ODI World Cup squad: ಹರ್ಮನ್ ನಾಯಕಿ, ಸ್ಮೃತಿ ಉಪನಾಯಕಿ
ಭಾರತದಲ್ಲಿ ನಡೆಯಲಿರುವ ಏಕದಿನ ಮಹಿಳಾ ವಿಶ್ವಕಪ್‌ಗೆ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಅಳೆದು ತೂಗಿ ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಬಿಸಿಸಿಐ ಆಯ್ಕೆ ಸಮಿತಿ ಸಭೆಯಲ್ಲಿ ತಂಡವನ್ನು ಪ್ರಕಟಿಸಲಾಗಿದೆ. ಈ ವೇಳೆ ಹರ್ಮನ್ ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.
ನೀತು ಡೇವಿಡ್, ದೇವಜಿತ್ ಸೈಕಿಯಾ, ಅಮೋಲ್ ಮುಜುಂದಾರ್, ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಲಾಗಿದೆ. ಮಹತ್ವದ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಮತ್ತೊಮ್ಮೆ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.ಸ್ಮೃತಿ ಮಂಧನಾ ಅವರಿಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

ಶೆಫಾಲಿಗೆ ಇಲ್ಲ ಸ್ಥಾನ
ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅವರಿಗೆ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಇವರಿಗೆ ಇಂಗ್ಲೆಂಡ್ ಪ್ರವಾಸದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಈ ಅವಕಾಶವನ್ನು ಬಳಸಿಕೊಂಡು ಮಿಂಚುವಲ್ಲಿ ಅವರು ವಿಫಲರಾಗಿದ್ದರು. ಇವರು ಈ ವೇಳೆ 3, 47, 31 ರನ್ ಬಾರಿಸಿ ನಿರಾಸೆ ಅನುಭವಿಸಿದ್ದರು. ಅಲ್ಲದೆ ಆಸ್ಟ್ರೇಲಯಾ ಎ ವಿರುದ್ಧದ ಸರಣಿಯಲ್ಲೂ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಟೀಮ್ ಇಂಡಿಯಾ ಪರ ವಿಶ್ವಕಪ್‌ನಲ್ಲಿ ಸ್ಮೃತಿ ಮಂಧನಾ ಹಾಗೂ ಪ್ರತಿಕಾ ರಾವಲ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಜೋಡಿ ಪ್ರಸಕ್ತ ವರ್ಷ ಅಮೋಘ ಪ್ರದರ್ಶನ ನೀಡಿದ್ದರಿಂದ ಆಯ್ಕೆ ಸಮಿತಿ ಇವರಿಗೆ ಮಣೆ ಹಾಕಿದೆ.
8 ತಂಡಗಳು ಭಾಗಿ
ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ಮಹಿಳಾ ವಿಶ್ವಕಪ್‌ನಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಲಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಸೇರಿದಂತೆ ಎಂಟು ತಂಡಗಳು ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲಿವೆ. ಆಸ್ಟ್ರೇಲಿಯಾ ಈ ಪಂದ್ಯಾವಳಿಯನ್ನು ಹಾಲಿ ಚಾಂಪಿಯನ್ ಆಗಿ ಪ್ರವೇಶಿಸಲಿದೆ.
ಏಕದಿನ ವಿಶ್ವಕಪ್‌ಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ ಕೀಪರ್), ಕ್ರಾಂತಿ ಗೌಡ್, ಅಮಂಜೋತ್ ಕೌರ್, ರಾಧಾ ಯಾದವ್, ಶ್ರೀ ಚರಣಿ,
ಕಾಯ್ದಿರಿಸಿದ ಆಟಗಾರರು: ತೇಜಲ್ ಹಸಬ್ನಿಸ್, ಪ್ರೇಮಾ ರಾವತ್, ಪ್ರಿಯಾ ಮಿಶ್ರಾ, ಉಮಾ ಚೆಟ್ರಿ, ಮಿನ್ನು ಮಣಿ, ಸಯಾಲಿ ಸತ್ಘರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್‌ಕೀಪರ್, ಚರಂತಿ ಯವ್ವ, ಚರಣಿ ಯವ್ವ, ಚರಂತಿ ಸತ್ವರೆ ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ ರಾಣಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications