IND vs SA T20: ಸರಣಿ ವಶಕ್ಕೆ ಪಡೆಯುವ ಕನಸಿನಲ್ಲಿ ಭಾರತ: ಪುಟಿದೇಳುವ ವಿಶ್ವಾಸದಲ್ಲಿ ದ.ಆಫ್ರಿಕಾ
ಲಕ್ನೋ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕನೇ ಟಿ20 ಪಂದ್ಯ ಬುಧವಾರ (ಡಿ.17) ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಪಡೆಯುವ ಕನಸು ಹೊಂದಿದೆ. ಭಾರತ ಈಗಾಗಲೇ 2-1 ರಿಂದ ಮುನ್ನಡೆ ಸಾಧಿಸಿದ್ದು, ನಾಲ್ಕನೇ ಪಂದ್ಯವನ್ನು ಗೆದ್ದು, ಇನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಗೆಲುವಿನ ನಗೆ ಬೀರಲು ಯೋಜನೆ ಮಾಡಿಕೊಂಡಿದೆ. ಇನ್ನು ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಸರಣಿಯಲ್ಲಿ ಸಮಬಲ ಸಾಧಿಸುವ ಯೋಜನೆಯನ್ನು ಹಾಕಿಕೊಂಡಿದೆ.
ಈ ಪಿಚ್‌ನಲ್ಲೂ ಟಾಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಮಾಡಬಹುದು. ಎರಡನೇ ಇನಿಂಗ್ಸ್ ವೇಳೆ ಮಂಜು ಬೀಳುವ ಸಾಧ್ಯತೆ ಇದೆ. ಈ ಪಿಚ್ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಬಹುದು. ಅಲ್ಲದೆ ಬ್ಯಾಟರ್‌ಗಳು ಸಹ ಈ ಪಿಚ್ ಸಹಾಯ ನೀಡಬಹುದು. ಈ ಮೈದಾನದಲ್ಲಿ 150 ರಿಂದ 170 ಸ್ಪರ್ಧಾತ್ಮಕ ಮೊತ್ತ ಎಂದು ಕಾಣುತ್ತದೆ.

ಕಾಣಿಸಿಕೊಳ್ಳಲಿದ್ದಾರೆ. ಈ ಇಬ್ಬರೂ ಬ್ಯಾಟರ್‌ಗಳು ಈ ಸರಣಿಯಲ್ಲಿ ಒಂದೇ ಒಂದು ಬಿಗ್ ಇನಿಂಗ್ಸ್ ಕಟ್ಟಿಲ್ಲ. ಅಭಿಷೇಕ್ ಶರ್ಮಾ ಸ್ಫೋಟಕ ಆಟದಿಂದ ಎದುರಾಳಿಗಳನ್ನು ಕಾಡಿದ್ದಾರೆ. ಆದರೆ ದೊಡ್ಡ ಇನಿಂಗ್ಸ್ ಮಾತ್ರ ಬಂದಿಲ್ಲ. ಇನ್ನು ಶುಭಮನ್ ಗಿಲ್ ಈ ಸರಣಿಯಲ್ಲಿ ನಿರಾಸೆಯನ್ನು ಅನುಭವಿಸಿದ್ದಾರೆ. ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಇವರು ವಿಫಲರಾಗಿದ್ದಾರೆ. ಹೀಗಾಗಿ ಇವರ ಮೇಲೂ ಈ ಪಂದ್ಯದಲ್ಲಿ ಒತ್ತಡವಿದೆ.
ಸೂರ್ಯ ರನ್ ಬರ
ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎಂದೇ ಖ್ಯಾತಿ ಪಡೆದಿರುವ ಸೂರ್ಯಕುಮಾರ್ ಯಾದವ್, ನಾಯಕತ್ವ ಸಿಕ್ಕ ಮೇಲೆ ತಮ್ಮ ಬಿರುಸಿನ ಆಟ ಮರೆತಂತೆ ಕಾಣುತ್ತಿದೆ. ಸೂರ್ಯ ಕಳೆದ 21 ಇನಿಂಗ್ಸ್‌ಗಳಲ್ಲಿ ಒಂದೇ ಒಂದು ಅರ್ಧಶತಕ ಸಿಡಿಸಿಲ್ಲ. ಈ ವೇಳೆ ಇವರು 239 ರನ್ ಕಲೆ ಹಾಕಿದ್ದು, ರನ್ ಬರ ಅನುಭವಿಸುತ್ತಿದ್ದಾರೆ. ಇವರ ಮೇಲೆ ಒತ್ತಡ ಹೆಚ್ಚಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಿಕೆಟ್ ಕೀಪರ್ ಜಿತೇಶ್ ಶರ್ಮಾ ತಮ್ಮ ಘನತೆಗೆ ತಕ್ಕ ಆಟವನ್ನು ಆಡಬೇಕಿದೆ.

ಸ್ಪಿನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ವರುಣ್ ಚಕ್ರವರ್ತಿ ಶಿಸ್ತು ಬದ್ಧ ದಾಳಿ ಸಂಘಟಿಸುತ್ತಿದ್ದಾರೆ. ಪವರ್ ಪ್ಲೇ ಹಾಗೂ ಡೆತ್ ಓವರ್‌ನಲ್ಲಿ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಬಿಗುವಿನ ದಾಳಿ ನಡೆಸಬೇಕಿದೆ. ಅಂದಾಗ ಮಾತ್ರ ಸರಣಿ ಗೆಲುವಿನ ಕನಸು ನನಸಾಗುತ್ತದೆ.
ಒತ್ತಡದಲ್ಲಿ ಆಫ್ರಿಕಾ
ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಗೆಲುವಿನ ಒತ್ತಡದಲ್ಲಿದೆ. ಸ್ಟಾರ್ ಆಟಗಾರರು ಸ್ಥಿರ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಿಂಚಬೇಕಿದೆ. ಟಾಪ್ ಆರ್ಡರ್ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಬೇಕಿದೆ. ಅಲ್ಲದೆ ಮಧ್ಯಮ ಕ್ರಮಾಂಕದ ಬ್ಯಾಟರ್, ಆಲ್‌ರೌಂಡರ್‌ಗಳು ಅಬ್ಬರಿಸಬೇಕಿದೆ. ಬೌಲರ್‌ಗಳು ಬಿಗುವಿನ ದಾಳಿ ನಡೆಸುವ ಅನಿವಾರ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications