IND vs BAN: ಭಾರತ -ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ ಆರಂಭವಾಗಲಿದೆ?
ಬಾಂಗ್ಲಾದೇಶ ತಂಡವು ಟೆಸ್ಟ್ ಮತ್ತು ಟಿ20 ಸರಣಿಗಳನ್ನು ಆಡಲು ಭಾರತ ಪ್ರವಾಸ ಕೈಗೊಂಡಿದೆ. ಈಗ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು 280 ರನ್‌ಗಳಿಂದ ಸೋಲಿಸಿದೆ.
ಇದೀಗ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟೀಮ್ ಇಂಡಿಯಾ ಕಾನ್ಪುರದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಎರಡು ಬಾಂಗ್ಲಾದೇಶವನ್ನು 2-0 ರಿಂದ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ.

ಎರಡನೇ ಟೆಸ್ಟ್ ಪಂದ್ಯ ಯಾವಾಗ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕಾನ್ಪುರದಲ್ಲಿ ಈ ಪಂದ್ಯ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾ ವಿಭಿನ್ನ ತಂತ್ರಗಾರಿಕೆವೊಂದಿಗೆ ಮೈದಾನಕ್ಕೆ ಬರಳಿದೆ. ಇನ್ನೊಂದೆಡೆ ಬಾಂಗ್ಲಾದೇಶ ಕೂಡ ಸೋಲಿನ ಸೇಡಿಗೆ ಸಜ್ಜಾಗಲಿದೆ.
ಲೈವ್ ಸ್ಟ್ರೀಮಿಂಗ್?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಂದು (ಶುಕ್ರವಾರ) ಬೆಳಗ್ಗೆ 9:30 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ನೇರ ಪ್ರಸಾರವನ್ನು ಕ್ರಿಕೆಟ್ ಅಭಿಮಾನಿಗಳು ಸ್ಪೋರ್ಟ್ಸ್ 18-1ಎಸ್‌ಡಿ, ಸ್ಪೋರ್ಟ್ಸ್ 18-1 ಎಚ್‌ಡಿ, ಸ್ಪೋರ್ಟ್ಸ್ 18-2 ಹಿಂದೆ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಇದಲ್ಲದೆ, ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾ ಮೊಬೈಲ್ ಅಪ್ಲಿಕೇಶನ್‌ನಲ್ಲಿ ನೋಡಬಹುದು.
ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
ಬಾಂಗ್ಲಾದೇಶ: ನಜ್ಮುಲ್ ಹಸನ್ ಶಾಂತೊ (ನಾಯಕ), ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ನಹೀದ್ ರಾಣಾ, ತೈಜುಲ್ ಇಸ್ಲಾಂ, ಮಹಮದುಲ್ ಹಸನ್ ಜಾಯ್, ಖಲೀದ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications