ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ. ಬ್ರಿಸ್ಬೇನ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಮಾಡುವ ವೇಳೆಗೆ ಮಂದ ಬೆಳಕು ಹಾಗೂ ಮಳೆ ಕಾಟ ನೀಡಿದ್ದರಿಂದ ಪದ್ಯವನ್ನು ನಿಲ್ಲಿಸಲಾಯಿತು. ಬಳಿಕ ಡ್ರಾ ಎಂದು ಘೋಷಿಸಲಾಯಿತು. ಈಗ ಉಭಯ ತಂಡಗಳ ನಡುವಿನ ನಾಲ್ಕನೇ ಟೆಸ್ಟ್ ಮೆಲ್ಬರ್ನ್‌ನಲ್ಲಿ ಡಿಸೆಂಬರ್ 26 ರಂದು ನಡೆಯಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಹೋಗುವ ಅವಕಾಶಗಳು ಇವೆಯಾ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ಮಳೆ ಹಾಗೂ ಮಂದ ಬೆಳಕಿನಿಂದ ನಿಂತ ಪಂದ್ಯ ಡ್ರಾದಲ್ಲಿ ಅಂತ್ಯವಾಯಿತು. ಉಭಯ ತಂಡಗಳ ನಡುವಣ ಟೆಸ್ಟ್ ಡ್ರಾದಲ್ಲಿ ಅಂತ್ಯವಾಗಿದ್ದರಿಂದ ದಕ್ಷಿಣ ಆಫ್ರಿಕಾ ಲಾಭ ಪಡೆದಿದೆ. ಈ ಪಂದ್ಯ ನಿಜಕ್ಕೂ ದಕ್ಷಿಣ ಆಫ್ರಿಕಾ ಮುಖದಲ್ಲಿ ಮಂದಹಾಸ ಮೂಡಿಸಿರಲಿದೆ. ಅಲ್ಲದೆ ನಂಬರ್ 1 ಸ್ಥಾನದಲ್ಲಿ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ತಾನಾಡಿದ ಟೆಸ್ಟ್ ಪಂದ್ಯಗಳಲ್ಲಿ 63.33ರಷ್ಟು ಗೆಲುವಿನ ಶೇಕಡಾವಾರು ಹೊಂದಿದೆ.

ಈ ಪಟ್ಟಿಯಲ್ಲಿ ಬಹು ದಿನಗಳಿಂದ ಮೊದಲ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಮಹತ್ವದ ಸಮಯದಲ್ಲಿ ಸ್ಥಾನ ಪಲ್ಲಟವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಗೆಲುವಿನ ಶೇಕಡಾ 60.71ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಭಾರತ 57.29 ಗೆಲುವಿನ ಶೇಕಡಾವಾರಿನೊಂದಿಗೆ ಮೂರನೇ ಸ್ಥಾನದಲ್ಲಿದೆ. ಭಾರತ ಮೂರನೇ ಸ್ಥಾನದಲ್ಲಿದ್ದರೂ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವ ಸಾಧ್ಯತೆ ಇನ್ನು ಇವೆ.
ಮೆಲ್ಬರ್ನ್ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪುವ ಆಸೆ ನನಸಾಗುತ್ತದೆ. ಮುಂದಿನ ಎರಡೂ ಟೆಸ್ಟ್ ಭಾರತಕ್ಕೆ ಮಹತ್ವದಾಗಿದೆ. ಮುಂದಿನ ಎರಡು ಟೆಸ್ಟ್‌ಗಳ ಫಲಿತಾಂಶ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳಲ್ಲಿ ಯಾವ ತಂಡ ಫೈನಲ್‌ಗೆ ಪ್ರವೇಶಿಸಲಿದೆ ಎಂಬ ಬಗ್ಗೆ ಸ್ಪಷ್ಟತೆ ನೀಡುತ್ತದೆ.

ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮೇಲೆ ಮೂರು ತಂಡಗಳು ಕಣ್ಣು ನೆಟ್ಟಿವೆ. ಈಗಾಗಲೇ ನಂಬರ್ 1 ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಒಂದು ಕಾಲು ಫೈನಲ್‌ನಲ್ಲಿ ಇಟ್ಟು ಆದಂತೆ ಕಾಣುತ್ತಿದೆ. ಪಾಕಿಸ್ತಾನ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್‌ಗಳ ಪಂದ್ಯದಲ್ಲಿ ಒಂದು ಪಂದ್ಯ ಗೆದ್ದರೂ ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶಿಸುವುದು ಪಕ್ಕಾ. ಭಾರತ ತನ್ನ ಉಳಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ್ದೇ ಆದಲ್ಲಿ ಟೀಮ್ ಇಂಡಿಯಾ ಸಹ ಟಫ್ ಕಾಂಪಿಟೇಷನ್ ನೀಡುತ್ತದೆ. ಭಾರತಕ್ಕೆ ಈ ಸರಣಿಯ ಬಳಿಕ ಬೇರೆ ಯಾವುದೇ ಟೆಸ್ಟ್ ಸರಣಿಗಳು ಇಲ್ಲ. ಹೀಗಾಗಿ ಈ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾದ್ದಾಗಿದೆ. ಆಸ್ಟ್ರೇಲಿಯಾಕ್ಕೆ ಈ ಸರಣಿ ಮುಗಿದ ಬಳಿಕ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಸರಣಿ ಆಡಲಿದೆ. ಇದರ ಫಲಿತಾಂಶದ ಮೇಲೆ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಯಾರು ಹೋಗಲಿದ್ದಾರೆ ಎಂಬುದು ಡಿಸೈಡ್ ಆಗಲಿದೆ.