Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಎರಡನೇ ಟೆಸ್ಟ್‌ಗೂ ಯುವಕರಿಗೆ ಇಲ್ಲ ಅವಕಾಶ: ಯಾವುದೇ ಬದಲಾವಣೆಗೆ ಇಲ್ಲ ಸ್ಥಾನ

ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶಗಳ ನಡುವಣ ಮೊದಲ ಟೆಸ್ಟ್‌ ಚೆನ್ನೈನಲ್ಲಿ ಮುಕ್ತಾಯಗೊಂಡಿದೆ. 280 ರನ್‌ಗಳಿಂದ ಪ್ರವಾಸಿ ತಂಡವನ್ನು ಮಣಿಸಿ, ರೋಹಿತ್‌ ಪಡೆ ಅಬ್ಬರಿಸಿದೆ. ಇದೇ ವೇಳೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಎರಡನೇ ಟೆಸ್ಟ್‌ಗೆ ತಂಡವನ್ನು ಪ್ರಕಟವಾಗಿದೆ.

ಬಿಸಿಸಿಐ ಎರಡನೇ ಟೆಸ್ಟ್‌ಗೆ ಬಿಡುಗಡೆ ಮಾಡಿದ ತಂಡದಲ್ಲಿ ಒಂದೇ ಒಂದು ಬದಲಾವಣೆಯನ್ನು ಮಾಡಿಲ್ಲ. ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಿಂದ ನಡೆಯಲಿದೆ. ಎರಡನೇ ಟೆಸ್ಟ್‌ನ್ನು ಜಯ ಸಾಧಿಸುವ ಮೂಲಕ ಕ್ಲೀನ್‌ ಸ್ವೀಪ್‌ ಸಾಧನೆ ಮಾಡುವ ಕನಸು ಹೊಂದಿದೆ.

India Announces Unchanged Squad for Second Test Against Bangladesh After Dominating Win

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಭಾರತ ತಂಡ ಪ್ರಸ್ತುತ ಮೊದಲ ಸ್ಥಾನದಲ್ಲಿದೆ. ಭಾರತ ತಂಡ ಎರಡನೇ ಟೆಸ್ಟ್ ಪಂದ್ಯ ಗೆದ್ದರೆ ಅಂಕಪಟ್ಟಿಯಲ್ಲಿ ತನ್ನ ಅಗ್ರ ಸ್ಥಾನವನ್ನು ಮತ್ತಷ್ಟು ಬಲಿಷ್ಢವಾಗಬಹುದು. ಎರಡನೇ ಟೆಸ್ಟ್ಟ್‌ ಪಂದ್ಯ ಕಾನ್ಪೂರದಲ್ಲಿ ನಡೆಯಲಿದ್ದು, ಸ್ಪಿನ್ ಬೌಲರ್‌ಗಳ ಪಾತ್ರ ಬಹುಮುಖ್ಯವಾಗಿರಲಿದೆ. ಹೀಗಾಗಿ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ನಾಯಕ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೂರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಬಹುದು.

ಮೂವರಿಗೆ ನಿರಾಸೆ

ಎರಡನೇ ಟೆಸ್ಟ್ ಪಂದ್ಯಕ್ಕೆ ಅಭಿಮನ್ಯು ಈಶ್ವರನ್ ಮತ್ತು ಸಂಜು ಸ್ಯಾಮ್ಸನ್ ಅವರು ದುಲೀಪ್‌ ಟ್ರೋಫಿಯಲ್ಲಿ ಅಬ್ಬರದ ಪ್ರದರ್ಶನದ ಹೊರತಾಗಿಯೂ ಅವರನ್ನು ಎರಡನೇ ಟೆಸ್ಟ್‌ಗೆ ಆಯ್ಕೆ ಮಾಡುವಲ್ಲಿ ಆಯ್ಕೆ ಸಮಿತಿ ಹಿಂದೆ ಬಿದ್ದಿದೆ. ಅಭಿಮನ್ಯು ಈಶ್ವರನ್ ಎರಡು ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಬಾರಿಸಿದರೆ, ಸಂಜು ತಮ್ಮ ಕೊನೆಯ ಪಂದ್ಯದಲ್ಲೂ ಅದ್ಭುತ ಶತಕವನ್ನು ಬಾರಿಸಿದರು. ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದರು ಈ ಆಟಗಾರರಿಗೆ ಬಿಸಿಸಿಐ ಆಯ್ಕೆ ಸಮಿತಿ ಮಣೆ ಹಾಕಿಲ್ಲ.

ದುಲೀಪ್ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಇಶಾನ್‌ ಕಿಶನ್‌ ಅವರನ್ನು ಸಹ ಕಡೆ ಗಣಿಸಲಾಗಿದೆ. ಈ ಮೂವರು ಆಟಗಾರರು ಭಾರತ ಟೆಸ್ಟ್ ತಂಡ ಸೇರುವ ಕನಸು ಹೊಂದಿದ್ದರು. ಆದರೆ ಈ ಆಸೆ ಸದ್ಯಕ್ಕೆ ಕೈಗೂಡಲಿಲ್ಲ. ಇಶಾನ್‌ ಕಿಶನ್‌ ಟೆಸ್ಟ್‌ ಕ್ರಿಕೆಟ್‌ಗೆ ಕಮ್‌ ಬ್ಯಾಕ್‌ ಮಾಡುವ ಕನಸು ಸಹ ನುಚ್ಚುನೂರಾಗಿದೆ.

ಎರಡನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

Story first published: Sunday, September 22, 2024, 13:42 [IST]
Other articles published on Sep 22, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+