ದುಬೈನಲ್ಲಿ ಇತ್ತೀಚಿಗೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೈಟ್ ನಡೆಸಿದವು. ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯದಲ್ಲಿ ಕಾದಾಟ ನಡೆಸಿದವು. ಈ ಪಂದ್ಯವನ್ನು ನೋಡಲು ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾದು ನೋಡುತ್ತಿದ್ದವು. ಈಗ ಈ ಪಂದ್ಯ ಇತಿಹಾಸದ ಪುಟ ಸೇರಿದೆ. ಅಭಿಮಾನಿಗಳು ಸಾಂಪ್ರದಾಯಿಕ ಎದುರಾಳಿಗಳು ಮತ್ತೆ ಯಾವಾಗ ಕಾದಾಡುತ್ತಾರೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಸಕ್ತ ವರ್ಷದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆ ಇದೆ.
ಈ ಬಾರಿ ಏಷ್ಯಾ ಕಪ್ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಟೂರ್ನಿಯ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಅಂದು ಕೊಂಡಂತೆ ಆದರೆ ಈ ಟೂರ್ನಿಯನ್ನು ಸೆಪ್ಟಂಬರ್‌ನಲ್ಲಿ ಆಡುವ ಸಾಧ್ಯತೆ ಇದೆ. ಈ ಟೂರ್ನಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಪ್ರಾರಂಭವಾಗಿ ನಾಲ್ಕನೇ ವಾರದವರೆಗೆ ಮುಂದುವರಿಯುವ ನಿರೀಕ್ಷೆಯಿದ್ದು, ಈ ಟೂರ್ನಿಯ ಅಧಿಕೃತ ವೇಳಾಪಟ್ಟಿ ಇನ್ನೂ ಬಂದಿಲ್ಲ. ಆದರೆ ಈ ಟೂರ್ನಿಯಲ್ಲಿ ಒಟ್ಟು 19 ಪಂದ್ಯಗಳು ನಡೆಯುವ ಸಾಧ್ಯತೆ ಇದೆ.

ಏಷ್ಯಾ ಕಪ್‌ನಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಭಾರತ ಹಾಗೂ ಪಾಕಿಸ್ತಾನ ತಂಡಗಳು "ಎ" ಗುಂಪಿನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಎರಡೂ ತಂಡಗಳ ನಡುವೆ ಲೀಗ್ ಹಂತದ ಪಂದ್ಯಗಳನ್ನು ನೋಡಬಹುದಾಗಿದೆ. ಎರಡು ಗುಂಪಿನ ಅಗ್ರ ಎರಡು ತಂಡಗಳು ಸೂಪರ್ 4ನಲ್ಲಿ ಭಾಗವಹಿಸಲಿವೆ. ಈ ಗ್ರುಪ್‌ನಲ್ಲಿ ಭಾರತ ಹಾಗೂ ಪಾಕ್ ಮತ್ತೊಮ್ಮೆ ಮುಖಾಮುಖಿ ಆಗುವ ಸಾಧ್ಯತೆ ಇದೆ. ಇನ್ನು ಎರಡೂ ತಂಡಗಳು ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ಫೈನಲ್‌ನಲ್ಲಿ ಎದುರಾಗುವ ಸಂಭವವಿದೆ.
ಈ ಬಾರಿಯ ಏಷ್ಯಾ ಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ. ಆದರೆ ಕೆಲವು ವರದಿಗಳ ಪ್ರಕಾರ ಈ ಟೂರ್ನಿಯನ್ನು ಭಾರತದ ಹೊರಗೆ ನಡೆಸುವ ಸಾಧ್ಯತೆ ಹೆಚ್ಚಿದೆ. ಭಾರತ ಹಾಗೂ ಪಾಕ್ ನಡುವಿನ ಹದಗೆಟ್ಟ ಪರಿಸ್ಥಿತಿಯಿಂದಾಗ ಈ ಟೂರ್ನಿಯನ್ನು ಬೇರೆ ದೇಶದಲ್ಲಿ ನಡೆಯಲಿದ್ದು, ಭಾರತವೇ ಈ ಟೂರ್ನಿಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿಯನ್ನು ನಡೆಸಲು ಪರ್ಯಾಯ ಸ್ಥಳಗಳನ್ನಾಗಿ ಯುಎಇ ಹಾಗೂ ಶ್ರೀಲಂಕಾ ದೇಶಗಳ ಹೆಸರಗಳು ಸಹ ಕೇಳಿ ಬರುತ್ತಿವೆ. ಈ ಟೂರ್ನಿಯಲ್ಲಿ ಭಾರತ, ಪಾಕ್, ಬಾಂಗ್ಲಾದೇಶ, ಲಂಕಾ, ಆಫ್ಘಾನಿಸ್ತಾನ, ಯುಎಇ, ಓಮನ್, ಹಾಗೂ ಹಾಂಗ್ ಕಾಂಗ್ ತಂಡಗಳು ಈ ಟೂರ್ನಿಯಲ್ಲಿ ಮೈದಾನಕ್ಕೆ ಇಳಿಯಲಿವೆ.
2027 ರಲ್ಲಿ ಬಾಂಗ್ಲಾದೇಶ, 2029 ರಲ್ಲಿ ಪಾಕಿಸ್ತಾನ, 2031 ರ ಏಷ್ಯಾಕಪ್ ಆವೃತ್ತಿಯು ಶ್ರೀಲಂಕಾದಲ್ಲಿ ಏಕದಿನ ಮಾದರಿಯಲ್ಲಿ ನಡೆಯಲಿದೆ. 2023ರಲ್ಲಿ ಏಷ್ಯಾ ಕಪ್ ನಡೆಸಲಾಗಿತ್ತು. ಈ ಟೂರ್ನಿಯ ಫೈನಲ್‌ನಲ್ಲಿ ಭಾರತ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು.