ಆಸೀಸ್ ವಿರುದ್ಧ ಹ್ಯಾಟ್ರಿಕ್ ಜಯ ಗಳಿಸಿ ಒಡಿಐ ನಂ.1 ಸ್ಥಾನಕ್ಕೇರಿದ ಭಾರತ
ನವದೆಹಲಿ, ಸೆಪ್ಟೆಂಬರ್ 25 : ಸರಣಿಗಳ ಮೇಲೆ ಸರಣಿ ಜಯಿಸುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ
ಭಾನುವಾರ ಇಂದೋರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ಐದು ಪಂದ್ಯಗಳ ಸರಣಿಯಲ್ಲಿ 3-0ರಲ್ಲಿ ಮುನ್ನಡೆ ಸಾಧಿಸಿ ಸರಣಿ ಕೈ ವಶ ಮಾಡಿಕೊಂಡಿತು. ಈ ಮೂಲಕ ಭಾರತ ಅಂತಾರಾಷ್ಟ್ರೀಯ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಅಲಂಕರಿಸಿತು.

ಆಸ್ಟ್ರೇಲಿಯಾ ವಿರುದ್ಧ ಭಾರತ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸುವ ಮೂಲಕ 120 ಪಾಯಿಂಟ್ಸ್ ಗಳನ್ನು ಹೊಂದಿದೆ. ಮೊದಲು ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡ 119 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಭಾರತದ ವಿರುದ್ಧ ಹ್ಯಾಟ್ರಿಕ್ ಸೋಲು ಕಂಡಿರುವ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ.
ಟೆಸ್ಟ್ ಶ್ರೇಯಾಂಕದಲ್ಲೂ ಭಾರತ ನಂ.1: ಇನ್ನು ಟೆಸ್ಟ್ ಶ್ರೇಯಾಂಕದಲ್ಲೂ ಟೀಂ ಇಂಡಿಯಾದ ಅಗ್ರ ಸ್ಥಾನದಲ್ಲಿದ್ದು, ಒಟ್ಟು 125 ಅಂಕಗಳನ್ನು ಕಲೆಹಾಕಿದೆ. ಇನ್ನು 110 ಅಂಕಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ ತಂಡ 2ನೇ ಸ್ಥಾನದಲ್ಲಿದೆ.
97 ಅಂಕಗಳಿಸಿರುವ ಆಸ್ಟ್ರೇಲಿಯಾ 5ನೇ ಸ್ಥಾನದಲ್ಲಿದ್ದರೆ, ಇಷ್ಟೇ ಅಂಕಗಳೊಂದಿಗೆ ನ್ಯೂಜಿಲೆಂಡ್ ನಾಲ್ಕನೇ ಸ್ಥಾನದಲ್ಲಿದೆ. 105 ಅಂಕ ಗಳಿಸಿರುವ ಇಂಗ್ಲೆಂಡ್ 3 ಮತ್ತು 93 ಅಂಕಗಳೊಂದಿಗೆ ಪಾಕಿಸ್ತಾನ 6ನೇ ಸ್ಥಾನದಲ್ಲಿದೆ.
ಇನ್ನು ಟಿ20ಯಲ್ಲಿ ನ್ಯೂಜಿಲೆಂಡ್ 125 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿದೆ, 115 ಅಂಕಗಳನ್ನು ಹೊಂದಿರುವ ಭಾರತ ಐದನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications