ಭಾರತ ತಂಡ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ವೇಳೆ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಪಂದ್ಯ ಇದೇ 22ರಿಂದ ಪರ್ತ್ ನಲ್ಲಿ ಆರಂಭವಾಗಲಿದೆ. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ವೇಳೆ ಬಿಸಿಸಿಐ ಆಯ್ಕೆ ಸಮಿತಿ ಮತ್ತೊಂದು ದೊಡ್ಡ ಸುದ್ದಿ ನೀಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಗೆ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ 16 ಸದಸ್ಯರು ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
16 ಸದಸ್ಯರ ತಂಡವನ್ನು ಟೀಮ್ ಇಂಡಿಯಾದ ಅನುಭವಿ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಆರಂಭಿಕ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದನಾ ಅವರನ್ನು ಉಪನಾಯಕಿಯಾಗಿ ಘೋಷಣೆ ಮಾಡಿದ್ದಾರೆ. ಯಾಸ್ತಿಕಾ ಭಾಟಿಯಾ ಮತ್ತು ರಿಚಾ ಘೋಷ್ ತಂಡದಲ್ಲಿ ವಿಕೆಟ್ ಕೀಪರ್‌ಗಳ ರೂಪದಲ್ಲಿ ಸ್ಥಾನ ಪಡೆದಿದ್ದಾರೆ.

ಸತತ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದ ಸ್ಟಾರ್ ಆಟಗಾರ್ತಿ ಶೆಫಾಲಿ ವರ್ಮಾಗೆಮ ಗೇಟ್ ಪಾಸ್ ನೀಡಲಾಗಿದೆ. ಇವರು ಕಳೆದ ಆರು ಏಕದಿನ ಪಂದ್ಯಗಳಲ್ಲಿ ಕೇವಲ 106 ರನ್ ಸಿಡಿಸಿ ನಿರಾಸೆ ಮೂಡಿಸಿದ್ದರು. ಇನ್ನು ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರಿಗೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ಏಕದಿನ ಸರಣಿ ಡಿಸೆಂಬರ್ 5 ರಿಂದ ಆರಂಭವಾಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಬ್ರಿಸ್ಬೇನ್ ಅಂಗಳ ಸಾಕ್ಷಿಯಾಗಲಿದೆ. ಈ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 8 ರಂದು ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಬ್ರಿಸ್ಬೇನ್‌ನ ಅಲನ್ ಬಾರ್ಡರ್ ಫೀಲ್ಡ್‌ದಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಡಿಸೆಂಬರ್ 11 ರಂದು ಪರ್ತ್‌ನಲ್ಲಿ ನಡೆಯಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದ್ದ, ಆಸ್ಟ್ರೇಲಿಯಾವನ್ನು ಮಣಿಸಲು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ.

ಪ್ರಕಟಿತ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ (ಡಬ್ಲ್ಯುಕೆ), ರಿಚಾ ಘೋಷ್ (ಡಬ್ಲ್ಯುಕೆ), ತೇಜಲ್ ಹಸ್ಸಾಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್ ಟಿಟಾಸ್ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಸೈಮಾ ಠಾಕೂರ್.
ಈ ಸರಣಿಗೆ ಮುನ್ನ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಟೆಸ್ಟ್ ಸರಣಿ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಪ್ರವೇಶ ಪಡೆಯುವ ಕನಸು ಕಾಣುತ್ತಿದ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನಾಲ್ಕು ಪಂದ್ಯಗಳಲ್ಲಿ ಗೆಲುವು ದಾಖಲಿಸುವ ಅನಿವಾರ್ಯತೆ ಇದೆ.