ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ವೇಳೆ ಈಗಾಗಲೇ ಮೂರು ಟಿ20 ಪಂದ್ಯಗಳು ನಡೆದಿವೆ. ಈ ವೇಳೆ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಈ ವೇಳೆ ನಾಲ್ಕನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಲು ಎರಡೂ ತಂಡಗಳು ಪ್ಲ್ಯಾನ್ ಮಾಡಿಕೊಂಡಿವೆ. ಹೀಗಾಗಿ ನಾಲ್ಕನೇ ಪಂದ್ಯ ನಿರ್ಣಾಯಕವಾಗಿದೆ. ಆಸ್ಟ್ರೇಲಿಯಾ ತನ್ನ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕೆ ಇಳಿಯಲು ನಿರ್ಧರಿಸಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಪಂದ್ಯ ಮಳೆಯುಂದಾಗಿ ರದ್ದಾಗಿತ್ತು. ಆಸ್ಟ್ರೇಲಿಯಾ ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಮೂರನೇ ಪಂದ್ಯವನ್ನು ಭಾರತ ಗೆದ್ದು ಬೀಗಿತ್ತು. ಗುರುವಾರ ನಾಲ್ಕನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಿದ್ಧತೆಗಳು ನಡೆಸಿವೆ. ನಾಲ್ಕನೇ ಪಂದ್ಯಕ್ಕೆ ಆಸೀಸ್ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅಂಗಳಕ್ಕೆ ಇಳಿಯುತ್ತಿಲ್ಲ. ಇವರ ಜೊತೆಗೆ ಸೀನ್ ಅಬಾಟ್ ಕೂಡ ಮುಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ.

ಟ್ರಾವಿಸ್ ಹೆಡ್ ನಾಲ್ಕನೇ ಟಿ20 ಪಂದ್ಯದಿಂದ ಹೊರಗುಳಿದಿದ್ದು, ಅವರು ದೇಶೀಯ ಶೆಫೀಲ್ಡ್ ಶೀಲ್ಡ್‌ನಲ್ಲಿ ಆಡಲಿದ್ದಾರೆ ಎಂದು ತಿಳಿದು ಬಂದಿದೆ. ದೇಶೀಯ ಟೂರ್ನಿಯಲ್ಲಿ ಹೆಡ್ ದಕ್ಷಿಣ ಆಸ್ಟ್ರೇಲಿಯಾ ಪರ ಮೈದಾನಕ್ಕೆ ಇಳಿಯಲಿದ್ದಾರೆ. ಇವರು ಆಶಸ್ ಸರಣಿಗಾಗಿ ತಯಾರಿ ನಡೆಸಲಿದ್ದಾರೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮುಂಬರುವ ಪ್ರತಿಷ್ಠಿತ ಆಷಸ್ ಸರಣಿಗಾಗಿ ಆಸೀಸ್ ತಯಾರಿ ನಡೆಸುತ್ತಿದೆ. ಹೀಗಾಗಿ ಆಟಗಾರರು ಕೆಲಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆಷಸ್ ಸರಣಿ ಅತಿ ದೊಡ್ಡ ಸರಣಿಗಳಲ್ಲಿ ಒಂದಾಗಿದೆ ಎಂದು ಆಸೀಸ್ ಪರಿಗಣಿಸಿದೆ.
ಇನ್ನು ಎರಡು ಟಿ20 ಪಂದ್ಯಗಳು ಉಳಿದಿದ್ದು ಈ ವೇಳೆ ಭಾರತ, ಆಸ್ಟ್ರೇಲಿಯಾ ತಂಡಗಳಿಗೆ ಈ ಸರಣಿ ನಿರ್ಣಾಯಕವಾಗಿದೆ. ಕ್ಯಾರಾರಾದಲ್ಲಿ ನಡೆಯಲಿರುವ ನಾಲ್ಕನೇ ಪಂದ್ಯದಲ್ಲಿ ಯಾವ ತಂಡ ಗೆಲುವು ದಾಖಲಿಸುವುದು ಆ ತಂಡ ಸರಣಿಯಲ್ಲಿ ಮುನ್ನಡೆ ದಾಖಲಿಸಲಿದೆ. ಆಸೀಸ್ ತಂಡದಲ್ಲಿ ಬದಲವಾಣೆಯ ಗಾಳಿ ಬೀಸಿದೆ. ಇನ್ನು ಪ್ರವಾಸಿ ಭಾರತ ತಂಡದ ಸ್ಟಾರ್ ರಿಸ್ಟ್ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ ಅವರನ್ನು ಕೈ ಬಿಡಲಾಗಿದೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ತಯಾರಿ ನಡೆಸಲಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನವೆಂಬರ್ 14 ರಂದು ನಡೆಯಲಿದೆ. ಟೆಸ್ಟ್ ಸರಣಿಗಾಗಿ ಕುಲ್‌ದೀಪ್ ತಯಾರಿ ನಡೆಸುವ ಉದ್ದೇಶದಿಂದ ಕುಲ್‌ದೀಪ್ ತವರಿನತ್ತ ಮುಖ ಮಾಡಿದ್ದಾರೆ. ಈ ಸರಣಿಗೆ ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ.
ಭಾರತ ತಂಡದಲ್ಲಿ ಯಾವೆಲ್ಲಾ ಆಟಗಾರರಿಗೆ ಅವಕಾಶ ಸಿಗಬಹುದು ಎಂಬ ಕುತೂಹಲ ಮನೆ ಮಾಡಿದೆ. ಕರ್ನಾಟಕದ ಸ್ಟಾರ್ ಆಟಗಾರರು ಸಹ ತಂಡದಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿದ್ದಾರೆ.