ಟೀಮ್ ಇಂಡಿಯಾದ ಮುಡಿಗೆ ಮತ್ತೊಂದು ಗರಿ: ಒಂದೇ ವರ್ಷ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ
ಕಳೆದ ಎರಡು ದಿನಗಳಿಂದ ಮಳೆ ಸುರಿದು ಕಾನ್ಪುರ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿತ್ತು. ಆದರೆ ಸೋಮವಾರ ಅಭಿಮಾನಿಗಳಿಗೆ ಆಟಗಾರರು ಹಬ್ಬದೂಟವನ್ನು ಉಣ ಬಡಿಸಿದ್ದಾರೆ. ಗ್ರೀನ್ ಪಾರ್ಕ್ ಅಂಗಳದಲ್ಲಿ ಮೊದಲು ಬೌಲಿಂಗ್‌ನಲ್ಲಿ ಟೀಮ್ ಇಂಡಿಯಾ ಪೇಸರ್ಸ್ ಅಬ್ಬರಿಸಿದರು. ಬಳಿಕ ರೋಹಿತ್ ಪಡೆಯ ಬ್ಯಾಟರ್ಸ್ ಬೌಂಡರಿ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್ಭಟಿಸಿದರು.
ಈಗಾಗಲೇ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಕೊಂಡಿರುವ ಭಾರತ, ಎರಡನೇ ಟೆಸ್ಟ್‌ನಲ್ಲಿ ಗೆಲುವಿನ ನಗೆ ಬೀರಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೊದಲ ಇನಿಂಗ್ಸ್‌ನಲ್ಲಿ ಅಟ್ಯಾಕಿಂಗ್ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಮತ್ತೊಂದು ದಾಖಲೆಗೆ ತಮ್ಮ ಹೆಸರನ್ನು ನಮೂದಿಸಿದೆ.

ಮೊದಲ ಇನಿಂಗ್ಸ್ ಬ್ಯಾಟ್ ಮಾಡಲು ಬಂದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಮೈದಾನಕ್ಕೆ ಇಳಿದರೂ ಅಟ್ಯಾಕಿಂಗ್ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಜೊತೆಗೂಡಿ ತಂಡಕ್ಕೆ ಮೂರು ಓವರ್‌ಗಳಲ್ಲಿ 50 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ, ದಾಖಲೆಯ ಪುಟಕ್ಕೆ ಎಂಟ್ರಿ ನೀಡಿದರು. ಇನ್ನು ವೇಗವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ನೂರು ರನ್‌ಗಳನ್ನು ಗಳಿಸಿದ ಸಾಧನೆ ಸಹ ಟೀಮ್ ಇಂಡಿಯಾ ಪಾಲಾಗಿದೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 10.1 ಓವರ್‌ಗಳಲ್ಲಿ 100 ರನ್ ಪೂರೈಸಿತು.
ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್
ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ತಂಡ ಎಂಬ ಹೆಗ್ಗಳಿಕೆ ಈಗ ಟೀಮ್ ಇಂಡಿಯಾ ಪಾಲಾಗಿದೆ. 2024 ರಲ್ಲಿ ಟೀಂ ಇಂಡಿಯಾ ಆಟಗಾರರು ಇದುವರೆಗೆ 90 ಸಿಕ್ಸರ್‌ಗಳನ್ನು ಬಾರಿಸಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಇದಕ್ಕೂ ಮೊದಲು ಈ ದಾಖಲೆ ಇಂಗ್ಲೆಂಡ್ ಹೆಸರಿನಲ್ಲಿತ್ತು.
ಇಂಗ್ಲೆಂಡ್ ತಂಡ 2022ರ ಕ್ಯಾಲೆಂಡರ್ ವರ್ಷದಲ್ಲಿ 89 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ಹೊಂದಿತ್ತು. ಈಗ ಈ ದಾಖಲೆಯನ್ನು ಟೀಮ್ ಇಂಡಿಯಾ ಅಳಿಸಿ ಹಾಕಿದೆ. ಭಾರತ ತಂಡ ಟೆಸ್ಟ್‌ನಲ್ಲಿ 90 ಸಿಕ್ಸರ್‌ಗಳ ಸಂಖ್ಯೆಯನ್ನು ಮುಟ್ಟುವ ಮೂಲಕ ತನ್ನ ಹೆಸರಿನಲ್ಲಿ ಈ ದಾಖಲೆಯನ್ನು ನಿರ್ಮಿಸಿದೆ. ಭಾರತದ ಆಟಗಾರರು ಕೇವಲ 14 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆಯನ್ನು ಸಾಧಿಸಿದ್ದಾರೆ ಎಂಬುದು ವಿಶೇಷವಾಗಿದೆ.
ಈ ವರ್ಷ ವಿಶೇಷವಾಗಿ, ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಯಶಸ್ವಿ ಜೈಸ್ವಾಲ್ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇಂಗ್ಲೆಂಡ್‌ಗಿಂತ ಕೇವಲ ಒಂದು ವರ್ಷ ಮೊದಲು, ಭಾರತವು 2021 ರಲ್ಲಿ 87 ಸಿಕ್ಸರ್‌ಗಳನ್ನು ಬಾರಿಸಿತ್ತು. 2024ರಲ್ಲಿ ಭಾರತ 90 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಈ ಪಟ್ಟಿಯಲ್ಲಿ 60 ಸಿಕ್ಸರ್ ಬಾರಿಸಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ. ಕಿವೀಸ್ 51 ಸಿಕ್ಸರ್‌ಗಳ ಮೂರು ಮೂರನೇ ಸ್ಥಾನದಲ್ಲಿದೆ. ಭಾರತ ಈ ವರ್ಷ ಇನ್ನು 8 ಪಂದ್ಯಗಳನ್ನು ಆಡುವುದು ಬಾಕಿ ಇದೆ. ಭಾರತ ಸಿಕ್ಸರ್‌ಗಳ ಸಂಖ್ಯೆಯನ್ನು ಈ ಬಾರಿ 100 ದಾಟಿಸುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications