Adelaide Test: ಆಸ್ಟ್ರೇಲಿಯಾ ವಿರುದ್ಧ ಹಳೆ ಸೋಲಿನ ಸೇಡಿಗೆ ಭಾರತ ಸಜ್ಜು; ಯಾರ ಬಲಾಬಲ ಹೇಗಿದೆ?
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಪಂದವನ್ನು ಭಾರತ ಗೆದ್ದು ಬೀಗಿದೆ. ಇದೀಗ ಡಿಸೆಂಬರ್ 6 ಶುಕ್ರವಾರದಂದು ಅಡಿಲೇಟ್ ಓವಲ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ. ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 9.30 ಗಂಟೆಗೆ ಶುರುವಾಗಲಿದೆ. ಅಡಿಲೇಡ್‌ನಲ್ಲಿ ನಡೆಯಲಿರುವ ಹಗಲು-ರಾತ್ರಿ (ಪಿಂಕ್ ಬಾಲ್) ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುವುದು ಭಾರತಕ್ಕೆ ದೊಡ್ಡ ಸವಾಲಾಗಿದೆ. ಹಗಲು-ರಾತ್ರಿ ಟೆಸ್ಟ್‌ನಲ್ಲಿ ಭಾರತಕ್ಕಿಂತ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ.
ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಇದುವರೆಗೆ ಒಟ್ಟು 24 ಬಾರಿ ಹಗಲು-ರಾತ್ರಿ ಟೆಸ್ಟ್ ಪಂದ್ಯಗಳು ನಡೆದಿವೆ. ಇದರಲ್ಲಿ ಆಸ್ಟ್ರೇಲಿಯಾ ತಂಡ ಪ್ರಾಬಲ್ಯ ಸಾಧಿಸಿದೆ. ಆಸ್ಟ್ರೇಲಿಯಾ ಈವರೆಗೆ ಆಡಿರುವ ಒಟ್ಟು 12 ಹಗಲು ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ 11ರಲ್ಲಿ ಗೆಲುವಿನ ನಗೆ ಬೀರಿದೆ. ಇಷ್ಟು ಪಂದ್ಯಗಳನ್ನು ಯಾವ ತಂಡವೂ ಗೆದ್ದ ಸಾಧನೆ ಮಾಡಿಲ್ಲ. ಮತ್ತೊಂದೆಡೆ, ಟೀಮ್ ಇಂಡಿಯಾ ಆಡಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಮತ್ತೊಮ್ಮೆ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ಮತ್ತು ಭಾರತ ಸಜ್ಜಾಗಿವೆ.

ಭಾರತ ಕೊನೆಯದಾಗಿ 2022ರಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಅಡಿಲೇಡ್ ಮೈದಾನದಲ್ಲಿ ಸೋತಿದೆ. 2022ರ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಸರ್ವಪತನವಾಗಿತ್ತು. ಈ ಮೂಲಕ ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿತ್ತು. ಇಂತಹ ಕೆಟ್ಟ ದಾಖಲೆ ಭಾರತ ತಂಡದ ಹೆಸರಿನಲ್ಲಿರುವುದು ಬೇಸರದ ಸಂಗತಿ.
ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿರುವುದು ಭಾರತ ತಂಡಕ್ಕೆ ಆತ್ಮವಿಶ್ವಾಸ ತಂದಿದೆ. ಆಸ್ಟ್ರೇಲಿಯಾ ತಂಡದ ಆಟಗಾರರು ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದು, ಭಾರತದ ಬೌಲಿಂಗ್ ದಾಳಿ ಮುಂದೆ ರನ್ ಗಳಿಸಲು ತಿಣುಕಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲ ಪಿಎಂ ಇಲೆವನ್ ತಂಡದ ವಿರುದ್ಧ ಭಾರತ ಗೆದ್ದಿದೆ.
ನೇರಪ್ರಸಾರ
ಅಡಿಲೇಡ್ ಟೆಸ್ಟ್ ಪಂದ್ಯವು ಡಿಸೆಂಬರ್ 6 ಶುಕ್ರವಾರದಂದು ಬೆಳಗ್ಗೆ ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 9:30 ಗಂಟೆಗೆ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಬೆಳಗ್ಗೆ 9:00 ಗಂಟೆಗೆ ಟಾಸ್ ನಡೆಯಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ಭಾರತದಲ್ಲಿನ ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಲೈವ್ ಪಂದ್ಯವನ್ನು ವಿಕ್ಷೀಸಬಹುದಾಗಿದೆ.
ಪ್ಲೇಯಿಂಗ್-11
ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಣೆ ಮಾಡಿದೆ. ಇನ್ನೊಂದೆಡೆ ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಕೇವಲ ಒಂದು ದಿನ ಬಾಕಿ ಇದ್ದರೂ ಭಾರತ ತಂಡ ಹನ್ನೊಂದರ ಬಳಗವನ್ನು ಘೋಷಣೆ ಮಾಡಿಲ್ಲ. ಆಸೀಸ್ ಪಡೆಯಲ್ಲಿ ಕೇವಲ ಒಂದು ಬದಲಾವಣೆ ಬಿಟ್ಟರೆ ದೊಡ್ಡ ಬದಲಾವಣೆಗಳೇನು ನಡೆದಿಲ್ಲ. ಭಾರತ ತಂಡದಲ್ಲಿ ಎರಡು ಬದಲಾವಣೆ ಆಗುವ ಸಾಧ್ಯೆತೆಯದೆ.
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್-ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್ ಮತ್ತು ಸ್ಕಾಟ್ ಬೋಲ್ಯಾಂಡ್.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ , ನಿತೀಶ್‌ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications