Jasprit Bumrah: ಚಾಪಿಯಂನ್ಸ್ ಟ್ರೋಫಿಗೂ ಮುನ್ನ ಭಾರತಕ್ಕೆ ಹಿನ್ನಡೆ? ಬುಮ್ರಾ ಗಾಯದ ಬಗ್ಗೆ ಬಿಗ್ ಅಪ್‌ಡೇಟ್
ಪಾಕಿಸ್ತಾನ ಫೆಬ್ರವರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲಿದೆ. ಭಾರತ ಸಹ ಈ ಟೂರ್ನಿಯಲ್ಲಿ ಭಾಗವಹಿಸಲಿದೆ. ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತವನ್ನು ಪರಿಗಣಿಸಲಾಗಿದೆ. ಆದರೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಕಟ್ಟುವ ಮುನ್ನವೇ ಪೆಟ್ಟು ಬೀಳುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ಪ್ರವಾಸದ ವೇಳೆ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿದ್ದ ಜಸ್ಪ್ರಿತ್ ಬುಮ್ರಾ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಇತ್ತೀಚಿಗೆ ಬಾರ್ಡರ್ ಗವಾಸ್ಕರ್ ಸರಣಿಯ ಐದನೇ ಪಂದ್ಯ ಸಿಡ್ನಿ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವ ವೇಳೆ ಜಸ್ಪ್ರಿತ್ ಬುಮ್ರಾ ಮೈದಾನದಿಂದ ದೂರ ಸರಿದರು. ಆದರೆ ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟ ಪಡಿಸಿರಲಿಲ್ಲ. ಮೈದಾನದಿಂದ ಹೊರ ಹೋಗುತ್ತಿದ್ದಂತೆ ಬುಮ್ರಾ ಬೌಲಿಂಗ್ ಕೋಚ್ ಹಾಗೂ ಸಿಬ್ಬಂದಿಯ ಜೊತೆಗೆ ಆಸ್ಪತ್ರೆಗೆ ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು. ಆ ಬಳಿಕ ಅವರ ಗಾಯದ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ.

ಅಭಿಮಾನಿಗಳಲ್ಲಿ ಆತಂಕ
ಜಸ್ಪ್ರಿತ್ ಬುಮ್ರಾ ಐದನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದರು. ಆದರೆ ಒಂದೇ ಒಂದು ಒವರ್ ಬೌಲಿಂಗ್ ಮಾಡಲಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈಗ ಇವರ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಬೆನ್ನು ನೋವಿನ ಗಾಯವನ್ನು ಮೂರು ವಿಧದಲ್ಲಿ ವಿಂಗಡಿಸಬಹುದು. ಒಂದು ವೇಳೆ ಬುಮ್ರಾ ಅವರಿಗೆ ಗ್ರೇಡ್ 1 ಗಾಯವಾಗಿದ್ದರೆ, 2 ರಿಂದ 3 ವಾರದಲ್ಲಿ ಚೇತರಿಸಿಕೊಳ್ಳಬಹುದು. ಗ್ರೇಡ್ 2 ಗಾಯವಾಗಿದ್ದರೆ, ಚೇತರಿಕೆಗೆ 6 ವಾರ ತೆಗೆದುಕೊಳ್ಳುತ್ತದೆ. ಗ್ರೇಡ್ 3 ಗಾಯವಾಗಿದ್ದರೆ, 3 ತಿಂಗಳು ಚೇತರಿಕೆಗೆ ಬೇಕಾಗುತ್ತದೆ. ಇನ್ನು ಬುಮ್ರಾ ಅವರ ಗಾಯ ಯಾವ ಸ್ವರೂಪದಲ್ಲಿದೆ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಇವರು ತಮ್ಮ ಬೆನ್ನು ನೋವಿನ ಗಾಯಕ್ಕೆ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಫೆಬ್ರವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ
ಬುಮ್ರಾ ಈಗಾಗಲೇ ಒಮ್ಮೆ ಬೆನ್ನು ಮುಳೆಯ ಶಸ್ತ್ರ ಚಿಕಿತ್ಸೆಯನ್ನು ಆಸ್ಟ್ರೇಲಿಯಾದಲ್ಲಿ ಮಾಡಿಸಿದ್ದರು. ಹೀಗಾಗಿ ಅಲ್ಲಿಯ ವೈದ್ಯರ ಬಳಿಯೇ ಈಗಲೂ ಚಿಕಿತ್ಸೆ ಪಡೆಯಬಹುದು ಎಂದು ಹೇಳಾಗುತ್ತಿದೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಬುಮ್ರಾ ಅವರು ಈ ವೇಳೆಗೆ ಚೇತರಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಅಬ್ಬರದ ಪ್ರದರ್ಶನ
ಜಸ್ಪ್ರಿತ್ ಬುಮ್ರಾ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ವಿಕೆಟ್‌ಗಳ ಬೇಟೆ ನಡೆಸಿದ್ದರು. ಇವರು ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್. ಬುಮ್ರಾ ಆಡಿದ 5 ಪಂದ್ಯಗಳಲ್ಲಿ 32 ವಿಕೆಟ್ ಕಬಳಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು. ಬಾರ್ಡರ್ ಗವಾಸ್ಕರ್ ಒಂದೇ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಈಗ ಜಂಟಿಯಾಗಿ ನಂಬರ್ 1 ಸ್ಥಾನದಲ್ಲಿದ್ದಾರೆ. ಹರ್ಭಜನ್ ಸಿಂಗ್ ಸಹ 32 ವಿಕೆಟ್ ಕಬಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications