ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ-ಆಸೀಸ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಸಂಚಾರ ಮಾರ್ಗ ಬದಲಾವಣೆ

By Gururaj S
India and Australia second T20 match: Traffic restrictions in Bengaluru

ಬೆಂಗಳೂರು, ಫೆಬ್ರವರಿ 26: ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಬೆಂಗಳೂರಿನಲ್ಲಿ ಫೆಬ್ರವರಿ 27ರ ಬುಧವಾರ ನಡೆಯಲಿದೆ. ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತ ವಾಹನ ಸಂಚಾರದಲ್ಲಿ ಹಲವು ಬದಲಾವಣೆ ಮಾಡಿಕೊಳ್ಳಲಾಗಿದೆ.

ಶ್ರೀಲಂಕಾ ಮಾಜಿ ನಾಯಕ ಸನತ್ ಜಯಸೂರ್ಯಗೆ ನಿಷೇಧ ಹೇರಿದ ಐಸಿಸಿ!ಶ್ರೀಲಂಕಾ ಮಾಜಿ ನಾಯಕ ಸನತ್ ಜಯಸೂರ್ಯಗೆ ನಿಷೇಧ ಹೇರಿದ ಐಸಿಸಿ!

ಇತ್ತಂಡಗಳ ನಡುವಿನ ಆರಂಭಿಕ ಟಿ20 ಆರಂಭಿಕ ಪಂದ್ಯದಲ್ಲಿ ಭಾರತ 3 ವಿಕೆಟ್ ಸೋಲನುಭವಿಸಿತ್ತು. ಈಗ ಸರಣಿ 1-0ಯಿಂದ ಆಸೀಸ್ ವಶವಾಗಿರುವುದರಿಂದ ಬೆಂಗಳೂರು ಪಂದ್ಯದ ಗೆಲುವು ಭಾರತಕ್ಕೆ ಮಹತ್ವದ್ದು. ಹೀಗಾಗಿ ಪಂದ್ಯಕ್ಕೆ ಸಹಜವಾಗೇ ಹೆಚ್ಚಿನ ವೀಕ್ಷಕರು ಸೇರುವ ನಿರೀಕ್ಷೆಯಿದೆ.

ಮೊದಲ ಟಿ20: ಭಾರತ ವಿರುದ್ಧ ಆಸ್ಟ್ರೇಲಿಯಾಕ್ಕೆ 3 ವಿಕೆಟ್ ರೋಚಕ ಗೆಲುವು!ಮೊದಲ ಟಿ20: ಭಾರತ ವಿರುದ್ಧ ಆಸ್ಟ್ರೇಲಿಯಾಕ್ಕೆ 3 ವಿಕೆಟ್ ರೋಚಕ ಗೆಲುವು!

ಪಂದ್ಯ ವೀಕ್ಷಣೆಗೆ ಬರುವ ಕ್ರಿಕೆಟ್ ಅಭಿಮಾನಿಗಳಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರ ದೃಷ್ಟಿಯಿಂದ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಈ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರ ತನಕ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಸುಗಮ ಸಂಚಾರಕ್ಕಾಗಿ ಜನರು ಸಹಕಾರ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಎಲ್ಲಿ ವಾಹನ ನಿಲುಗಡೆ ಇಲ್ಲ

ಎಲ್ಲಿ ವಾಹನ ನಿಲುಗಡೆ ಇಲ್ಲ

* ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ ವಾಹನ ನಿಲ್ಲಿಸುವಂತಿಲ್ಲ.

ಇಲ್ಲಿ ವಾಹನ ನಿಲ್ಲಿಸಬೇಡಿ

ಇಲ್ಲಿ ವಾಹನ ನಿಲ್ಲಿಸಬೇಡಿ

* ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
* ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ.
* ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ ನೋ ಪಾರ್ಕಿಂಗ್.
* ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ. ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧ.
* ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆ ನಿಷೇಧ. ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನಗಳ ನಿಲುಗಡೆ ಕಡ್ಡಾಯ ನಿಷೇಧ.

ಎಲ್ಲಿ ವಾಹನಗಳನ್ನು ನಿಲ್ಲಿಸಬಹುದು

ಎಲ್ಲಿ ವಾಹನಗಳನ್ನು ನಿಲ್ಲಿಸಬಹುದು

* ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
* ಶಿವಾಜಿನಗರ ಬಸ್ ನಿಲ್ದಾಣದ 1 ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
* ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲ್ಲಿಸುವುದು.
* ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು.

ಬಿಎಂಟಿಸಿ, ಮೆಟ್ರೋ ಬಳಸಿ

ಬಿಎಂಟಿಸಿ, ಮೆಟ್ರೋ ಬಳಸಿ

ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ-ಮುತ್ತ ವಾಹನಗಳ ನಿಲುಗಡೆ ಸ್ಥಳದ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿ.ಎಂ.ಟಿ.ಸಿ ಬಸ್) ಹಾಗೂ ನಮ್ಮ ಮೆಟ್ರೋ ಸೇವೆಯನ್ನು ಬಳಸಲು ಮನವಿ ಮಾಡಲಾಗಿದೆ.

ಪಾದಚಾರಿಗಳಿಗೆ ಸೂಚನೆ

ಪಾದಚಾರಿಗಳಿಗೆ ಸೂಚನೆ

* ಗೇಟ್‌ನಂ-1 ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು ಪಾದಚಾರಿಗಳಿಗೆ / ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ.
* ಗೇಟ್ ನಂ.7 ರಿಂದ ಗೇಟ್ ನಂ 11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರೇಕ್ಷಕರುಗಳು/ಪಾದಚಾರಿಗಳು ಹೋಗಬಹುದು.
* ಗೇಟ್ ನಂ. 12 ರಿಂದ 21 ವರೆಗೆ ಕ್ವೀನ್ಸ್ ರಸ್ತೆಯಲ್ಲಿದ್ದು, ಇಲ್ಲಿಗೆ ಪಾದಚಾರಿ/ವೀಕ್ಷಕರುಗಳಿಗೆ ಪ್ರವೇಶವನ್ನು ಕಲ್ಪಿಸಲಾಗಿರುತ್ತದೆ.

Story first published: Tuesday, February 26, 2019, 20:17 [IST]
Other articles published on Feb 26, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X