಳುವ ಲೆಕ್ಕಾಚಾರ ಆರಂಭಿಸಿದೆ. ಮುಂಬೈನ ವಾಂಖೇಡೆ ಅಂಗಳದಲ್ಲಿ ನಡೆಯುವ ಪಂದ್ಯವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರಾಗಿದ್ದಾರೆ.
ಈಗಾಗಲೇ ಐದು ಪಂದ್ಯಗಳ ಸರಣಿಯ ನಾಲ್ಕು ಪಂದ್ಯಗಳು ಮುಗಿದಿವೆ. ಭಾರತ 3-1 ರಿಂದ ಸರಣಿಯನ್ನು ತನ್ನ ವಶಕ್ಕೆ ಮಾಡಿಕೊಂಡಿದೆ. ಇನ್ನೇನಿದ್ದರೂ ಗೌರವಕ್ಕಾಗಿ ಉಭುಯ ತಂಡಗಳು ಮೈದಾನದಲ್ಲಿ ಕಾದಾಟ ನಡೆಸಲಿವೆ. ಭಾರತ ಸಂಘಟಿತ ಆಟದ ಮೇಲೆ ವಿಶ್ವಾಸವನ್ನು ಇಟ್ಟಿದ್ದು, ಇಂಗ್ಲೆಂಡ್ ಐದನೇ ಪಂದ್ಯವನ್ನು ಗೆದ್ದು, ಏಕದಿನ ಪಂದ್ಯವನ್ನು ಆಡಲು ಹುಮ್ಮಸ್ಸಿನಿಂದ ಹೋಗಲು ಪ್ಲ್ಯಾನ್ ಮಾಡಿಕೊಂಡಿದೆ.

ಮುಂಬೈನ ವಾಂಖೆಡೆ ಅಂಗಳ ಯಾವಾಗಲು ಬ್ಯಾಟಿಂಗ್ ಫ್ರೆಂಡ್ಲಿ ಆಗಿರಲಿದೆ. ಐದನೇ ಪಂದ್ಯದಲ್ಲೂ ಬ್ಯಾಟರ್‌ಗಳ ಆರ್ಭಟವನ್ನು ಕಾಣಬಹುದಾಗಿದೆ. ಇನ್ನು ಈ ಪಿಚ್‌ನಲ್ಲಿ ಮೊದಲ ಬ್ಯಾಟ್ ಮಾಡಿದ ತಂಡ ಸಾಮಾನ್ಯವಾಗಿ 191 ರನ್ ಗಳಿಸಿದೆ. ಈ ಮೈದಾನದಲ್ಲಿ ಈಗಾಗಲೇ ಏಳು ಪಂದ್ಯಗಳು ನಡೆದಿವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಮೂರು ಪಂದ್ಯಗಳನ್ನು ಗೆದ್ದರೆ, ಉಳಿದ ನಾಲ್ಕು ಪಂದ್ಯಗಳನ್ನು ನಾಲ್ಕನೇ ಬಾರಿಗೆ ಬ್ಯಾಟ್ ಮಾಡಿದ ತಂಡವೇ ಗೆದ್ದಿದೆ.
ಟೀಮ್ ಇಂಡಿಯಾದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಸತತ ವೈಫಲ್ಯ ಅನುಭವಿಸುತ್ತಿದ್ದು, ಐದನೇ ಟಿ20 ಪಂದ್ಯದಲ್ಲಿ ಇವರು ಆರ್ಭಟಿಸಬೇಕಿದೆ. ಇನ್ನು ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ತಮ್ಮ ಕ್ಷಮತೆ ಪ್ರದರ್ಶಿಸಿದ್ದಾರೆ. ತವರಿನಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ನೈಜ ಆಟವನ್ನು ಆಡಬೇಕಿದೆ. ಅಂದಾಗ ದೊಡ್ಡ ಮೊತ್ತದ ಕನಸು ನನಸಾಗುತ್ತದೆ. ಇನ್ನು ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಈ ಬಾರಿ ಎಲ್ಲರ ಆಕರ್ಷಣೆ ಕದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಹತ್ತಿರವಾಗುತ್ತಿರುವುದರಿಂದ ಮೊಹಮ್ಮದ್ ಶಮಿಗೆ ಬೌಲಿಂಗ್ ಪ್ರ್ಯಾಕ್ಟಿಸ್ ಆಗುವುದು ಮುಖ್ಯ. ಈ ನಿಟ್ಟಿನಲ್ಲಿ ಅವರು ಭಾನುವಾರ ಮೈದಾನವನ್ನು ಪ್ರವೇಶಿಸಬಹುದಾಗಿದೆ. ಉಳಿದಂತೆ ರವಿ ಬಿಷ್ಣೋಯಿ, ಅಕ್ಷರ್ ಪಟೇಲ್, ಉತ್ತಮ ಬೌಲಿಂಗ್ ನಡೆಸುವ ಕ್ಷಮತೆಯನ್ನು ಹೊಂದಿದ್ದಾರೆ.
ಭಾರತದ ಸಂಭಾವ್ಯ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ/ ಮೊಹಮ್ಮದ್ ಶಮಿ, ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ,
ಇಂಗ್ಲೆಂಡ್ ತಂಡ ಐದನೇ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡುವ ಇರಾದೆಯನ್ನು ಹೊಂದಿದೆ. ಈ ಬಾರಿ ತನ್ನ ಶಕ್ತಿ ಮೀರಿ ಪ್ರದರ್ಶನ ನೀಡಿ ಗೆಲುವು ಸಾಧಿಸುವ ಗುರಿ ಇಂಗ್ಲೆಂಡ್ ತಂಡದ್ದಾಗಿದೆ. ಇಂಗ್ಲೆಂಡ್ ತಂಡದ ಸ್ಟಾರ್ ಆಟಗರರು ಗೆಲುವಿನಲ್ಲಿ ಮಿಂಚುವ ಅನಿವಾರ್ಯತೆ ಇದೆ. ಜೋಸ್ ಬಟ್ಲರ್, ಬೆನ್ ಡಕೆಟ್ ಹೊರತು ಪಡಿಸಿ ಉಳಿದ ಬ್ಯಾಟರ್‌ಗಳ ಪ್ರದರ್ಶನದ ಮೇಲೆ ಪ್ರಶ್ನೆಗಳು ಎದ್ದಿವೆ. ಇನ್ನು ಬೌಲಿಂಗ್ ವಿಭಾಗದಲ್ಲೂ ಕೊಂಚ ಬದಲಾವಣೆ ಮಾಡಿಕೊಂಡು ಟೀಮ್ ಇಂಡಿಯಾ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರೆ ಮಾತ್ರ ಗೆಲುವಿನ ಆಸೆ ಫಲಿಸುತ್ತದೆ.
ಇಂಗ್ಲೆಂಡ್ ಸಂಭಾವ್ಯ ತಂಡ: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆತೆಲ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಸಾಕಿಬ್ ಮಹಮೂದ್, ಆದಿಲ್ ರಶೀದ್.