Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup: ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ ! ಹೀಗಿದೆ ಲೆಕ್ಕಾಚಾರ

India And Pakistan Have Chance To Play Final In T20 World Cup 2022

ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ 2022ರಿಂದ ಹೊರಬಿತ್ತು ಎಂದುಕೊಳ್ಳುವಾಗಲೇ ಅದ್ಭುತವೊಂದು ಜರುಗಿದೆ. ದಕ್ಷಿಣ ಆಫ್ರಿಕಾ ನೆದರ್ಲ್ಯಾಂಡ್ಸ್ ವಿರುದ್ಧ ಸೋಲನುಭವಿಸುವ ಮೂಲಕ ಪಾಕಿಸ್ತಾನ ಸೆಮಿಫೈನಲ್ ತಲುಪಲು ಅವಕಾಶ ಮಾಡಿಕೊಟ್ಟಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನ ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿದೆ.

ಟೀಂ ಇಂಡಿಯಾ ಕೂಡ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿರುವ ನಾಲ್ಕು ತಂಡಗಳಾಗಿದ್ದು, ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗುವ ಸಾಧ್ಯತೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

2007ರ ಟಿ20 ವಿಶ್ವಕಪ್‌ನ ಮೊದಲನೇ ಆವೃತ್ತಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಎಂಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ರನ್‌ಗಳ ಅಂತರದಲ್ಲಿ ರೋಚಕವಾಗಿ ಸೋಲಿಸುವ ಮೂಲಕ ಚೊಚ್ಚಲ ಟಿ20 ವಿಶ್ವಕಪ್‌ ಟ್ರೋಫಿಯನ್ನು ಎತ್ತಿಹಿಡಿದಿದ್ದರು.

ಈ ಬಾರಿ ಇತಿಹಾಸ ಮರುಕಳಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಟಿ20 ವಿಶ್ವಕಪ್ 2022ರಲ್ಲಿ ಸಾಕಷ್ಟು ಅಚ್ಚರಿಯ ಫಲಿತಾಂಶಗಳನ್ನು ಈಗಾಗಲೇ ನೋಡಲಾಗಿದೆ. ಇದೆಲ್ಲವನ್ನೂ ಗಮನಿಸಿದರೆ, ಭಾರತ-ಪಾಕಿಸ್ತಾನ ಫೈನಲ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾದರೆ ಅಚ್ಚರಿ ಪಡುವಂತದ್ದೇನೂ ಇಲ್ಲ ಎನ್ನಲಾಗಿದೆ.

ಎಲ್ಲರ ಲೆಕ್ಕಾಚಾರ ತಪ್ಪಿಸಿದ ನೆದರ್ಲ್ಯಾಂಡ್ಸ್

ಎಲ್ಲರ ಲೆಕ್ಕಾಚಾರ ತಪ್ಪಿಸಿದ ನೆದರ್ಲ್ಯಾಂಡ್ಸ್

ದಕ್ಷಿಣ ಆಫ್ರಿಕಾ-ನೆದರ್ಲ್ಯಾಂಡ್ಸ್ ಪಂದ್ಯಕ್ಕೆ ಮುನ್ನ ಭಾರತ, ದಕ್ಷಿಣ ಆಫ್ರಿಕಾ ತಂಡಗಳು 2ನೇ ಗುಂಪಿನಿಂದ ಸೆಮಿಫೈನಲ್ ಪ್ರವೇಶಿಸಲಿವೆ ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಬಲಿಷ್ಠವಾಗಿರುವ ದಕ್ಷಿಣ ಆಫ್ರಿಕಾ ನೆದರ್ಲ್ಯಾಂಡ್ಸ್ ವಿರುದ್ಧ ಸುಲಭದ ಜಯ ಸಾಧಿಸಿ ಸೆಮಿಫೈನಲ್‌ನಲ್ಲಿ ಆಡುತ್ತದೆ ಎಂದೇ ಎಣಿಸಲಾಗಿತ್ತು, ಆದರೆ ನೆದರ್ಲ್ಯಾಂಡ್ಸ್ ಸೆಮಿಫೈನಲ್ ಲೆಕ್ಕಾಚಾರವನ್ನೇ ತಲೆಕೆಳಗು ಮಾಡಿದೆ.

ತಂಡವಾಗಿ ಅತ್ಯುತ್ತಮ ಆಟವಾಡಿದೆ ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನೇ ಸೋಲಿಸುವ ಮೂಲಕ ಟಿ20 ವಿಶ್ವಕಪ್‌ನಿಂದಲೇ ಹೊರದಬ್ಬಿದೆ. ಇದರೊಂದಿಗೆ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದೆ.

SA vs NED: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ದಕ್ಷಿಣ ಆಫ್ರಿಕಾ; ಎಬಿಡಿ, ಸಚಿನ್ ಪ್ರತಿಕ್ರಿಯೆ ಹೀಗಿದೆ!

ಸೆಮಿಫೈನಲ್‌ನಲ್ಲಿ ಯಾವ ತಂಡಗಳ ಮುಖಾಮುಖಿ

ಸೆಮಿಫೈನಲ್‌ನಲ್ಲಿ ಯಾವ ತಂಡಗಳ ಮುಖಾಮುಖಿ

ಗ್ರೂಪ್ 1 ರಿಂದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಿಸಿವೆ. ಭಾರತ ಜಿಂಬಾಬ್ವೆ ವಿರುದ್ಧ ಜಯಗಳಿಸಿದರೆ, ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನವನ್ನು ಎದುರಿಸಲಿದೆ. ನವೆಂಬರ್ 9ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಈ ಪಂದ್ಯ ನಡೆಯಲಿದೆ.

ಇನ್ನು ಗ್ರೂಪ್ 1ರಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ನವೆಂಬರ್ 10 ರಂದು ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಆಡಲಿದೆ. ಅಡಿಲೇಡ್ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಜಯಗಳಿಸಿ, ಇಂಗ್ಲೆಂಡ್ ವಿರುದ್ಧ ಭಾರತ ಜಯಗಳಿಸಿದರೆ ನವೆಂಬರ್ 13ರಂದು ಎಂಸಿಜಿಯಲ್ಲಿ ಭಾರತ-ಪಾಕಿಸ್ತಾನ ಫೈನಲ್ ಪಂದ್ಯದಲ್ಲಿ ಆಡುವುದು ಖಚಿತವಾಗಲಿದೆ.

ಮೀಸಲು ದಿನ ನಿಗದಿ

ಮೀಸಲು ದಿನ ನಿಗದಿ

ಮಳೆಯಿಂದಾಗಿ ಈ ಬಾರಿ ಹಲವು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಹಲವು ತಂಡಗಳು ಸೆಮಿಫೈನಲ್ ಪ್ರವೇಶಿಸಲು ಮಳೆ ಅಡ್ಡಿಯಾಗಿದೆ. ಗ್ರೂಪ್ ಹಂತದ ಪಂದ್ಯಗಳಿಗೆ ಐಸಿಸಿ ಯಾವುದೇ ಮೀಸಲು ದಿನವನ್ನು ನಿಗದಿ ಮಾಡಿರಲಿಲ್ಲ, ಆದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳ ಸಮಯದಲ್ಲಿ ಮಳೆಯಾದರೆ ಮೀಸಲು ದಿನವನ್ನು ನಿಗದಿ ಮಾಡಲಾಗಿದೆ.

ನವೆಂಬರ್ 13ರಂದು ಮೆಲ್ಬೋರ್ನ್ ಅಂಗಳದಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಮಳೆ ಪಂದ್ಯಕ್ಕೆ ಅಡ್ಡಿಯುಂಟು ಮಾಡಿದರೆ, ನವೆಂಬರ್ 14ರಂದು ಮೀಸಲು ದಿನ ಎಂದು ನಿಗದಿಮಾಡಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್ ಮೊಹಮ್ಮದ್ ಶಮಿ.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

Story first published: Sunday, November 6, 2022, 14:27 [IST]
Other articles published on Nov 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+